For Quick Alerts
  ALLOW NOTIFICATIONS  
  For Daily Alerts

  'ಸಲಗ' ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಐವರು ಘಟಾನುಘಟಿಗಳು ಅತಿಥಿ

  |

  ದುನಿಯಾ ವಿಜಯ್ ನಟಿಸಿ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ಸಿನಿಮಾ ಸಲಗ ಅಕ್ಟೋಬರ್ 14ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಥಿಯೇಟರ್‌ಗೆ ಬರಲಿರುವ ಸಲಗ ಚಿತ್ರದ ಪ್ರಚಾರವೂ ಜೋರಾಗಿದೆ.

  ಸಿನಿಮಾ ರಿಲೀಸ್‌ಗೂ ಮುಂಚೆ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ. ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಚಿತ್ರ ಎನ್ನುವ ಕಾರಣಕ್ಕೆ ಈ ಕಾರ್ಯಕ್ರಮ ಬಹಳ ಕುತೂಹಲ ಮೂಡಿಸಿದೆ. ಇಂಡಸ್ಟ್ರಿಯಿಂದ ಯಾರೆಲ್ಲಾ ಸ್ಟಾರ್‌ಗಳು ಈ ಶೋಗೆ ಅತಿಥಿಯಾಗಬಹುದು ಎಂಬ ಲೆಕ್ಕಾಚಾರ ನಡೆಯುತ್ತಿತ್ತು.

  ಸಲಗ-ಟಗರು ಜುಗಲ್‌ಬಂದಿ: ವಿಜಯ್ ಚಿತ್ರಕ್ಕೆ ಸಿದ್ದರಾಮಯ್ಯ ಸಾಥ್ಸಲಗ-ಟಗರು ಜುಗಲ್‌ಬಂದಿ: ವಿಜಯ್ ಚಿತ್ರಕ್ಕೆ ಸಿದ್ದರಾಮಯ್ಯ ಸಾಥ್

  ಇದೀಗ, ಕೊನೆಗೂ ಸಲಗ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಲಿರುವ ಘಟಾನುಘಟಿ ವ್ಯಕ್ತಿಗಳ ವಿವರ ಬಹಿರಂಗವಾಗಿದೆ. ಸ್ವತಃ ಚಿತ್ರತಂಡವೇ ಮಾಹಿತಿ ನೀಡಿರುವ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಲಗ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.

  ಈ ಹಿನ್ನೆಲೆ ಇತ್ತೀಚಿಗಷ್ಟೆ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಮತ್ತು ತಂಡ ಭೇಟಿ ಮಾಡಿ ಆಹ್ವಾನ ನೀಡಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸಲಗ ಚಿತ್ರಕ್ಕೆ ಒಳ್ಳೆದಾಗಲಿ ಎಂದು ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದರು.

  ಸೆನ್ಸಾರ್ ಮುಗಿಸಿದ ಸುದೀಪ್ 'ಕೋಟಿಗೊಬ್ಬ'-ವಿಜಯ್ 'ಸಲಗ'ಸೆನ್ಸಾರ್ ಮುಗಿಸಿದ ಸುದೀಪ್ 'ಕೋಟಿಗೊಬ್ಬ'-ವಿಜಯ್ 'ಸಲಗ'

  ''ಅಕ್ಟೋಬರ್ 14ರಂದು ತೆರೆ ಕಾಣಲಿರುವ ಸಲಗ ಚಿತ್ರದ ತಂಡದವರು ನಾಯಕ ನಟ ದುನಿಯಾ ವಿಜಯ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿದರು. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ಹಾಜರಿದ್ದರು. ದುನಿಯಾ ವಿಜಯ್ ಒಬ್ಬ ಪ್ರತಿಭಾನ್ವಿತ ನಟ, ಹೆಚ್ಚಿನ ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ'' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

   Duniya Vijays Salaga Pre-Release Event on October 10; Here is the Guests List

  ಸೆಂಚುರಿ ಸ್ಟಾರ್ ಶಿವಣ್ಣನ ಆಪ್ತ ಕೆಪಿ ಶ್ರೀಕಾಂತ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸಾಮಾನ್ಯವಾಗಿ ದೊಡ್ಮನೆ ನಟರು ಈ ಚಿತ್ರಕ್ಕೆ ಬೆಂಬಲವಾಗಿ ನಿಲ್ಲುವುದು ಮೊದಲೇ ತಿಳಿದಿತ್ತು. ಹಾಗಾಗಿ, ಪ್ರಿ-ರಿಲೀಸ್ ಕಾರ್ಯಕ್ರಮದಲ್ಲೂ ಅದು ಸಾಬೀತಾಗುತ್ತಿದೆ. ಶಿವಣ್ಣ ಮತ್ತು ಪುನೀತ್ ಪಾಲ್ಗೊಳ್ಳುತ್ತಿದ್ದಾರೆ.

