twitter
    For Quick Alerts
    ALLOW NOTIFICATIONS  
    For Daily Alerts

    ಕೊರೊನಾ ತಡೆಯುವ ಉದ್ದೇಶ ಬಿಟ್ಟರೆ ಬೇರೇನೂ ಇಲ್ಲ; ಪುನೀತ್ ಅಸಮಾಧಾನಕ್ಕೆ ಸುಧಾಕರ್ ಪ್ರತಿಕ್ರಿಯೆ

    |

    'ಎಲ್ಲಾ ಕ್ಷೇತ್ರಗಳಿಗೂ ನೂತನ ಕೊರೊನಾ ತಡೆ ಮಾರ್ಗಸೂಚಿ ಅನ್ವಯವಾಗಲಿದೆ. ಇದರ ಹಿಂದೆ ಕೇವಲ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶವಿದೆಯೇ ಹೊರತು, ಬೇರೇನೂ ಇಲ್ಲ ಎಂದು ಕೊರೊನಾ ಹೊಸ ನಿಯಮದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

    Recommended Video

    ಪುನೀತ್ ರಾಜ್ ಕುಮಾರ್ ಮನವಿಗೆ ಸಚಿವ ಸುಧಾಕರ್ ಖಡಕ್ ಪ್ರತಿಕ್ರಿಯೆ | Filmibeat Kannada

    ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಕಾರಣ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಹೊಸ ಕೊರೊನಾ ನಿಯಮ ಬಿಡುಗಡೆ ಮಾಡಿದೆ. ಈಗತಾನೆ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಸರ್ಕಾರದ ನಿರ್ಧಾರ ದೊಡ್ಡ ಶಾಕ್ ನೀಡಿದೆ.

    ಚಿತ್ರಮಂದಿರಗಳಲ್ಲಿ ಮತ್ತೆ 50 ಪರ್ಸೆಂಟ್: ಪುನೀತ್ ರಾಜ್ ಕುಮಾರ್ ವಿರೋಧಚಿತ್ರಮಂದಿರಗಳಲ್ಲಿ ಮತ್ತೆ 50 ಪರ್ಸೆಂಟ್: ಪುನೀತ್ ರಾಜ್ ಕುಮಾರ್ ವಿರೋಧ

    ಚಿತ್ರಮಂದಿರಗಳಲ್ಲಿ ಮತ್ತೆ ಶೇ.50 ಆಸನ ಭರ್ತಿಗೆ ಅವಕಾಶ ನೀಡಿರುವುದು ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿದೆ. ಏಪ್ರಿಲ್ 1ಕ್ಕೆ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ.

    Dr.K Sudhakar reaction to Puneeth rajkumar requests on 100 percent occupancy in theater

    ಈ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯೆ ನೀಡಿ ಬೇಸರ ವ್ಯಕ್ತ ಪಡಿಸಿದ್ದರು. ಚಿತ್ರಮಂದಿರಗಳಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಇಂದು (ಏಪ್ರಿಲ್ 3) ಸದಾಶಿವ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಸುಧಾಕರ್, ಎಲ್ಲಾ ವಲಯಗಳ ಬಗ್ಗೆಯೂ ಗೌರವವಿದೆ. ಎಲ್ಲಾ ಕ್ಷೇತ್ರಗಳಿಗೂ ನೂತನ ಕೊರೊನಾ ತಡೆ ಮಾರ್ಗಸೂಚಿ ಅನ್ವಯವಾಗಲಿದೆ. ಇದರ ಹಿಂದೆ ಕೇವಲ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶವಿದೆಯೇ ಹೊರತು, ಬೇರೇನೂ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಬೆರೆಸುವ ಅವಶ್ಯತೆ ಇಲ್ಲ ಎಂದಿದ್ದಾರೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರ್ಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಬಗ್ಗೆ ಪುನೀತ್ ರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರತಂಡ ಅಸಮಾಧಾನ ಹೊರಹಾಕುತ್ತಿದ್ದಾರೆ.

    English summary
    Dr.K Sudhakar reaction to Puneeth rajkumar requests on 100 percent occupancy in theater.
    Saturday, April 3, 2021, 14:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X