For Quick Alerts
  ALLOW NOTIFICATIONS  
  For Daily Alerts

  '777 ಚಾರ್ಲಿ'ಗೆ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಮಂಸೋರೆ ವಿರೋಧ: ಸಿಎಂ ವಿರುದ್ಧ ಆಕ್ರೋಶ!

  |

  ರಕ್ಷಿತ್​ ಶೆಟ್ಟಿಯ ಪ್ಯಾನ್ ಇಂಡಿಯಾ ಸಿನಿಮಾ '777 ಚಾರ್ಲಿ' ವಿಶ್ವದಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿ ಪ್ರಾಣಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವತ: ಸಿ ಎಂ ಬಸವರಾಜ ಬೊಮ್ಮಾಯಿ ಈ ಸಿನಿಮಾ ನೋಡಿ ಕಣ್ಣೀರಿಟ್ಟಿದ್ದರು. ಎಲ್ಲರೂ ಸಿನಿಮಾ ' 777 ಚಾರ್ಲಿ'ಯನ್ನು ಮೆಚ್ಚಿದ್ದರಿಂದ ರಾಜ್ಯ ಸರ್ಕಾರ ತೆರಿಗೆ ವಿನಾಯತಿ ನೀಡಿದೆ.

  '777 ಚಾರ್ಲಿ'ಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಇಂತಹವರಲ್ಲಿ ನಿರ್ದೇಶಕ ಮಂಸೋರೆ ಕೂಡ ಇಬ್ಬರು. ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ನಿರ್ಧಾರವನ್ನು ಪ್ರಶ್ನಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರವನ್ನೂ ಬರೆದಿದ್ದಾರೆ.

  '777 ಚಾರ್ಲಿ' ಜೊತೆಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ್ದಕ್ಕೂ ಕಿಡಿ ಕಾರಿದ್ದಾರೆ. ಇಷ್ಟೇ ಅಲ್ಲದೆ ಕನ್ನಡ ಸಿನಿಮಾಗಳಿಗೆ ನೀಡುತ್ತಿದ್ದ ತೆರಿಗೆ ವಿನಾಯಿತಿ ಕಿತ್ತುಕೊಂಡಿದ್ದಕ್ಕೂ ಆಕ್ರೋಶ ಹೊರ ಹಾಕಿದ್ದಾರೆ. ಅಸಲಿಗೆ ಮಂಸೋರೆ ಬರೆದ ಬಹಿರಂಗ ಪತ್ರದಲ್ಲಿ ಅಂತಹದ್ದೇನಿದೆ? ಎಂದು ತಿಳಿಯಲು ಮುಂದೆ ಓದಿ.

  ಮಂಸೋರೆ ಪತ್ರದಲ್ಲೇನಿದೆ?

  ಮಂಸೋರೆ ಪತ್ರದಲ್ಲೇನಿದೆ?

  "ತಾವು ಕನ್ನಡ ಸಿನೆಮಾ 'ಚಾರ್ಲಿ 777'ಗೆ, ನಿರ್ಮಾಪಕರ ಕೋರಿಕೆಯ ಮೇರೆಗೆ , ಸದರಿ ಸಿನೆಮಾಗೆ 100% ಜಿಎಸ್‌ಟಿಯಿಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗೂ ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ?

  ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ?" ಎಂದು ಪ್ರಶ್ನೆ ಮಾಡಿದ್ದಾರೆ.

  ತೆರಿಗೆ ವಿನಾಯಿತಿ ಕಿತ್ಕೊಂಡಿದ್ದು ಬಿಜೆಪಿ ಸರ್ಕಾರ

  ತೆರಿಗೆ ವಿನಾಯಿತಿ ಕಿತ್ಕೊಂಡಿದ್ದು ಬಿಜೆಪಿ ಸರ್ಕಾರ

  "ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ. ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ, ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ. ಹಾಗೂ ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ 100% ತೆರಿಗೆ ವಿನಾಯಿತಿ ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ?"

  ತೆರಿಗೆ ನೀಡಿದ್ದು ಅಣ್ಣಾವ್ರ ಆಶಯಕ್ಕೆ ವಿರುದ್ಧ

  ತೆರಿಗೆ ನೀಡಿದ್ದು ಅಣ್ಣಾವ್ರ ಆಶಯಕ್ಕೆ ವಿರುದ್ಧ

  "ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾ : ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ. ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ."

  ಕನ್ನಡ ಸಿನಿಮಾಗಳಿಗೆ ತೆರಿಗೆ ನೀಡಿ

  ಕನ್ನಡ ಸಿನಿಮಾಗಳಿಗೆ ತೆರಿಗೆ ನೀಡಿ

  "ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ." ಎಂದು ಸಿ ಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರದಲ್ಲಿ ಕೋರಿದ್ದಾರೆ.

  English summary
  Director Manso Re questions CM Basavaraj Bommai for Tax exemption to 777 Charlie Movie, Know More.
  Sunday, June 19, 2022, 14:17
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X