twitter
    For Quick Alerts
    ALLOW NOTIFICATIONS  
    For Daily Alerts

    ರಮೇಶ್ ಜಾರಕಿಹೊಳಿ ನಿವಾಸಕ್ಕೆ ಇಂದ್ರಜಿತ್ ಲಂಕೇಶ್ ಭೇಟಿ

    |

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತಂಡ ತನಿಖೆ ಆರಂಭಿಸಿದ್ದು, ಸಿಡಿ ರೂವಾರಿಗಳ ಬೆನ್ನು ಬಿದ್ದಿದೆ.

    ಈ ನಡುವೆ ಕನ್ನಡ ಚಲನಚಿತ್ರ ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿಡಿ ಪ್ರಕರಣದ ಬಹಳ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿರುವ ಈ ಸಮಯದಲ್ಲಿ ರಮೇಶ್ ಜಾರಕಿಹೊಳಿ ಮನೆಗೆ ಇಂದ್ರಜಿತ್ ಭೇಟಿ ಸಹಜವಾಗಿ ಕುತೂಹಲ ಹೆಚ್ಚಿಸಿದೆ.

    ಸಿಡಿ ಸ್ಫೋಟ ಪ್ರಕರಣ: ಜಾರಕಿಹೊಳಿ ಎಸ್ಐಟಿಗೆ ಕೊಟ್ಟ ನಾಲ್ಕು ಪುಟ ಹೇಳಿಕೆಯಲ್ಲಿ ಬಿಚ್ಚಿಟ್ಟ ರಹಸ್ಯ ಏನು ?

    ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಸುಮಾರು ಅರ್ಧಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಜಾರಕಿಹೊಳಿ ನಿವಾಸದಿಂದ ವಾಪಸ್ ಹೋಗುವಾಗಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ.

    Director Indrajit Lankesh visits Ramesh Jarkiholi house

    ಈ ಹಿಂದೆ ಡ್ರಗ್ಸ್ ಪ್ರಕರಣದ ತನಿಖೆ ವೇಳೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೆಚ್ಚು ಸುದ್ದಿಯಲ್ಲಿದ್ದರು. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ, ಕೆಲವು ಸೆಲೆಬ್ರಿಟಿಗಳು ಡ್ರಗ್ ಜಾಲದಲ್ಲಿ ತೊಡಗಿಕೊಂಡಿದ್ದಾರೆ ಎಂದು ದೂರು ನೀಡಿದ್ದರು.

    ರಮೇಶ್ ಜಾರಕಿಹೊಳಿ ದೂರು ಆಧರಿಸಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಏನಿದೆ?

    Recommended Video

    Kichcha Sudeep's 25Y Celebration : ಬೆಳ್ಳಿಹಬ್ಬದ ಸಂಭ್ರಮದಲ್ಲಿ ಶಿವಣ್ಣ,ರವಿಚಂದ್ರನ್ ಬಗ್ಗೆ ಕಿಚ್ಚ ಹೇಳಿದ್ದೇನು

    ಈಗ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿರುವ ಸಂದರ್ಭದಲ್ಲಿ ಇಂದ್ರಜಿತ್ ಲಂಕೇಶ್ ಭೇಟಿ ಸಹಜವಾಗಿ ಚರ್ಚೆಗೆ ಕಾರಣವಾಗಿದೆ. ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    English summary
    Kannada Film Director and Journalist Indrajit Lankesh visits Ramesh Jarkiholi house at Sadashivanagar , Bengaluru.
    Tuesday, March 16, 2021, 14:58
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X