For Quick Alerts
  ALLOW NOTIFICATIONS  
  For Daily Alerts

  'ಕರಿಯ ಮಾಡ್ಬೇಕಾದ್ರೆ ನಾನು ಯಾವ್ ಪುಡಂಗುನೂ ಅಲ್ಲಾ, ಕೊಂಬು ಇರ್ಲಿಲ್ಲ'

  |

  ಶನಿವಾರ ಸಂಜೆ ಇಂದ್ರಜಿತ್ ಲಂಕೇಶ್ ಮತ್ತು ಉಮಾಪತಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ನಟ ದರ್ಶನ್ ಪ್ರತಿಕ್ರಿಯೆ ನೀಡುವ ವೇಳೆ ನಿರ್ದೇಶಕ ಪ್ರೇಮ್ ಹೆಸರು ಉಲ್ಲೇಖಿಸಿ ಬೈಯ್ದರು. ದರ್ಶನ್ ಹೇಳಿಕೆಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದು, ಫೇಸ್‌ಬುಕ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

  ಉಮಾಪತಿ ಅವರನ್ನು ಪರಿಚಯ ಮಾಡಿದ್ದು ಪ್ರೇಮ್. ಯಾವುದೇ ನಿರ್ಮಾಪಕರಿಗೆ ನಾನು 70 ದಿನ ಕಾಲ್‌ಶೀಟ್ ಕೊಡ್ತೇನೆ ಅಷ್ಟೇ ಎಂದು ಹೇಳಿದ್ದೆ. ಆದರೆ ಮರುದಿನ ಪ್ರೇಮ್‌ಗೋಸ್ಕರ ನಿರ್ಧಾರ ಬದಲಿಸಿದ ದರ್ಶನ್. 100 ದಿನ ಕಾಲ್‌ಶೀಟ್ ಕೊಟ್ಟರು ಅಂತ ನ್ಯೂಸ್ ಬಂತು. ಉಮಾಪತಿ ಹಾಗೂ ಪ್ರೇಮ್ ಇಬ್ಬರನ್ನು ಕರೆದು ಕೇಳಿದೆ. ಇಬ್ಬರು ನಾನು ಹೇಳಿಲ್ಲ ಅಂದ್ರು. ನಾನು ಈ ಚಿತ್ರ ಮಾಡಲ್ಲ ಅಂದೆ. ಪ್ರೇಮ್ ಏನ್ ದೊಡ್ಡ ಪುಡುಂಗಾ, ಕೊಂಬೈತಾ ಎಂದು ಹೇಳಿದರು.

  ನಟ ದರ್ಶನ್ ಗಂಡಸ್ತನ ಸವಾಲಿಗೆ ಇಂದ್ರಜಿತ್ ತಿರುಗೇಟುನಟ ದರ್ಶನ್ ಗಂಡಸ್ತನ ಸವಾಲಿಗೆ ಇಂದ್ರಜಿತ್ ತಿರುಗೇಟು

  ಅದಕ್ಕೆ ಪ್ರತಿಕ್ರಿಯಿಸಿರುವ ಪ್ರೇಮ್, ''ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ..ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ.

  ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ..

  assualt-allegations-director-prem-react-on-challening-star-darshan-controversy
  ವೈರಲ್ ಆಯ್ತು ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಫೋಟೋ | Darshan Hotel Controversy | Filmibeat Kannada

  ದರ್ಶನ್ ಅವ್ರೆ ನಿರ್ದೇಶಕರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ... Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ'' ಎಂದು ಉತ್ತರಿಸಿದ್ದಾರೆ.

  English summary
  Director Prem reaction to Darshan Comments about him

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X