Don't Miss!
- News
ವಿಧಾನಸಭಾ ಚುನಾವಣೆ: ಹೆಬ್ಬಾಳ ಕ್ಷೇತ್ರದಲ್ಲಿ 40,000 ಸ್ಮಾರ್ಟ್ ಟಿವಿ ಉಡುಗೊರೆ ನೀಡಿದ ಕಾಂಗ್ರೆಸ್ ಶಾಸಕ
- Sports
IND vs NZ 3rd T20: ಪ್ರಮುಖ ವೇಗಿಯನ್ನು ತಂಡದಿಂದ ಬಿಡುಗಡೆ ಮಾಡಿದ ಟೀಂ ಇಂಡಿಯಾ
- Automobiles
ಜನಪ್ರಿಯ ನಟನ ಮನೆಗೆ ಕಥೆ ಹೇಳಲು ಹೋಗಿ ಆತನ ದುಬಾರಿ ಕಾರ್ ಓಡಿಸಿಬಂದ ನಿರ್ದೇಶಕ...
- Technology
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶಿವಣ್ಣನ 'ಟಗರು' ನೋಡಲಿದ್ದಾರೆ ದುನಿಯಾ ವಿಜಯ್ ಮತ್ತು 'ಸಲಗ' ತಂಡ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಕಾಂಬಿನೇಷನ್‌ನಲ್ಲಿ ಬಂದಿದ್ದ ಟಗರು ಸಿನಿಮಾ ಮತ್ತೆ ರಿ ರಿಲೀಸ್ ಆಗಿದೆ. ಇಂದಿನಿಂದ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಟಗರು ಪ್ರದರ್ಶನ ಕಾಣ್ತಿದೆ.
'ಟಗರು' ಸಿನಿಮಾ ಮತ್ತೆ ಬಿಡುಗಡೆಯಾಗಿರುವ ಹಿನ್ನೆಲೆ ನಟ ದುನಿಯಾ ವಿಜಯ್ ಸಾಥ್ ನೀಡುತ್ತಿದ್ದಾರೆ. ಟಗರು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ನಿರ್ಧರಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ದುನಿಯಾ ವಿಜಯ್ ಮಾಹಿತಿ ನೀಡಿದ್ದಾರೆ.
ನೇಕಾರರ
ಪರವಾಗಿ
ಹೊಸ
ಚಾಲೆಂಜ್
ಆರಂಭಿಸಿದ
ದುನಿಯಾ
ವಿಜಯ್
''ಕಳೆದ ಆರೇಳು ತಿಂಗಳಿನಿಂದ ಕೊರೊನಾ, ಐಸೋಲೇಶನ್, ಕ್ವಾರಂಟೈನ್, ಸೀಲ್ ಡೌನ್ ಇದೇ ರೀತಿಯ ಪದಗಳನ್ನು ಕೇಳುತ್ತಿದ್ದ ನಮಗೆ ಈಗ ಮಾರ್ನಿಂಗ್ ಶೋ, ಮ್ಯಾಟ್ನಿ, ಲೇಟ್ ನೈಟ್ ಶೋ ಎಂಬ ಪದಗಳನ್ನು ಕೇಳುವ ಸಮಯ ಬಂದಿದೆ. ಕೊರೊನಾಗೆ ವ್ಯಾಕ್ಸಿನ್ ಇನ್ನೂ ಬಂದಿಲ್ಲ, ಆದರೆ ಜೀವನವೂ ನಡೆಯಬೇಕಿರುವುದರಿಂದ ಎಲ್ಲ ಉದ್ಯಮಗಳಂತೆ, ಕಳೆದೊಂದು ವಾರದಿಂದ ಸರ್ಕಾರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ಕನಸಿನ ಮನೆಗಳಾದ ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿವೆ.''
''ಭಯ ಆತಂಕ ಎಲ್ಲದರ ನಡುವೆಯೂ ಒಂದಷ್ಟು ಸಿನಿಮಾ ಪ್ರೇಮಿಗಳು ಥೀಯೇಟರ್‌ಗೆ ಬಂದು ಸಿನಿಮಾ ನೋಡಿದ್ದಾರೆ. ಅವರೆಲ್ಲರಿಗೂ ನನ್ನ ಮನಃಪೂರ್ವಕ ವಂದನೆಗಳು. ನನ್ನ 'ಸಲಗ' ಸಿನಿಮಾದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್ ನಿರ್ಮಾಣದ ಗೆಳೆಯ ಸೂರಿ ನಿರ್ದೇಶನದ ಚಿತ್ರರಂಗದ ನಾಯಕ, ನನ್ನ ಪಾಲಿಗೆ ಅಣ್ಣನ ಸಮಾನರಾದ ಶಿವರಾಜ್ ಕುಮಾರ್ ಗೆಳೆಯ ಡಾಲಿ ಧನಂಜಯ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ 'ಟಗರು' ಇಂದಿನಿಂದ ಮರು ಬಿಡುಗಡೆಯಾಗುತ್ತಿದೆ.''
'ಸಲಗ'
ಬಳಿಕ
ಮತ್ತೊಂದು
ಸಿನಿಮಾಗೆ
ವಿಜಯ್
ನಿರ್ದೇಶನ:
ಹೊಸ
ನಾಯಕನನ್ನು
ಪರಿಚಯಿಸುತ್ತಿದ್ದಾರೆ
ವಿಜಿ
Recommended Video
''ಚಿತ್ರ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯನ್ನು ದೋಚಲಿ ಎಂದು ಹಾರೈಸುತ್ತಾ ಭಾನುವಾರ ಅಂದರೆ ಅ. 25ರ ಮಧ್ಯಾಹ್ನ 1.15ರ ಪ್ರದರ್ಶನಕ್ಕೆ ಅಭಿಮಾನಿಗಳ ಜತೆ ಸಿನಿಮಾ ನೋಡಲು ಮೈಸೂರು ರಸ್ತೆಯಲ್ಲಿರುವ ಸಿರ್ಸಿ ಸರ್ಕಲ್ ಬಳಿಯ ಗೋಪಾಲನ್ ಸಿನಿಮಾಸ್‌ಗೆ ಬರುತ್ತಿದ್ದೇನೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಎಚ್ಚರಿಕೆಯಲ್ಲಿನಾವು ಇದ್ದುಕೊಂಡು ಸಿನಿಮಾ ನೋಡಲು ಆರಂಭಿಸೋಣ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಖುಷಿ ಮತ್ತು ಸಂತೋಷವನ್ನು ಅನುಭವಿಸೋಣ'' ಎಂದು ತಿಳಿಸಿದ್ದಾರೆ.