ನನ್ನ ಜೀವ ಇರುವವರೆಗೂ ನನ್ನ ಗಂಡ ದುನಿಯಾ ವಿಜಯ್ ಜೊತೆಯಲ್ಲೇ ಇದ್ದು ಸಾಯುತ್ತೇನೆ - ನಾಗರತ್ನ...!

By ಫಿಲ್ಮಿಬೀಟ್ ಡೆಸ್ಕ್

ದುನಿಯಾ ವಿಜಿ ಒಂದಷ್ಟು ಕಾಲದಿಂದ ವೈಯಕ್ತಿಕ ಜಂಜಾಟಗಳಿಂದಲೇ ಸುದ್ದಿಯಲ್ಲಿದ್ದರು. ಇದರಿಂದ ಮಾನಸಿಕವಾಗಿಯೂ ಕುಸಿದು ಹೋಗಿದ್ದ ಕನ್ನಡ ಚಿತ್ರರಂಗದ ಕರಿಚಿರತೆ ವಿಜಿ ಆ ನಂತರ ಮತ್ತದೇ ಹುಮ್ಮಸ್ಸಿನಿಂದ ಮೈಕೊಡವಿಕೊಂಡು ಎದ್ದು ನಿಂತರು. ಸಲಗ ಮೂಲಕ ನಿರ್ದೇಶಕರಾದರು. ಇಂಥ ವಿಜಯ್ ಕುಮಾರ್ ಸದ್ಯಕ್ಕೆ ಭೀಮ ಚಿತ್ರದ ಬಿಡುಗಡೆಯನ್ನ ಎದುರು ನೋಡುತ್ತಿದ್ದಾರೆ. ಈ ಸಮಯದಲ್ಲಿಯೇ ದುನಿಯಾ ವಿಜಯ್ ಖಾಸಗಿ ಬದುಕು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಹೌದು, ಅಸಲಿಗೆ ದುನಿಯಾ ವಿಜಯ್ ವಿಚ್ಛೇದನಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಿನ್ನೆ ನಡೆದಿದ್ದು, ಅರ್ಜಿ ವಜಾ ಆಗಿದೆ. 2018ರಲ್ಲಿಯೇ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಶಾಂತಿನಗರದ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

duniya-vijays-divorce-petition-has-been-dismissed-wife-nagarathna-has-reacted

ಈ ಬಗ್ಗೆ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಖುಷಿ ವ್ಯಕ್ತಪಡಿಸಿದ್ದು, ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ. ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಾಗರತ್ನ, 'ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ ಎಂದಿದ್ದಾರೆ. ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇಧನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ ಎಂದಿರುವ ನಾಗರತ್ನ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ. ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ ಎಂದಿದ್ದಾರೆ. ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ. ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು ಎಂದು ಮನದ ಮಾತನ್ನ ಹಂಚಿಕೊಂಡಿದ್ದಾರೆ ನಾಗರತ್ನ.

duniya-vijays-divorce-petition-has-been-dismissed-wife-nagarathna-has-reacted

ಇನ್ನೂ ನಮ್ಮ ತಂದೆ ತಾಯಿಯ ಮಾತನ್ನೇ ನಾನು ಪಾಲಿಸಿಕೊಂಡು ಬಂದವಳು. ಅದನ್ನೇ ಪಾಲಿಸಿಕೊಂಡು ಹೋಗುವಳು. ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ. ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ. ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು ಎಂದು ಕೂಡ ನಾಗರತ್ನ ಹೇಳಿದ್ದಾರೆ.

ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ. ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೇ ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಮನವಿಯನ್ನೂ ಮಾಡಿಕೊಂಡಿರುವ ನಾಗರತ್ನ ದಯವಿಟ್ಟು ಮಾಧ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿಯನ್ನು 2ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ ಎಂದಿದ್ದಾರೆ. ನಮ್ಮ ಸಂಸಾರ ಚೆನ್ನಾಗಿರಲಿ ಅಂತ ಹರಸಿ ಹಾರೈಸಿ ಕೇಳಿಕೊಂಡಿದ್ದಾರೆ ನಾಗರತ್ನ.

More from Filmibeat

English summary
Karnataka Family Court Dismisses Actor Vijay's Divorce Petition, Wife Nagarathna has reacted.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X