ದಸರಾ ಸಂಭ್ರಮದಲ್ಲಿ ಈ ವಾರ ತೆರೆಗೆ ಬರುತ್ತಿರುವ ಚಿತ್ರಗಳ ಪಟ್ಟಿ

ಹಬ್ಬದ ವೀಕೆಂಡ್‌ನಲ್ಲಿ ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವ ಅವಕಾಶ ಹೆಚ್ಚಿರುತ್ತದೆ. ರಜಾ ಸಮಯದಲ್ಲಿ ಸಹಜವಾಗಿಯೇ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುತ್ತಾರೆ ಎನ್ನುವ ಲೆಕ್ಕಾಚಾರ ಇದರ ಹಿಂದಿದೆ. ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಹಬ್ಬ ಆಚರಿಸಿ ಬಳಿಕ ಕುಟುಂಬ ಸಮೇತರಾಗಿ ಪ್ರೇಕ್ಷಕರು ಸಿನಿಮಾ ನೋಡಲು ಹೋಗುವ ಅಭ್ಯಾಸವೂ ಇದೆ.

ಸಂಕ್ರಾಂತಿ, ದಸರಾ, ಕ್ರಿಸ್‌ಮಸ್, ಈದ್ ಹಾಗೂ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಾಮಾನ್ಯವಾಗಿ ದೊಡ್ಡ ಸಿನಿಮಾಗಳನ್ನು ಬಿಡುಗಡೆ ಮಾಡಲು ಫಿಲ್ಮ್ ಮೇಕರ್ಸ್ ಕಾಯುತ್ತಿರುತ್ತಾರೆ. ಒಂದು ವರ್ಷ ಮೊದಲೇ ಸಿನಿಮಾ ರಿಲೀಸ್ ಡೇಟ್ ಘೋಷಿಸಿ ದಿನಾಂಕ ಕಾಯ್ದಿರಿಸುತ್ತಾರೆ. ಬೇರೆ ಸಿನಿಮಾಗಳ ಜೊತೆ ಕ್ಲ್ಯಾಶ್ ಆಗದಂತೆ ಎಚ್ಚರ ವಹಿಸಲಾಗುತ್ತದೆ.

Dussehra 2024 martin Vettaiyan jigra and more films releasing during the festival

ಸದ್ಯ ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ವೀಕೆಂಡ್‌ನಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಬಂದಿದೆ. ಇದೇ ಸಡಗರದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿಯ ದೊಡ್ಡ ದೊಡ್ಡ ಸಿನಿಮಾಗಳು ತೆರೆಗಪ್ಪಳಿಸಲು ಸಜ್ಜಾಗಿವೆ.

1. ಮಾರ್ಟಿನ್

ಎಪಿ ಅರ್ಜುನ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಸಿನಿಮಾ ಅಕ್ಟೋಬರ್ 11ಕ್ಕೆ ತೆರೆಗೆ ಬರ್ತಿದೆ. ಇಂಟರ್‌ನ್ಯಾಷನಲ್ ಮಟ್ಟದಲ್ಲಿ ದೇಶ ವಿದೇಶದ ಭಾಷೆಗಳಿಗೆ ಸಿನಿಮಾ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ರಿಲೀಸ್ ಆಗಿ ಸಿನಿರಸಿಕರ ಗಮನ ಸೆಳೆದಿದೆ. ಅಂದಾಜು 75 ಕೋಟಿ ರೂ. ಬಜೆಟ್‌ನಲ್ಲಿ 'ಮಾರ್ಟಿನ್' ಸಿನಿಮಾ ನಿರ್ಮಾಣವಾಗಿದೆ. 3000 ಸ್ಕ್ರೀನ್‌ಗಳಲ್ಲಿ ಸಿನಿಮಾ ರಿಲೀಸ್ ಪ್ಲ್ಯಾನ್ ನಡೀತಿದೆ.

2. ವೆಟ್ಟೆಯಾನ್

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ನಟನೆಯ 'ವೆಟ್ಟೆಯಾನ್' ಸಿನಿಮಾ ಇದೇ ಗುರುವಾರ ಪ್ರೇಕ್ಷಕರ ಮುಂದೆ ಬರ್ತಿದೆ. ಜ್ಞಾನವೇಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಪೊಲೀಸ್ ಆಫೀಸರ್ ಪಾತ್ರದಲ್ಲಿ ರಜನಿಕಾಂತ್ ಮಿಂಚಿದ್ದಾರೆ. ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್ ಸಹ ಚಿತ್ರದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡಕ್ಕೂ ಡಬ್ ಆಗಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.

