For Quick Alerts
  ALLOW NOTIFICATIONS  
  For Daily Alerts

  ದೂದ್ ಪೇಡ ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಪೋಸ್ಟರ್ ಬಿಡುಗಡೆ

  By ಫಿಲ್ಮಿಬೀಟ್ ಡೆಸ್ಕ್
  |

  ವರ್ಷವೆಲ್ಲ ಗಾಯಗಳಿಂದಾಗಿ ಸುದ್ದಿಯಲ್ಲಿದ್ದ ನಟ ದಿಗಂತ್‌ ಈಗ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

  ದಿಗಂತ್ ಹುಟ್ಟುಹಬ್ಬದ ವಿಶೇಷವಾಗಿ ಅವರು ನಟಿಸುತ್ತಿರುವ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ತಮ್ಮ ಚಿತ್ರದ ನಾಯಕ ನಟನಿಗೆ ಶುಭ ಕೋರಿದೆ.

  ದಿಗಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. ದಿಗಂತ್ ಅವರಿಗೆ ಇಲ್ಲಿವರೆಗೆ ಚಾಕೋಲೇಟ್ ಬಾಯ್. ರೋಮ್ಯಾಂಟಿಕ್ ಹೀರೋ ಇಮೇಜ್ ಇತ್ತು ಆದ್ರೆ ಈ ಸಿನಿಮಾದಿಂದ ಕಂಪ್ಲೀಟ್ ಡಿಫ್ರೆಂಟ್ ಇಮೇಜ್‌ನಲ್ಲಿ ದಿಗಂತ್ ಕಾಣಿಸಿಕೊಳ್ಳಲಿದ್ದಾರೆ. ಬರ್ತ್ ಡೇಗೆ ಡಿಫ್ರೆಂಟ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ವಿ ಅದರಂತೆ ಇಂದು ಅನಾವರಣ ಮಾಡಿದ್ದೇವೆ ಎಂದು ನಿರ್ದೇಶಕ ಸಮರ್ಥ್ ಬಿ ಕಡಕೊಳ್ ತಿಳಿಸಿದ್ದಾರೆ.

  'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಜನವರಿ ಕೊನೆಯಲ್ಲಿ ಚಿತ್ರೀಕರಣ ಕಂಪ್ಲೀಟ್ ಆಗಲಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

  ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 90ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

  English summary
  Edagai Apaghatakke Karana movie poster release on the occasion of Diganth's birthday. Movie is based on lefties.
  Wednesday, December 28, 2022, 19:53
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X