ಡ್ರಗ್ಸ್ ಪ್ರಕರಣ: ಬೆಳ್ಳಂಬೆಳಗ್ಗೆ ಸೆಲೆಬ್ರಿಟಿಗಳ ಮನೆ ಮೇಲೆ ಬೆಂಗಳೂರು ಪೊಲೀಸರ ದಾಳಿ

By ಫಿಲ್ಮಿಬೀಟ್ ಡೆಸ್ಕ್

ಚಿತ್ರರಂಗಕ್ಕೆ ಡ್ರಗ್ಸ್ ದಂಧೆಯ ಲಿಂಕು ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದು, ಇಂದು (ಆಗಸ್ಟ್ 30) ಬೆಳ್ಳಂಬೆಳಗ್ಗೆ ಬೆಂಗಳೂರು ಪೊಲೀಸರು ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದಾರೆ. ಶೋಧ ಕಾರ್ಯ ನಡೆಸುತ್ತಿದ್ದಾರೆ. ಗೋವಿಂದಾಪುರ ಡ್ರಗ್ಸ್ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣ ತನಿಖೆ ಮುಂದುವರೆದಂತೆ ಒಬ್ಬೊಬ್ಬರ ಹೆಸರು ಬಹಿರಂಗವಾಗುತ್ತಿದೆ.

Recommended Video

ಮತ್ತೆ ಸದ್ದು ಮಾಡುತ್ತಿದೆ ಸ್ಯಾಂಡಲ್ ವುಡ್ ಡ್ರಗ್ ಕೇಸ್

ಇಂದು (ಆಗಸ್ಟ್ 30) ಬೆಳಗ್ಗೆ ಪೊಲೀಸರು ನಡೆಸಿದ ದಾಳಿಯಲ್ಲಿ ಸೆಲೆಬ್ರಿಟಿಗಳಾದ ನಟಿ ಸೋನಿಯಾ, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಸೇರಿದಂತೆ ಮುಂತಾದವರ ಮನೆ ಮೇಲೆ ಬೆಂಗಳೂರಿನ ಪೂರ್ವ ವಿಭಾಗದ ಪೋಲೀಸರು ದಾಳಿ ಮಾಡಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್‌ನಲ್ಲಿರುವ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಡ್ರಗ್ ಪೆಡ್ಲರ್ ಥಾಮಸ್ ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಸೆಲೆಬ್ರಿಟಿಗಳ ಮನೆಯಲ್ಲಿ ಹುಡುಕಾಟ ಮುಂದುವರೆಸಿದ್ದಾರೆ. ಒಂದು ವೇಳೆ ಮಾದಕ ವಸ್ತುಗಳು ಪತ್ತೆಯಾದರೆ ಅರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.

Drugs case: Bengaluru Police raid on Kannada celebrities house

ಕಳೆದ ವರ್ಷದಿಂದ ಡ್ರಗ್ಸ್ ಜಾಲದ ಹಿಂದೆ ಬಿದ್ದಿರುವ ಪೊಲೀಸರು ಸಾಕಷ್ಟು ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕನ್ನಡದ ಇಬ್ಬರು ಖ್ಯಾತ ನಟಿಯಾದ ರಾಗಿಣಿ ಮತ್ತು ಸಂಜನಾ ಅವರನ್ನು ಕಳೆದ ವರ್ಷ ಬಂಧಿಸಲಾಗಿತ್ತು. ಬಳಿಕ ಇಬ್ಬರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇತ್ತೀಚಿಗಷ್ಟೆ ಇಬ್ಬರ ಹೇರ್ ಸ್ಯಾಂಪಲ್ ವರದಿ ಬಂದಿದ್ದು ಇಬ್ಬರೂ ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ.

ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಬಾಲಿವುಡ್ ಮತ್ತು ಟಾಲಿವುಡ್‌ನ ಕೆಲವು ಸೆಲೆಬ್ರಿಟಿಗಳಿಗೂ ಡ್ರಗ್ಸ್ ಪ್ರಕರಣ ಉರುಳಾಗುವ ಸಾಧ್ಯತೆ ಇದೆ. ಇತ್ತೀಚಿಗಷ್ಟೆ ಟಾಲಿವುಡ್‌ನ ಖ್ಯಾತ ಕಲಾವಿದರಾದ ರಾಕುಲ್ ಪ್ರೀತ್ ಸಿಂಗ್, ರವಿತೇಜ ಸೇರಿದಂತೆ ಖ್ಯಾತ ಕಲಾವಿದರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಇನ್ನು ಬಾಲಿವುಡ್‌ನಲ್ಲಿ ಇತ್ತೀಚಿಗಷ್ಟೆ ಇಬ್ಬರು ಖ್ಯಾತ ನಟರನ್ನು ಪೊಲೀಸರು ಬಂಧಿಸಿದ್ದಾರೆ. ಅರ್ಮಾನ್ ಕೊಹ್ಲಿ ಮತ್ತು ಸೌರವ್ ದೀಕ್ಷಿತ್ ಇಬ್ಬರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರು ಕಲಾವಿದರು ಯಾರೆಲ್ಲ ಹೆಸರನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

More from Filmibeat

English summary
Drugs case: Bengaluru Police raid on Kannada celebrities house.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X