  ಸಲಗ ಚಿತ್ರ ಸೆನ್ಸಾರ್ ಮುಗಿಸಿದ್ದ ಯಾವುದೇ ಕಟ್ ಇಲ್ಲದೇ 'ಎ' ಪ್ರಮಾಣ ಪತ್ರ ನೀಡಲಾಗಿದೆ. ಪಕ್ಕಾ ರೌಡಿಸಂ ಆಧರಿತ ಕಥಾಹಂದರ ಹೊಂದಿದ್ದು, ಸುಕ್ಕ ಶೈಲಿಯಲ್ಲಿ ಸಿನಿಮಾ ತಯಾರಾಗಿದೆ. ಈಗಾಗಲೇ ಹಾಡುಗಳು, ಡೈಲಾಗ್‌ಗಳು ಹಾಗೂ ಟೀಸರ್ ಭರ್ಜರಿ ಸದ್ದು ಮಾಡಿದೆ.

  ದುನಿಯಾ ವಿಜಯ್ ಜೊತೆ ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಂಜನಾ ಪ್ರಕಾಶ್ ನಾಯಕಿ. ಕಾಕ್ರೋಚ್ ಖ್ಯಾತಿಯ ಸುಧೀ, ಯಶ್ ಶೆಟ್ಟಿ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಕೆಪಿ ಶ್ರೀಕಾಂತ್ ನಿರ್ಮಿಸಿದ್ದಾರೆ. ಕೆಜಿ ರಸ್ತೆಯಲ್ಲಿರುವ ಸಂತೋಷ್ ಮೇನ್ ಥಿಯೇಟರ್ ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ಚಿತ್ರಮಂದಿರಗಳಲ್ಲಿ ಸಲಗ ಎಂಟ್ರಿಯಾಗಲಿದೆ.

  ಸಲಗ ಜೊತೆ ಕೋಟಿಗೊಬ್ಬ
  'ಸಲಗ' ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆ ಮಾಡಿರುವ ದಿನವೇ ಸುದೀಪ್ ನಟನೆಯ ಕೋಟಿಗೊಬ್ಬ 3 ಚಿತ್ರವೂ ಪ್ರಿ-ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂದ್ಹಾಗೆ, ಈ ಎರಡು ಚಿತ್ರಗಳು ಅಕ್ಟೋಬರ್ 14ಕ್ಕೆ ಒಟ್ಟಿಗೆ ಬಿಡುಗಡೆಯಾಗುತ್ತಿದೆ.

  ಕೋಟಿಗೊಬ್ಬ 3 ಚಿತ್ರದಲ್ಲಿ ಮಲಯಾಳಂ ನಟಿ ಮಡೋನ್ನಾ ಸಬಾಸ್ಟಿಯನ್ ಸುದೀಪ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ರವಿಶಂಕರ್, ಅಫ್ತಾಬ್ ಶಿವ ದಾಸನಿ, ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅದೇ ದಿನ ದುನಿಯಾ ವಿಜಯ್ ನಟಿಸಿ, ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ಸಲಗ ಚಿತ್ರ ಬಿಡುಗಡೆಯಾಗುತ್ತಿದೆ. ಕೆಪಿ ಶ್ರೀಕಾಂತ್ ಈ ಚಿತ್ರ ನಿರ್ಮಿಸಿದ್ದು, ಡಾಲಿ ಧನಂಜಯ್, ಸಂಜನಾ ಪ್ರಕಾಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

  English summary
  Duniya Vijay's Salaga Pre-Release Event on October 10; Former CM Siddaramaiah, DK Shivakumar, Puneeth Rajkumar, Shiva Rajkumar and Upendra to attend the event. Know more.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X