For Quick Alerts
  ALLOW NOTIFICATIONS  
  For Daily Alerts

  ಧ್ರುವ ಸರ್ಜಾಗೆ ಪ್ರೇಮ್ ಆ್ಯಕ್ಷನ್ ಕಟ್; ಹೊಸ ಸಿನಿಮಾ ಅನೌನ್ಸ್ ಮಾಡಿದ ಆ್ಯಕ್ಷನ್ ಪ್ರಿನ್ಸ್

  |

  ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಇತ್ತೀಚಿಗಷ್ಟೆ 'ಮಾರ್ಟಿನ್' ಸಿನಿಮಾ ಅನೌನ್ಸ್ ಮಾಡಿದ ಬೆನ್ನಲ್ಲೇ ಧ್ರುವ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಧ್ರುವ ಸರ್ಜಾ ನಟನೆಯ 5ನೇ ಸಿನಿಮಾ ಮಾರ್ಟಿನ್ ಗೆ ಅದ್ದೂರಿ ನಿರ್ದೇಶಕ ಎ.ಪಿ ಅರ್ಜುನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೀಗ 6ನೇ ಸಿನಿಮಾ ಘೋಷಣೆಯಾಗಿದ್ದು, ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನ ಮಾಡುವುದು ಖಚಿತವಾಗಿದೆ.

  ಜೋಗಿ ಪ್ರೇಮ್ ಆಗಸ್ಟ್ 24ಕ್ಕೆ ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿ ಕುತೂಹಲ ಮೂಡಿಸಿದ್ದರು. ಪ್ರೇಮ್ ಯಾವ ಸ್ಟಾರ್ ನಟನಿಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಇದೀಗ ಸಿನಿಮಾ ಅನೌನ್ಸ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಅಂದಹಾಗೆ ಪ್ರೇಮ್ ಮತ್ತು ಧ್ರುವ ಸರ್ಜಾ ಸಿನಿಮಾಗೆ ಕೆವಿಎನ್ ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ.

  ಅಂದಹಾಗೆ ಮೊದಲ ಬಾರಿಗೆ ಪ್ರೇಮ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇಬ್ಬರ ಕಾಂಬಿನೇಷನ್ ಸಿನಿಮಾದ ಮೇಲೆ ಅಭಿಮಾನಿಗಳಲ್ಲಿ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಸದ್ಯ ಸಿನಿಮಾ ಮಾತ್ರ ಘೋಷಣೆಯಾಗಿದ್ದು ಚಿತ್ರದ ಟೈಟಲ್ ರಿವೀಲ್ ಆಗಿಲ್ಲ. ಇದೊಂದು ಪಕ್ಕಾ ಮಾಸ್ ಎಂಟಟೈನರ್ ಸಿನಿಮಾ ಆಗಿದೆ ಎನ್ನಲಾಗುತ್ತಿದೆ. ಚಿತ್ರತಂಡ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ ಸದ್ಯದಲ್ಲೇ ಟೈಟಲ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.

  ಇನ್ನು ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾಗೆ ನಾಯಕಿ ಯಾರಾಗ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಕನ್ನಡದ ನಟಿಯೇ ನಾಯಕಿಯಾಗಿ ಧ್ರುವ ಸರ್ಜಾ ಜೊತೆ ನಟಿಸುತ್ತಾರಾ ಅಥವಾ ಪರಭಾಷೆಯ ಸುಂದರಿ ಎಂಟ್ರಿ ಕೊಡ್ತಾರಾ ಎಂದು ಕಾದು ನೋಡಬೇಕು.

  ಧ್ರುವ ನಟನೆಯ ಮಾರ್ಟಿನ್ ಸಿನಿಮಾಗೂ ನಾಯಕಿ ಫಿಕ್ಸ್ ಆಗಿಲ್ಲ. ಅದ್ದೂರಿ ಹುಡುಗನಿಗೆ ನಾಯಕಿ ಯಾಗ್ತಾರೆ ಎನ್ನುವ ಲೆಕ್ಕಾಚಾರ ನಡೆಯುತ್ತಿದೆ. ಅಂದಹಾಗೆ ಈಗಾಗಲೇ ಧ್ರುವ ಮಾರ್ಟಿನ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರಂಭದಲ್ಲೇ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದ್ದು, ಚಿತ್ರದ ಹೈ ವೋಲ್ಟೇಜ್ ಆಕ್ಷನ್ ದೃಶ್ಯವನ್ನು ದಕ್ಷಿಣ ಭಾರತದ ಖ್ಯಾತ ಸಾಹಸ ಕಲಾವಿದರಾದ ರಾಮ್-ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದಾರೆ.

  ಎಪಿ ಅರ್ಜುನ್ ಮತ್ತು ಧ್ರುವ ಕಾಂಬಿನೇಷನ್ ಎರಡನೇ ಸಿನಿಮಾ ಇದಾಗಿದೆ. ಧ್ರುವ ಚೊಚ್ಚಲ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ಎಪಿ ಅರ್ಜುನ್ ಇದೀಗ 9 ವರ್ಷಗಳ ಬಳಿಕ ಮತ್ತೆ ಒಂದಾಗಿದ್ದಾರೆ. ಹಾಗಾಗಿ ಇಬ್ಬರ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

  Director Jogi Prem and Action Prince Dhruva Sarja teaming up for new project

  ಇತ್ತೀಚಿಗಷ್ಟೆ ಮಾರ್ಟಿನ್ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಫಸ್ಟ್ ಲುಕ್ ನಲ್ಲಿ ಕೈಗೆ ಬೇಡಿ ಹಾಕಿದ್ದರೂ, ಸಿಗರೇಟು ಸೇದುತ್ತಾ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಧ್ರುವ ಸಿಕ್ಸ್ ಪ್ಯಾಕ್ ಬಾಡಿ ಪೋಸ್ಟರ್ ನ ತೂಕವನ್ನು ಹೆಚ್ಚಿಸಿದೆ. ಈ ಫಸ್ಟ್ ಲುಕ್ ನೋಡಿದ್ರೆ ಗೊತ್ತಾಗುತ್ತಿದೆ ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವುದು. ಮಾರ್ಟಿನ್ ಸಿನಿಮಾ ಎನ್ನುವುದು ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲೂ ತೆರೆಗೆ ಬರುತ್ತಿದೆ.

  ಮಾರ್ಟಿನ್ ಸಿನಿಮಾಗೂ ಮೊದಲು ಧ್ರುವ ಮತ್ತು ನಿರ್ದೇಶಕ ನಂದಕಿಶೋರ್ ಕಾಂಬಿನೇಷನ್ ನಲ್ಲಿ ದುಬಾರಿ ಸಿನಿಮಾ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಮುಂದಕ್ಕೆ ಹೋಗಿದೆ. ಈ ಸಿನಿಮಾದ ಪೂಜೆ ಕೂಡ ನೆರವೇರಿತ್ತು. ಆದರೆ ದುಬಾರಿ ಆರಂಭದಲ್ಲೇ ನಿಂತು ಹೋಗಿದೆ. ತಡವಾದರೂ ದುಬಾರಿ ಸಿನಿಮಾ ಮಾಡುವುದಾಗಿ ನಿರ್ದೇಶಕ ನಂದಕಿಶೋರ್ ಮತ್ತು ಧ್ರುವ ಸರ್ಜಾ ಹೇಳಿದ್ದಾರೆ.

  English summary
  Director Jogi Prem and Action prince Dhruva Sarja teaming up for new project.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X