Dussehra 2024 martin Vettaiyan jigra and more films releasing during the festival

3. ವಿಶ್ವಂ

ತೆಲುಗಿನಲ್ಲಿ ಗೋಪಿಚಂದ್ ನಟನೆಯ 'ವಿಶ್ವಂ' ಸಿನಿಮಾ ಕೂಡ ದಸರಾ ಸಂಭ್ರಮದಲ್ಲೇ ಬಿಡುಗಡೆ ಆಗುತ್ತಿದೆ. ಈ ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಚಿತ್ರದಲ್ಲಿ ಕಾವ್ಯಾ ತಾಪರ್ ನಾಯಕಿಯಾಗಿ ಮಿಂಚಿದ್ದಾರೆ. ಸತತ ಸೋಲುಗಳಿಂದ ಕಂಗೆಟ್ಟಿರುವ ನಿರ್ದೇಶನ ಶ್ರೀನು ವೈಟ್ಲ ಗೆಲ್ಲುವ ಭರವಸೆಯಲ್ಲಿದ್ದಾರೆ. ಶ್ಯಾಮ್, ನರೇಶ್, ಸುನೀಲ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಶುಕ್ರವಾರ ಸಿನಿಮಾ ತೆರೆಗೆ ಬರ್ತಿದೆ.

4. ಜಿಗ್ರಾ

ಆಲಿಯಾ ಭಟ್ ಅಭಿನಯದ ಬಾಲಿವುಡ್ ಸಿನಿಮಾ 'ಜಿಗ್ರಾ' ಚಿತ್ರಕ್ಕೂ ಈ ವಾರವೇ ಬಿಡುಗಡೆ ಭಾಗ್ಯ ಸಿಗ್ತಿದೆ. ವಿಶಾನ್ ಬಾಲ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವೇದಾಂಗ್ ರೈನಾ, ಶೋಭಿತಾ ದುಲಿಪಾಲ, ಮನೋಜ್ ಪಾವ ಚಿತ್ರದಲ್ಲಿ ನಟಿಸಿದ್ದಾರೆ. ಧರ್ಮ ಪ್ರೊಡಕ್ಷನ್ಸ್ ಹಾಗೂ ಎಂಟರ್‌ನಲ್ ಸನ್‌ಸೈನ್ ಪ್ರೊಡಕ್ಷನ್ಸ್ ಸಂಸ್ಥೆಗಳು ಚಿತ್ರಕ್ಕೆ ಹಣ ಹೂಡಿವೆ. ತಾಯಿಯಾದ ಬಳಿಕ ಆಲಿಯಾ ನಟಿಸಿರುವ ಸಿನಿಮಾಗಳಲ್ಲಿ ಇದು ಒಂದು.

ಈ ನಾಲ್ಕು ದೊಡ್ಡ ಸಿನಿಮಾಗಳ ಜೊತೆಗೆ ತೆಲುಗಿನಲ್ಲಿ 'ಜನಕ ಅಯಿಗೆ ಗನಕ', 'ಮಾ ನಾನ್ನ ಸೂಪರ್ ಹೀರೊ' ಸೇರಿದಂತೆ ಒಂದಷ್ಟು ಸಣ್ಣ ಸಿನಿಮಾಗಳು ತೆರೆಗೆ ಬರ್ತಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಸೂರ್ಯ ನಟನೆಯ 'ಕಂಗುವ' ಸಿನಿಮಾ ಕೂಡ ಅಕ್ಟೋಬರ್ 10ಕ್ಕೆ ರಿಲೀಸ್ ಆಗಬೇಕಿತ್ತು. 'ವೆಟ್ಟೆಯಾನ್' ಸಿನಿಮಾ ಜೊತೆ ಕ್ಲ್ಯಾಶ್ ಬೇಡ ಎಂದು ಚಿತ್ರದ ರಿಲೀಸ್ ಡೇಟ್ ಒಂದು ತಿಂಗಳು ಮುಂದೂಡಲಾಯಿತು.

More from Filmibeat

English summary
Kannada, hindi, tamil and Telugu Movies Releasing for Dussehra 2024;
Read more about: dhruva sarja rajinikanth dussehra
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X