For Quick Alerts
  ALLOW NOTIFICATIONS  
  For Daily Alerts

  ಪ್ರಭಾಸ್ ಅಥವಾ Jr.NTR ಜೊತೆ ಪ್ರಶಾಂತ್ ನೀಲ್ ಮುಂದಿನ ಸಿನಿಮಾ: ಸ್ಪಷ್ಟನೆ ನೀಡಿದ 'KGF' ನಿರ್ದೇಶಕ

  |

  KGF ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಪ್ರಶಾಂತ್ ನೀಲ್ ತೆಲುಗು ಸ್ಟಾರ್ ನಟನಿಗೆ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಆದರೆ ಆ ನಟ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ.

  ತನ್ನ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ Prashanth Neel | Filmibeat Kannada

  ಇತ್ತೀಚಿಗೆ ನಟ ಪ್ರಭಾಸ್ ಅಥವಾ ಜೂ.ಎನ್ ಟಿ ಆರ್ ಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಇಬ್ಬರಲ್ಲಿ ಯಾವ ನಟನ ಸಿನಿಮಾ ಮೊದಲು ಸೆಟ್ಟೇರಲಿದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಕೆಜಿಎಫ್ ಬಳಿಕ ಯಾರ ಜೊತೆ ಸಿನಿಮಾ ಮಾಡುತ್ತಿದ್ದೀರಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ. ಪ್ರಶಾಂತ್ ನೀಲ್ ಮುಂದಿನ ಸಿನಿಮಾ, ಪ್ರಭಾಸ್ ಜೊತೆಗಾ ಅಥವಾ ಜೂ ಎನ್ ಟಿ ಆರ್ ಜೊತೆನಾ ಎಂದು ಸ್ಪಷ್ಟಪಡಿದ್ದಾರೆ. ಮುಂದೆ ಓದಿ...

  'KGF-2' ಹೊಸ ರಿಲೀಸ್ ಡೇಟ್: ಸಂಕ್ರಾಂತಿಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ

  ಪ್ರಶಾಂತ್ ಮುಂದಿನ ಸಿನಿಮಾ ಯಾರ ಜೊತೆ

  ಪ್ರಶಾಂತ್ ಮುಂದಿನ ಸಿನಿಮಾ ಯಾರ ಜೊತೆ

  ಇದೀಗ ಪ್ರಶಾಂತ್ ನೀಲ್ ಮುಂದಿನ ಸಿನಿಮಾದ ಬಗ್ಗೆ ಎದ್ದಿರುವ ವದಂತಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬ ಕೇಳಿರುವ ಪ್ರಶ್ನೆಗೆ ಪ್ರಶಾಂತ್ ನೀಲ್ ಉತ್ತರ ನೀಡಿದ್ದಾರೆ.

  ಪ್ರಶಾಂತ್ ನೀಲ್ ಪ್ರತಿಕ್ರಿಯೆ

  ಪ್ರಶಾಂತ್ ನೀಲ್ ಪ್ರತಿಕ್ರಿಯೆ

  ಪ್ರಭಾಸ್ ಸಿನಿಮಾಗೆ ನಿರ್ದೇಶನ ಮಾಡುತ್ತಿರಾ ಅಥವಾ ಜೂ.ಎನ್ ಟಿ ಆರ್ ಸಿನಿಮಾನಾ ಎಂದು ಕೇಳಿರುವ ಪ್ರಶ್ನೆಗೆ ಪ್ರಶಾಂತ್ ನೀಲ್, 'ಕೆಜಿಎಫ್-2 ಸಿನಿಮಾ ಮುಗಿದ ಬಳಿಕವೇ ಮುಂದಿನ ಸಿನಿಮಾ ಘೋಷಣೆ ಮಾಡುತ್ತೇನೆ. ಧನ್ಯವಾದಗಳು' ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಮೂಲಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾದ ಬಗ್ಗೆ ನಡೆಯುತ್ತಿದ್ದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

  Jr.NTRಗೆ ಸಿನಿಮಾ ಮಾಡುವ ಸುಳಿವು ನೀಡಿದ್ದ ಪ್ರಶಾಂತ್

  Jr.NTRಗೆ ಸಿನಿಮಾ ಮಾಡುವ ಸುಳಿವು ನೀಡಿದ್ದ ಪ್ರಶಾಂತ್

  ಅಂದ್ಹಾಗೆ ಪ್ರಶಾಂತ್, ಕೆಜಿಎಫ್-2 ಬಳಿಕ ಜೂ ಎನ್ ಟಿ ಆರ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಜೂ ಎನ್ ಟಿ ಆರ್ ಹುಟ್ಟುಹಬ್ಬಕ್ಕೆ ವಿಶ್ ಮಾಡುವ ಮೂಲಕ ಇಬ್ಬರ ಸಿನಿಮಾದ ಬಗ್ಗೆ ಸುಳಿವು ನೀಡಿದ್ದರು. ಆದರೆ ಈ ನಡುವೆ ಪ್ರಭಾಸ್ ಗೂ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಹಾಗಾಗಿ ಅಭಿಮಾನಿಗಳಲ್ಲಿ ಗೊಂದಲ ಮತ್ತು ಕುತೂಹಲ ಮೂಡಿಸಿದೆ.

  'ಕೆಜಿಎಫ್-2' ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿದ ಪ್ರಶಾಂತ್ ನೀಲ್: ಉಡುಪಿ ಬಳಿಕ ಎಲ್ಲಿ ನಡೆಯಲಿದೆ ಚಿತ್ರೀಕರಣ?

  ಕೆಜಿಎಫ್-2 ಕೊನೆಯ ಹಂತದ ಚಿತ್ರೀಕರಣದಲ್ಲಿ ಪ್ರಶಾಂತ್

  ಕೆಜಿಎಫ್-2 ಕೊನೆಯ ಹಂತದ ಚಿತ್ರೀಕರಣದಲ್ಲಿ ಪ್ರಶಾಂತ್

  ಸದ್ಯ ಪ್ರಶಾಂತ್ ನೀಲ್ ಕೆಜಿಎಫ್-2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿದ್ದು ನಟ ಯಶ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಉಡುಪಿಯ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ಚಿತ್ರೀಕರಣವನ್ನು ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಮಾಡಲು ನಿರ್ಧರಿಸಿದೆ. ಈ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಮಾಡಿ ಮುಗಿಸುವ ಪ್ಲಾನ್ ಮಾಡಿದೆ ಕೆಜಿಎಫ್-2 ಟೀಂ.

  English summary
  KGF Director Prashanth Neel Gives Clarification on rumours about directing Prabhas or Jr NTR in his next.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X