ರಾಣಾ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ ನಿರ್ದೇಶಕ ಪ್ರೇಮ್
ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇದೇ ಖುಷಿಯಲ್ಲಿ ರಾಣಾಗೆ ವಿಶೇಷ ಉಡುಗೊರೆಯೂ ಸಿಕ್ಕಿದೆ. ನಿರ್ದೇಶಕ ಪ್ರೇಮ್ ಕಡೆಯಿಂದ ಭರ್ಜರಿ ರಾಣಾಗೆ ಸಖತ್ ಗಿಫ್ಟ್ ಸಿಕ್ಕಿದೆ. ಹೌದು, ರಾಣಾ ಅಭಿನಯದ ಮೊದಲ ಸಿನಿಮಾ ಏಕ್ ಲವ್ ಯಾ ಚಿತ್ರದ ಟೀಸರ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ.
ರಾಣಾ, ಏಕ್ ಲವ್ ಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಲಾಕ್ ಡೌನ್ ನಿಂದ ಚಿತ್ರೀಕರಣಕ್ಕೆ ಬ್ರೇಕ್ ಹಾಕಿದ್ದ ಸಿನಿಮಾತಂಡ ಇದೀಗ ಮತ್ತೆ ಶೂಟಿಂಗ್ ಗೆ ಮರಳಿದೆ. ಸದ್ಯ ಚಿತ್ರತಂಡ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿದೆ.
ಈ ನಡುವೆ ಪ್ರೇಮ್ ಚಿತ್ರದ ಟೀಸರ್ ಅನ್ನು ರಿಲೀಸ್ ಮಾಡಿ ರಾಣಾ ಹುಟ್ಟುಹಬ್ಬದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಚಿತ್ರದ ಟೀಸರ್ ರಿಲೀಸ್ ಮಾಡಿ ನಿರ್ದೇಶಕ ಪ್ರೇಮ್, ರಾಣಾಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಚಿತ್ರದ ಹಾಡುಗಳು ಸದ್ಯದಲ್ಲೇ ನಿಮ್ಮ ಬರಲಿದೆ ಎಂದು ಹೇಳಿದ್ದಾರೆ.

ರೊಮ್ಯಾಂಟಿಕ್ ಕಥೆಯುಳ್ಳು ಈ ಸಿನಿಮಾದಲ್ಲಿ ರಾಣಾ ಎರಡು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಣಾಗೆ ನಾಯಕಿಯಾಗಿ ರೇಷ್ಮಾ ನಾಣಯ್ಯ ನಟಿಸುತ್ತಿದ್ದಾರೆ. ಚಿತ್ರದಲ್ಲಿ ನಟಿ ರಚಿತಾ ರಾಮ್ ಕೂಡ ಅಭಿನಯಿಸುತ್ತಿದ್ದಾರೆ.
ಇನ್ನೂ ನಟಿ ರಕ್ಷಿತಾ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಮದುವೆಯ ಬಳಿಕ ಮೊದಲ ಬಾರಿಗೆ ರಕ್ಷಿತಾ ಬಣ್ಣ ಹಚ್ಚಿರುವುದು ವಿಶೇಷ. ಸದ್ಯ ಬೆಂಗಳೂರು ಮತ್ತು ಊಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಹಾಡುಗಳು ರಿಲೀಸ್ ಆಗಲಿದ್ದು, ಸಿನಿಮಾ ಮುಂದಿನ ವರ್ಷ ತೆರೆಗೆ ಬರಲಿದೆ.


Click it and Unblock the Notifications











