For Quick Alerts
  ALLOW NOTIFICATIONS  
  For Daily Alerts

  ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ರಾಜ್ ರ 88ನೇ ಜನ್ಮದಿನದ ಆಚರಣೆ

  By Suneetha
  |

  ಏಪ್ರಿಲ್ 24 ರಂದು ಕನ್ನಡ ಚಿತ್ರರಂಗದ ಕಣ್ಮಣಿ ವರನಟ ಡಾ.ರಾಜ್ ಕುಮಾರ್ ಅವರ 88ನೇ ವರ್ಷದ ಜನ್ಮದಿನಾಚರಣೆಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 6 ಘಂಟೆಗೆ ಆಯೋಜಿಸಲಾಗಿದೆ.

  ಕರ್ನಾಟಕ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಆಶ್ರಯದಲ್ಲಿ ದಿವಂಗತ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಆಚರಣೆಯನ್ನು ಏಪ್ರಿಲ್ 24 ರಂದು ಸಂಜೆ 6 ಘಂಟೆಗೆ ನಗರದ ಜೆ.ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.[ಡಾ.ರಾಜ್ ಹುಟ್ಟುಹಬ್ಬದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ]

  ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಮೂಲಭೂತ ಸೌಲಭ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಖಾತೆ ಸಚಿವ ಆರ್ ರೋಷನ್ ಬೇಗ್ ನೆರವೇರಿಸಲಿದ್ದಾರೆ.

  ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್, ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.[ಕಲಾರತ್ನ ಡಾ.ರಾಜ್ ಅಭಿನಯದ ಅತ್ಯುತ್ತಮ 10 ಚಿತ್ರಗಳು]

  ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಆರ್.ವಿ.ದೇವರಾಜ್ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಚಲನಚಿತ್ರ ನಿರ್ಮಾಪಕಿ ಹಾಗೂ ಡಾ.ರಾಜ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ.

  ಇನ್ನುಳಿದಂತೆ ಕನ್ನಡ ಚಿತ್ರರಂಗದ ಪ್ರಮುಖರಾದ ನಟ ಶ್ರೀನಾಥ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಕೃತಿ ಡಾ.ರಾಜ್ ಕುಮಾರ್ ಸಮಗ್ರ ಚರಿತ್ರೆಯ ಲೇಖಕ ದೊಡ್ಡ ಹುಲ್ಲೂರು ರುಕ್ಕೋಜಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.[ಅನುಪಮ, ನವರಂಗ್ ಮತ್ತು ಉಮಾ ಚಿತ್ರಮಂದಿರದಲ್ಲಿ 'ಬಬ್ರುವಾಹನ']

  ಆ ದಿನ ಸಂಜೆ 5 ಘಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಿನ್ನಲೆ ಗಾಯಕಿ ಡಾ.ಶಮಿತಾ ಮಲ್ನಾಡ್ ಮತ್ತು ತಂಡದವರಿಂದ ಡಾ.ರಾಜ್ ಕುಮಾರ್ ಅವರ ಅಭಿನಯದ ಚಲನಚಿತ್ರಗಳ ಗಾಯನ ಹಾಗೂ ನೃತ್ಯ ಪ್ರದರ್ಶನ ಜರುಗಲಿದೆ.

  English summary
  Legendary Actor Padmabushana Dr. Rajkumar 88th Birthday anniversary celebration in Ravindra kalakshetra Bengaluru. The event Organised by Karnataka Information and Publicity Department On 24th April.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X