Just In
Don't Miss!
- News
ಶೌರ್ಯ ಪ್ರಶಸ್ತಿಗೆ ಚಿಕ್ಕಾಸೂ ಬೆಲೆ ನೀಡದ ಕೇರಳ ಸರಕಾರ; ವೃದ್ಧೆಯ ದಶಕಗಳ ಹೋರಾಟ
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Automobiles
ಒಂದೇ ವರ್ಷದಲ್ಲಿ 20ಕ್ಕೂ ಹೆಚ್ಚು ಹೊಸ ಬೈಕ್ ಶೋರೂಂ ತೆರೆದ ಬೆನೆಲ್ಲಿ ಇಂಡಿಯಾ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬುಲೆಟ್ ಪ್ರಕಾಶ್ ಬಗ್ಗೆ ಹರಿದಾಡುತ್ತಿದೆ ವದಂತಿ: ಸತ್ಯವೇನು?
ಅನಾರೋಗ್ಯದ ಕಾರಣ ಹಾಸ್ಯ ಬುಲೆಟ್ ಪ್ರಕಾಶ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡುತ್ತಿವೆ.
ಬುಲೆಟ್ ಪ್ರಕಾಶ್ ಅವರು ಬದುಕಿದ್ದು, ಅವರು ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೆಲವರು ಈಗಾಲಗೇ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಆದರೆ ಅದು ಸುಳ್ಳಾಗಿದೆ. ಈ ಬಗ್ಗೆ ಆಸ್ಪತ್ರೆ ಸಹ ಹೇಳಿಕೆ ಬಿಡುಗಡೆ ಮಾಡಿದೆ.

ಆಸ್ಪತ್ರೆ ಬಿಡುಗಡೆ ಮಾಡಿರುವ ಪ್ರೆಸ್ ನೋಟ್
ಬುಲೆಟ್ ಪ್ರಕಾಶ್ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಫೋರ್ಟಿಸ್ ಆಸ್ಪತ್ರೆ, ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಐದು ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದೆ ಎಂದು ಆಸ್ಪತ್ರೆ ಪ್ರೆಸ್ ನೋಟ್‌ನಲ್ಲಿ ಹೇಳಿದೆ.

ದುನಿಯಾ ವಿಜಯ್ ಮನವಿ ಮಾಡಿದ್ದಾರೆ
ಆಸ್ಪತ್ರೆಗೆ ಧಾವಿಸಿರುವ ನಟ ಹಾಗೂ ಬುಲೆಟ್ ಪ್ರಕಾಶ್ ಗೆಳೆಯ ದುನಿಯಾ ವಿಜಯ್ ಸಹ ಇದೇ ಮನವಿಯನ್ನು ಮಾಡಿದ್ದು, ಬುಲೆಟ್ ಪ್ರಕಾಶ್ ಬದುಕಿದ್ದಾರೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಯಾರೂ ಸಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಬುಲೆಟ್ ಪುತ್ರ ಸಹ ಮಾತನಾಡಿದ್ದಾರೆ
ಬುಲೆಟ್ ಪ್ರಕಾಶ್ ಪುತ್ರ ಸಹ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಮ್ಮ ತಂದೆಗೆ ಯಾವುದೇ ಸಮಸ್ಯೆ ಇಲ್ಲ, ಅವರು ಅಂದೂ ಬುಲೆಟ್, ಇಂದೂ ಬುಲೆಟ್ , ಅವರು ಶೀಘ್ರವವೇ ಗುಣಮುಖವಾಗಲಿದ್ದಾರೆ ಎಂದು ಹೇಳಿದ್ದಾರೆ.

ಕಿಡ್ನಿ ಮತ್ತು ಲಿವರ್ ಫೇಲ್ಯುರ್
ಬುಲೆಟ್ ಪ್ರಕಾಶ್ ಅವರು ಕಿಡ್ನಿ ಮತ್ತು ಲಿವರ್ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರು ಮಾರ್ಚ್ 31 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯು ನಲ್ಲಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.