"ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ದೇಶವೇ ಬೆರಗಾಗಿ ನೋಡುತ್ತಿದೆ"; ಉಪೇಂದ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಒಟ್ಟು 13 ಜನ ಆರೋಪಿಗಳನ್ನು ಕಸ್ಟಡಿಗೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ರಮ್ಯಾ, ಸುದೀಪ್ ಬಿಟ್ಟು ಕನ್ನಡದ ಸ್ಟಾರ್ ನಟ-ನಟಿಯರು ಮಾತನಾಡುತ್ತಿಲ್ಲ. ಇದೀಗ ನಟ ಉಪೇಂದ್ರ ತಮ್ಮದೇ ಶೈಲಿಯಲ್ಲಿ ಪೊಲೀಸರ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಉಪೇಂದ್ರ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. "ದರ್ಶನ್ - ರೇಣುಕಾ ಸ್ವಾಮಿ - ಪಾರದರ್ಶಕ ವಿಚಾರಣೆ ... ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ."

Director Upendra reacts On Actor Darshan s arrest case police investigation

"ಈ ಹೈ ಪ್ರೊಫೈಲ್ ಕೇಸ್‌ನ ವಿಚಾರಣೆಯಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ."

"ಏಕೆಂದರೆ...... ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು" ಎಂದು ಉಪೇಂದ್ರ ಆಗ್ರಹಿಸಿದ್ದಾರೆ.

"ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ." ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.

ಉಪೇಂದ್ರ ಪೊಲೀಸ್ ತನಿಖೆಯ ಬಗ್ಗೆ ಎಲ್ಲರಿಗೂ ಗೊತ್ತಾಗಬೇಕು ಎಂದಿದ್ದಾರೆ. ಆದರೆ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿಲ್ಲ. ಇನ್ನು ತಮ್ಮ ಪೋಸ್ಟ್ ಅನ್ನು ಪೊಲೀಸ್ ಇಲಾಖೆ, ಸಿಎಂ, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಸುದ್ದಿ ವಾಹಿನಿಗಳ ಸೋಶಿಯಲ್ ಮೀಡಿಯಾ ಖಾತೆಗಳಿಗೆ ಟ್ಯಾಗ್ ಮಾಡಿದ್ದಾರೆ.

More from Filmibeat

English summary
Real stare Upendra Talks about Darshan arrest case;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X