»   » ಮೇ 20ಕ್ಕೆ ಡಾ.ರಾಜ್ ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರಧಾನ

ಮೇ 20ಕ್ಕೆ ಡಾ.ರಾಜ್ ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರಧಾನ

Posted By: Naveen
Subscribe to Filmibeat Kannada

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೇ 20ರ ಶನಿವಾರದಂದು 'ಡಾ.ರಾಜ್ ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರಧಾನ' ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತು ನಲ್ಲಿ ಸಂಜೆ 5.30 ಗಂಟೆಗೆ ಕಾರ್ಯಕ್ರಮ ಶುರುವಾಗಲಿದೆ.

ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ತಾರೆ ಅಭಿನಯ ಶಾರದೆ ಡಾ. ಜಯಂತಿ ಅವರು ಆಗಮಿಸಿ ಪ್ರಶಸ್ತಿ ಪ್ರದಾನವನ್ನು ಮಾಡಲಿದ್ದಾರೆ. ಸಮಾರಂಭ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್ ಅವರು ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಾಯಕ ನಟ ಪುನೀತ್ ರಾಜ್ ‍ಕುಮಾರ್ ಅವರು ವಿಶೇಷ ಅತಿಥಿಯಾಗಿ ಉಪಸ್ಥಿತರಿರುವರು.

Dr Rajkumar Samskruthi Datti Awards

ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ಪ್ರಶಸ್ತಿ ಪುರಸೃತ ಎಸ್.ಕೆ. ಭಗವಾನ್ ಹಾಗೂ ಚಲನಚಿತ್ರ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರು ಗೌರವ ಉಪಸ್ಥಿತರಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಸಂಜೆ 4.30 ಗಂಟೆಗೆ ಡಾ.ಶಿವರಾಜ ಬ್ಯಾಡರಹಳ್ಳಿ ತಂಡದವರಿಂದ ಗೀತ ಗಾಯನ ಕಾರ್ಯಕ್ರಮವನ್ನು ಸಹ ಹಮ್ಮಿಕೊಂಡಿದೆ.

English summary
Dr Rajkumar Samskruthi Datti Awards

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada