For Quick Alerts
  ALLOW NOTIFICATIONS  
  For Daily Alerts

  ಅಕ್ಟೋಬರ್‌ನಲ್ಲಿ ಯುವ ಫ್ಯಾನ್ಸ್‌ಗೆ ಸಿಹಿಸುದ್ದಿ: 'ರಾಘವೇಂದ್ರ ಸ್ಟೋರ್ಸ್' ರಿಲೀಸ್ ಯಾವಾಗ?

  |

  'ಬೆಳ್ಳಿ ಪರದೆಗೆ ಹೊಸದೊಂದು ಪರ್ವ' ಎಂದು ಹೇಳಿ 4 ತಿಂಗಳ ಹಿಂದೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಕ್ರೇಜಿ ಪ್ರಾಜೆಕ್ಟ್ ಘೋಷಣೆ ಮಾಡಿತ್ತು. ಡಾ. ರಾಜ್‌ಕುಮಾರ್ ಮೊಮ್ಮಗ ಯುವ ರಾಜ್‌ಕುಮಾರ್‌ನ ಚಿತ್ರರಂಗದಲ್ಲಿ ಲಾಂಚ್ ಮಾಡುವ ಜವಾಬ್ದಾರಿಯನ್ನು ಸಂಸ್ಥೆ ವಹಿಸಿಕೊಂಡಿದೆ. ಸಂತೋಷ್ ಆನಂದ್‌ರಾಮ್ ಈ ಸಿನಿಮಾ ನಿರ್ದೇಶನ ಮಾಡುವುದು ಪಕ್ಕಾ ಆಗಿದೆ. ಆದರೆ ಸಿನಿಮಾ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

  ಭರ್ಜರಿ ಫೋಟೊಶೂಟ್ ಮಾಡಿ ಯುವ ರಾಜ್‌ಕುಮಾರ್ ಚೊಚ್ಚಲ ಚಿತ್ರವನ್ನು ಹೊಂಬಾಳೆ ಸಂಸ್ಥೆ ಘೋಷಣೆ ಮಾಡಿತ್ತು. ಆದರೆ ಆ ನಂತರ 'ಯುವ01' ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಸಿನಿಮಾ ಯಾವಾಗ ಸೆಟ್ಟೇರುತ್ತೆ, ಟೈಟಲ್ ಏನು ಅನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಉತ್ತರಿಸಿದ್ದಾರೆ. ಜೊತೆಗೆ ತಮ್ಮದೇ ನಿರ್ದೇಶನದಲ್ಲಿ ನವರಸ ನಾಯಕ ಜಗ್ಗೇಶ್ ನಟಿಸಿರುವ 'ರಾಘವೇಂದ್ರ ಸ್ಟೋರ್ಸ್' ಸಿನಿಮಾ ರಿಲೀಸ್ ಡೇಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.

  ಗಜನ ಮುಂದೆ ಅಪ್ಪು ಪ್ರತ್ಯಕ್ಷ: ಚತುರ್ಥಿಗೆ 'ಗಂಧದ ಗುಡಿ' ಹೊಸ ಪೋಸ್ಟರ್!ಗಜನ ಮುಂದೆ ಅಪ್ಪು ಪ್ರತ್ಯಕ್ಷ: ಚತುರ್ಥಿಗೆ 'ಗಂಧದ ಗುಡಿ' ಹೊಸ ಪೋಸ್ಟರ್!

  'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಾಚಾರಿ', 'ರಾಜಕುಮಾರ' ಹಾಗೂ 'ಯುವರತ್ನ' ರೀತಿಯ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿ ಸಂತೋಷ್ ಆನಂದ್ ರಾಮ್ ಗೆದ್ದಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಹಿರಿಯ ವಿನಯ್ ಈಗಾಗಲೇ ಚಿತ್ರರಂಗದಲ್ಲಿ ಗುರ್ತಿಸಿಕೊಂಡಿದ್ದಾರೆ. ಕಿರಿಯ ಮಗನ ಯುವರಾಜ್‌ ಆರಂಗೇಟ್ರಂ ಬಗ್ಗೆ ಭಾರೀ ಕುತೂಹಲ ಇದೆ. ಆನಂದ್‌ರಾಮ್- ಹೊಂಬಾಳೆ ಬ್ಯಾನರ್ ಜೊತೆ ಯುವ ಕೈ ಜೋಡಿಸಿರುವುದು ಸಿನಿಮಾ ಮೇಲಿನ ನಿರೀಕ್ಷೆ ಎವರೆಸ್ಟ್ ಎತ್ತರಕ್ಕೆ ಏರುವಂತೆ ಮಾಡಿದೆ.

  ಟ್ವಿಟರ್‌ನಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ಚತುರ್ಥಿ!ಟ್ವಿಟರ್‌ನಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ಚತುರ್ಥಿ!

