ತಮಿಳುನಾಡಿನಲ್ಲಿ ಪೊಲೀಸರ ವಶಕ್ಕೆ ನಟ ದುನಿಯಾ ವಿಜಯ್
Recommended Video

ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ತಮಿಳುನಾಡಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯ್ ಅವರನ್ನ ಸೆರೆ ಹಿಡಿದು ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಮಾಸ್ತಿಗುಡಿ ಚಿತ್ರೀಕರಣ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಪ್ರಕರಣದ ಸಂಬಂಧಪಟ್ಟಂತೆ ನಿರ್ಮಾಪಕ ಸುಂದರ್ ಪಿ.ಗೌಡ ಬಂಧನಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತೆರಳಿದ್ದರು. ಈ ವೇಳೆಯಲ್ಲಿ ಪೊಲೀಸರಿಂದ ಆರೋಪಿ ತಪ್ಪಿಸಿಕೊಳ್ಳಲು ವಿಜಯ್ ಸಹಕರಿಸಿದ್ದ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು.

ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ಕಳೆದ ಎಂಟು ದಿನಗಳಿಂದ ತಪ್ಪಿಸಿಕೊಂಡಿದ್ದ ದುನಿಯಾ ವಿಜಯ್ ಹಾಗೂ ಸುಂದರ್ ಗೌಡ ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸದ್ಯ ತಮಿಳಿನಾಡಿನಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ವಶಕ್ಕೆ ದುನಿಯಾ ವಿಜಯ್ ಸಿಕ್ಕಿದ್ದಾರೆ ಎಂದು ತಿಳಿದು ಬಂದಿದೆ.


Click it and Unblock the Notifications











