For Quick Alerts
  ALLOW NOTIFICATIONS  
  For Daily Alerts

  ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ: ಸುಪ್ರೀಂಕೋರ್ಟ್‌ನಲ್ಲೂ ನಿರಾಸೆ

  |

  ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್‌ನಲ್ಲಾದರೂ ಜಾಮೀನು ಸಿಗುತ್ತಾ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ, ಸುಪ್ರೀಂಕೋರ್ಟ್ ಸಹ ನಿರಾಸೆ ಮಾಡಿದೆ.

  Ragini Dwivedi ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ | Filmibeat Kannada

  ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ 2021ರ ಜನವರಿ ತಿಂಗಳಲ್ಲಿ ವಿಚಾರಣೆ ಮಾಡುವುದಾಗಿ ತಿಳಿಸಿದೆ. ಈ ಮೂಲಕ ಮತ್ತಷ್ಟು ದಿನ ರಾಗಿಣಿ ಪರಪ್ಪನ ಜೈಲಿನಲ್ಲಿಯೇ ಕಾಲ ಕಳೆಯಬೇಕಿದೆ.

  ಡ್ರಗ್ಸ್ ಪ್ರಕರಣ: ರಾಗಿಣಿ-ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿದ ಹೈ ಕೋರ್ಟ್

  ಮತ್ತೊಂದೆಡೆ ಕರ್ನಾಟಕ ಹೈ ಕೋರ್ಟ್‌ನಲ್ಲಿ ನಟಿ ಸಂಜನಾ ಸಲ್ಲಿಸಿರುವ ಜಾಮೀನು ಅರ್ಜಿ ಇಂದು ಮತ್ತೊಮ್ಮೆ ವಿಚಾರಣೆ ನಡೆಯಲಿದೆ.

  ಇದಕ್ಕೂ ಮುಂಚೆ ನಟಿ ರಾಗಿಣಿ ಹೈ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕರ್ನಾಟಕ ಹೈ ಕೋರ್ಟ್ ನವೆಂಬರ್ 3 ರಂದು ರಾಗಿಣಿ ಮತ್ತು ಸಂಜನಾ ಇಬ್ಬರ ಜಾಮೀನು ಅರ್ಜಿ ವಜಾಗೊಳಿಸಿತ್ತು.

  ಸದ್ಯಕ್ಕೆ ಸಂಜನಾ ಮತ್ತು ರಾಗಿಣಿ ಇಬ್ಬರು ಜೈಲಿನಿಂದ ಹೊರಬರುವ ಲಕ್ಷಣ ಕಾಣುತ್ತಿಲ್ಲ. ಈಗಾಗಲೇ ಮೂರು ತಿಂಗಳು ಜೈಲು ವಾಸ ಅನುಭವಿಸಿರುವ ನಟಿಯರು ಈ ಸಲ ಹೊಸವರ್ಷವನ್ನು ಜೈಲಿನಲ್ಲಿಯೇ ಆಚರಣೆ ಬೇಕಿದೆ.

  ಅಂದ್ಹಾಗೆ, ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಅವರನ್ನು ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸೆಪ್ಟೆಂಬರ್ 8 ರಂದು ನಟಿ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ, ಇಬ್ಬರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

  English summary
  Drug Mafia Case: Kannada actress ragini dwivedi bail application hearing postponed in supreme court.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X