  ಅಕ್ಟೋಬರ್‌ನಲ್ಲಿ 'ಯುವ01' ಅಪ್‌ಡೇಟ್

  ಅಕ್ಟೋಬರ್‌ನಲ್ಲಿ 'ಯುವ01' ಅಪ್‌ಡೇಟ್

  ಯುವ ನಟಿಸಬೇಕಿದ್ದ 'ಯುವ ರಣಧೀರ ಕಂಠೀರವ' ಸಿನಿಮಾ ಕಾರಣಾಂತರಗಳಿಂದ ನಿಂತು ಹೋಗಿದೆ. ಹಾಗಾಗಿ ಹೊಂಬಾಳೆ ಸಂಸ್ಥೆ ಯುವ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದೆ. ನಿರ್ದೇಶಕ ಸಂತೋಷ್ ಆನಂದ್‌ ರಾಮ್ ಸಾರಥ್ಯದಲ್ಲಿ 'ಯುವ01' ಸಿನಿಮಾ ಮೂಡಿ ಬರಲಿದೆ. ಅಪ್ಪು ಅಗಲಿಕೆಯ ನಂತರ ಯುವಗೆ ಇರುವ ಕ್ರೇಜ್‌ಗೆ ತಕ್ಕಂತೆ ಜಬರ್ದಸ್ತ್ ಕಥೆ ಸಿದ್ಧವಾಗ್ತಿದೆ. ಅಕ್ಟೋಬರ್‌ನಲ್ಲಿ ಸಿನಿಮಾ ಬಗ್ಗೆ ಅಪ್‌ಡೇಟ್ ಕೊಡುವುದಾಗಿ ಇದೀಗ ಸಂತೋಷ್ ಆನಂದ್‌ರಾಮ್ ಹೇಳಿದ್ದಾರೆ.

  ಯುವ ರಾಜ್‌ಕುಮಾರ್ ಅಭಿಮಾನಿಗಳ ಸಂಘ

  ಯುವ ರಾಜ್‌ಕುಮಾರ್ ಅಭಿಮಾನಿಗಳ ಸಂಘ

  ಯುವ ರಾಜ್‌ಕುಮಾರ್ ನಟನೆಯ ಯಾವುದೇ ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಆದರೂ ಈಗಾಗಲೇ ಅವರ ಹೆಸರಲ್ಲಿ ಅಭಿಮಾನಿ ಸಂಘಗಳು ಹುಟ್ಟಿಕೊಂಡಿದೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಯುವ ರಾಜ್‌ಕುಮಾರ್ ಅವರಲ್ಲಿ ಅಪ್ಪುನ ನೋಡುತ್ತಿದ್ದಾರೆ. ಚಿತ್ರರಂಗದಲ್ಲಿ ಸ್ಟಾರ್ ಆಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ಸಹಜವಾಗಿಯೇ 'ಯುವ01' ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ.

  'ರಾಘವೇಂದ್ರ ಸ್ಟೋರ್ಸ್' ರಿಲೀಸ್ ಯಾವಾಗ?

  'ರಾಘವೇಂದ್ರ ಸ್ಟೋರ್ಸ್' ರಿಲೀಸ್ ಯಾವಾಗ?

  ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಜಗ್ಗೇಶ್ ನಟನೆಯ 'ರಾಘವೇಂದ್ರ ಸ್ಟೋರ್ಸ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರಕ್ಕೂ ಸಂತೋಷ್ ಆನಂದ್‌ರಾಮ್ ಆಕ್ಷನ್ ಕಟ್ ಹೇಳಿದ್ದಾರೆ. ವರಲಕ್ಷ್ಮಿ ಹಬ್ಬದ ಸಂಭ್ರಮದಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್ ಡೇಟ್ ಮುಂದೂಡಲಾಗಿತ್ತು. ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡ್ತೀವಿ ಎಂದು ನಿರ್ದೇಶಕರು ಹೇಳಿದ್ದಾರೆ. 'ರಾಘವೇಂದ್ರ ಸ್ಟೋರ್ಸ್' ಚಿತ್ರದಲ್ಲಿ ಜಗ್ಗೇಶ್ ಅಡುಗೆ ಭಟ್ಟನ ಪಾತ್ರ ಮಾಡಿದ್ದಾರೆ.

  ಶಿವಣ್ಣನ ಚಿತ್ರಕ್ಕೆ ಆನಂದ್‌ರಾಮ್ ಆಕ್ಷನ್ ಕಟ್

  ಶಿವಣ್ಣನ ಚಿತ್ರಕ್ಕೆ ಆನಂದ್‌ರಾಮ್ ಆಕ್ಷನ್ ಕಟ್

  ಯುವ ರಾಜ್‌ಕುಮಾರ್‌ ಸಿನಿಮಾ ನಂತರ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್‌ಗೆ ಆನಂದ್‌ರಾಮ್ ಆಕ್ಷನ್ ಕಟ್ ಹೇಳಲಿದ್ದಾರೆ. ಈಗಾಗಲೇ ಶಿವಣ್ಣನಿಗಾಗಿ ಒಂದೊಳ್ಳೆ ಕಥೆ ಸಿದ್ಧಪಡಿಸುವುದರಲ್ಲಿ ಸಂತು ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಕೂಡ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡುವ ಸಾಧ್ಯತೆಯಿದೆ. ಅಪ್ಪು ನಟನೆಯ 'ರಾಜಕುಮಾರ' ನಂತರ ಶಿವಣ್ಣನ ಜೊತೆ ಸಿನಿಮಾ ಮಾಡುವ ಬಗ್ಗೆ ಆನಂದ್‌ರಾಮ್ ಹೇಳಿದ್ದರು. ಶೀಘ್ರದಲ್ಲೇ ಅದಕ್ಕೆ ಕಾಲ ಕೂಡಿ ಬರಲಿದೆ.

  English summary
  Director Santhosh Anandram Gives a Clarity on Yuva01 Update. Know More.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X