»   » ಡಾ.ರಾಜ್ ಹುಟ್ಟುಹಬ್ಬ ನಿಮಿತ್ತ ವಿಶೇಷ ಕಾರ್ಯಕ್ರಮ

ಡಾ.ರಾಜ್ ಹುಟ್ಟುಹಬ್ಬ ನಿಮಿತ್ತ ವಿಶೇಷ ಕಾರ್ಯಕ್ರಮ

Posted By:
Subscribe to Filmibeat Kannada

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅವರ 87ನೇ ಜನ್ಮ ದಿನಾಚರಣೆ ಪ್ರಯುಕ್ತ ಏಪ್ರಿಲ್ 24 ರಂದು ಸಂಜೆ 6.15 ಗಂಟೆಗೆ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ವಾರ್ತಾ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಅವರು ಸಮಾರಂಭದ ಉದ್ಫಾಟನೆಯನ್ನು ನೆರವೇರಿಸಲಿದ್ದಾರೆ. ಖ್ಯಾತ ಸಾಹಿತಿಗಳಾದ ಡಾ. ಕೆ. ಮರುಳಸಿದ್ದಪ್ಪ ಅವರು ಕಾರ್ಯಕ್ರಮದ ಪ್ರಧಾನ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ರಾಜ್‌ಕುಮಾರ್ ಅವರು ನಟಿಸಿರುವ ಚಿತ್ರಗಳ ಗೀತೆಗಳನ್ನು ಸಂಗೀತ ಸಂಯೋಜಕ ಶಬ್ಬೀರ್ ಹಾಗೂ ತಂಡದವರು ಪ್ರಸ್ತುತಪಡಿಸುವರು. [ಅಣ್ಣಾವ್ರ ಹುಟ್ಟುಹಬ್ಬ ವಿಶೇಷ ರಸಮಂಜರಿ ಕಾರ್ಯಕ್ರಮ]

Dr Rajkumar 87th birthday special programme

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾರಿಗೆ ಸಚಿವ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಆದ ರಾಮಲಿಂಗಾರೆಡ್ಡಿ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ. ಮೋಹನ್, ಹಿರಿಯ ಚಿತ್ರೋದ್ಯಮಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. [ಡಾ. ರಾಜ್ ನಟಿಸಿದಂತಹ ಕೌಟುಂಬಿಕ ಚಿತ್ರಗಳು ಮರಳಿ ಬರಬಹುದೇ?]

ವಿಧಾನ ಪರಿಷತ್ ಸದಸ್ಯೆ ಡಾ. ಜಯಮಾಲಾ ರಾಮಚಂದ್ರ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಬೆಂಗಳೂರಿನ ಶ್ರೀಕಂಠೀರವ ಸ್ಟುಡಿಯೋ ಅಧ್ಯಕ್ಷೆ ವಿಜಯಲಕ್ಷ್ಮಿ ಅರಸು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. (ಫಿಲ್ಮಿಬೀಟ್ ಕನ್ನಡ)

English summary
Kannada Matinee Idol Dr Rajkumar's 87th birth annivarsay celebrating on 24th of April all over Karnataka in grand way. Information and Broadcasting department set out a special programmes in Jnana Jyoti Auditorium, Bengaluru on 24th April at 6.15 p.m.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada