ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ಆರೋಗ್ಯದಲ್ಲಿ ಏರುಪೇರು
ವರನಟ ದಿವಂಗತ ಡಾ.ರಾಜ್ ಕುಮಾರ್ ಅವರ ಸಹೋದರಿ ನಾಗಮ್ಮ ಅಸ್ವಸ್ಥಗೊಂಡಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಮ್ಮ ಅವರಿಗೆ ನಿನ್ನೆ ನಿಶ್ಯಕ್ತಿ ಉಂಟಾಗಿದೆ. ತಕ್ಷಣ ಅವರನ್ನು ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಟ್ಟೂರು ಗಾಜನೂರಿನಲ್ಲಿ ನಾಗಮ್ಮ ವಾಸಿಸುತ್ತಿದ್ದರು. ಅಲ್ಲೇ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಹತ್ತಿರದ ಜೆ.ಎಸ್.ಎಸ್ ಆಸ್ಪತ್ರೆಗೆ ಸೇರಿಸಲಾಗಿದೆ. ನಾಗಮ್ಮ ಅವರ ಅನಾರೋಗ್ಯದ ಸುದ್ದಿ ಕೇಳುತ್ತಿದ್ದಂತೆಯೇ, ಪತ್ನಿ ಮಂಗಳ ಜೊತೆಗೆ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ನಾಗಮ್ಮ ಅವರ ಆರೋಗ್ಯ ವಿಚಾರಿಸಲು ಡಾ.ರಾಜ್ ಕುಮಾರ್ ಕುಟುಂಬದ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಾಗಮ್ಮ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆಯೂ ಇದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
English summary
Late Actor Dr Rajkumar sister Nagamma admitted to hospital due to illness.


Click it and Unblock the Notifications