»   » ಪೊಲೀಸರಿಗೆ ಮೊರೆ ಹೊದೆ ದುನಿಯಾ ವಿಜಿ ಪತ್ನಿ

ಪೊಲೀಸರಿಗೆ ಮೊರೆ ಹೊದೆ ದುನಿಯಾ ವಿಜಿ ಪತ್ನಿ

Posted By:
Subscribe to Filmibeat Kannada
Duniya Vijay wife Nagarathna
ನಟ ದುನಿಯಾ ವಿಜಯ್ ಅವರ ಪತ್ನಿ ನಾಗರತ್ನ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ದೂರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಿಜಿ ಅವರ ಭಾವ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಅವರು ಶುಕ್ರವಾರ (ಜ.18) ರಾತ್ರಿ ಪೊಲೀಸರಿಗೆ ದೂರು ನೀಡಿದರು.

ವಿಜಯ್ ಅವರ ಭಾವ ನಾಗರಾಜ್ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಮುಖಕ್ಕೆ ಆಸಿಡ್ ಹಾಕುವುದಾಗಿ, ರಸ್ತೆಯಲ್ಲಿ ಓಡಾಡುವಾಗ ಕಾರು ಹರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನಾಗರತ್ನ ಅವರು ಆರೋಪಿಸಿದ್ದಾರೆ.

ಶುಕ್ರವಾರ ಅವರು ತಮ್ಮ ಮೂವರು ಮಕ್ಕಳೊಂದಿಗೆ ಅವರು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಪ್ರಣವ್ ಮೊಹಾಂತಿ ಅವರನ್ನು ಭೇಟಿ ಮಾಡಿ ತಮಗೆ ರಕ್ಷಣೆ ನೀಡುವಂತೆ ಕೋರಿ ಮನವಿ ಸಲ್ಲಿಸಿದರು.

ನಗರದ ಪೊಲೀಸ್ ಆಯುಕ್ತ ಬಿ.ಜೆ.ಜ್ಯೋತಿಪ್ರಕಾಶ್ ಮಿರ್ಜಿ ಅವರನ್ನು ಭೇಟಿ ಮಾಡಲು ಅವರು ತೆರಳಿದ್ದರು. ಆದರೆ ಅವರ ಅನುಪಸ್ಥಿತಿಯ ಕಾರಣ ಜಂಟಿ ಪೊಲೀಸ್ ಆಯುಕ್ತ ಪ್ರಣವ್ ಮೊಹಾಂತಿ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿದ್ದಾರೆ.

ಮನವಿ ಸ್ವೀಕರಿಸಿರುವ ಜಂಟಿ ಪೊಲೀಸ್ ಆಯುಕ್ತ ತಮ್ಮ ದೂರನ್ನು ಸಮೀಪದ ಪೊಲೀಸ್ ಠಾಣೆಗೆ ಸಲ್ಲಿಸುವಂತೆ ತಿಳಿಸಿದ್ದಾರೆ. ಅದರಂತೆ ನಾಗರತ್ನ ಅವರು ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. (ಏಜೆನ್ಸೀಸ್)

English summary
Kannada actor Duniya Vijay's wife Nagarathna lodging a complaint of life threat against her brother-in-law with police. She alleged that her brother-in-law Nagaraj threatened her over the phone besides urging her to sign on divorce papers.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada