'ಮದಗಜ' ಸ್ಕ್ರಿಪ್ಟ್ ಕೆಲಸಕ್ಕೆ ಸಾಥ್ ನೀಡಿದ 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್
Recommended Video
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಭರಾಟೆ ರಿಲೀಸ್ ಆದ ಬೆನ್ನಲ್ಲೆ ಈಗ ಶ್ರೀಮುರಳಿ ಮುಂದಿನ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ರೋರಿಂಗ್ ಸ್ಟಾರ್ ಮದಗಜ ಸಿನಿಮದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟೈಟಲ್ ಮೂಲಕವೆ ಕುತೂಹಲ ಹೆಚ್ಚಿಸಿರುವ ಮದಗಜ ಈಗ ಮತ್ತೊಂದು ವಿಚಾರದ ಮೂಲಕ ಸುದ್ದಿಯಲ್ಲಿದೆ.
ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಮದಗಜ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಕೆಲಸಕ್ಕೆ ಪ್ರಶಾಂತ್ ನೀಲ್ ಕೈ ಜೋಡಿಸಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ಮದಗಜ ಸ್ಕ್ರಿಪ್ಟ್ ಗೆ ಹೊಸ ಸ್ಪರ್ಶ ನೀಡಿದ್ದಾರಂತೆ. ಸ್ಕ್ರಿಪ್ಟ್ ನಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಪ್ರಶಾಂತ್ ಮಾಡಿದ್ದಾರಂತೆ. ಮದಗಜ ಚಿತ್ರಕ್ಕೆ ಆಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೆ ಮಹೇಶ್ ಸ್ಕ್ರಿಪ್ಟ್ ಕೆಲಸ ಮುಗಿಸಿದ್ದಾರೆ. ಆದರರೀಗ ಪ್ರಶಾಂತ್ ನೀಲ್ ಕಥೆಯಲ್ಲಿ ಚಿಕ್ಕ ಪಟ್ಟ ಬದಲಾವಣೆ ಮಾಡಿದ್ದಾರೆ.
ಪ್ರಶಾಂತ್ ನೀಲ್ ಮತ್ತು ಶ್ರೀಮುರುಳಿ ಉಗ್ರಂ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಸತತ ಸೋಲಿನಿಂದ ಕಂಗೆಟ್ಟಿದ್ದ ಮುರಳಿಯನ್ನು ಗೆಲ್ಲಿಸಿದ್ದು ಇದೆ ಪ್ರಶಾಂತ್. ಈಗ ಮದಗಜ ಸ್ಕ್ರಿಪ್ಟ್ ಕೆಲಸಕ್ಕು ಸಹಾಯ ಮಾಡಿದ್ದಾರೆ. ಕೆಜಿಎಫ್-2 ಚಿತ್ರದ ಚಿತ್ರೀಕರಣದ ನಡುವೆಯು ಪ್ರಶಾಂತ್ ಮದಗಜನ ಬೆನ್ನಿಗೆ ನಿಂತಿರುವುದು ಚಿತ್ರತಂಡಕ್ಕೆ ಸಂತಸ ತಂದಿದೆ.

ಈಗಾಗಲೆ ಮದಗಜ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಟೈಟಲ್ ಮೂಲಕ ಕುತೂಹಲ ಮೂಡಿಸಿದ್ದ ಚಿತ್ರಕ್ಕೆ ಈಗ ಕೆಜಿಎಫ್ ನಿರ್ದೇಶಕರ ಸಾಥ್ ಇದೆ ಅಂದ್ಮೇಲೆ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಡಿಸೆಂಬರ್ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆ ಇದೆ.


Click it and Unblock the Notifications











