For Quick Alerts
  ALLOW NOTIFICATIONS  
  For Daily Alerts

  ಸ್ಯಾಂಡಲ್‌ವುಡ್‌ಗೆ ಬಂದ ಯುರೋಪಿನ್ ಮಾಡೆಲ್! ಸಿನಿಮಾ ಯಾವುದು?

  By ಫಿಲ್ಮಿಬೀಟ್ ಡೆಸ್ಕ್
  |

  ಕನ್ನಡ ಚಿತ್ರರಂಗದಿಂದ ನಟನೆ ಆರಂಭಿಸಿ ಹಾಲಿವುಡ್ ವರೆಗೂ ಸಾಗಿದ ನಟ-ನಟಿಯರಿದ್ದಾರೆ. ಅನಿಲ್ ಕಪೂರ್, ದೀಪಿಕಾ ಪಡುಕೋಣೆ ಸೇರಿದಂತೆ ಸಾಲು ಸಾಲು ಉದಾಹರಣೆಗಳನ್ನು ನೀಡಬಹದು. ಆದರೆ ಇದೀಗ ವಿದೇಶದ ಮಾಡೆಲ್ ಒಬ್ಬರು ಕನ್ನಡ ಸಿನಿಮಾದಲ್ಲಿ ಪದಾರ್ಪಣೆ ಮಾಡಲು ಬಂದಿದ್ದಾರೆ.

  ಯುರೋಪ್‌ನಲ್ಲಿ ಮಾಡೆಲಿಂಗ್ ಮಾಡುತ್ತಿರುವ ಗ್ರೇಸಿಲಾ ಪಿಶ್ನರ್ ಹೆಸರಿನ ವಯ್ಯಾರಿಯೊಬ್ಬರು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದು, ಮುಂದಿನ ತಿಂಗಳೇ ಸಿನಿಮಾ ಬಿಡುಗಡೆ ಆಗಲಿದೆ. ಅದುವೆ 'ಬೆಂಗಳೂರು 69'.

  'ಬೆಂಗಳೂರು 69' ಚಲನಚಿತ್ರವನ್ನು ಟ್ರಿಪಲ್ ಎ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ ಮತ್ತು
  ದುಬೈ ಮೂಲದ ಕನ್ನಡಿಗ ಎನ್ಆರ್ಐ (NRI) ಝಾಕಿರ್‌ಹುಷೇನ್ ಕರೀಂ ಖಾನ್ ಮತ್ತು ಅವರ ಪತ್ನಿ ಗುಲ್ಜಾರ್ ಚಿತ್ರದ ನಿರ್ಮಾಪಕರು. 'ಬೆಂಗಳೂರು 69' ಸಿನಿಮಾದಲ್ಲಿ 'ಟಗರು' ಸಿನಿಮಾ ಖ್ಯಾತಿಯ ಅನಿತಾ ಭಟ್, 2015ರ ಮಿಸ್ಟರ್ ವರ್ಲ್ಡ್ ಪವನ್ ಶೆಟ್ಟಿ ಮತ್ತು ತೆಲುಗು ನಟ 'ಚತ್ರಪತಿ ಶಫಿ' ನಟಿಸಿದ್ದಾರೆ. ಫೆಬ್ರವರಿ 10' 2023ರಂದು ಕರ್ನಾಟಕದಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾವನ್ನು ಕ್ರಾಂತಿ ಚೈತನ್ಯ ನಿರ್ದೇಶನ ಮಾಡಿದ್ದು ಇದೊಂದು ಕ್ರೈಮ್ ಥ್ರಿಲ್ಲರ್ ಕತೆ ಒಳಗೊಂಡಿದೆ.

  ಯುರೋಪಿನ ಮಾಡೆಲ್ ಗ್ರೇಸಿಲಾ ಪಿಶ್ನರ್ ಈ ಚಿತ್ರದ ಮೂಲಕ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕಾಗಿ ವಿಶೇಷ ಹಾಡೊಂದನ್ನು ಯೋಜಿಸಿರುವ ನಿರ್ಮಾಪಕ ಝಾಕಿರ್‌ ಹುಷೇನ್ ಕರೀಂ ಖಾನ್, ಅಸಾಧಾರಣ ಹಾಡಿನ ಚಿತ್ರೀಕರಣಕ್ಕಾಗಿ ಗ್ರೇಸಿಲಾ ಪಿಶ್ನರ್ ಹೆಸರಾಂತ ಯುರೋಪಿಯನ್ ಮಾಡೆಲ್, ಲ್ಯಾಟಿನ್ ಅಮೇರಿಕನ್ ನೃತ್ಯ ಸಂಯೋಜಕಿ ಅನುಬಿಸ್ ಮತ್ತು ರಷ್ಯಾ ಮತ್ತು ದಕ್ಷಿಣ ಆಫ್ರಿಕಾದ ತಂತ್ರಜ್ಞರನ್ನು ಕರೆತಂದಿದ್ದಾರೆ.

  ಅಮೇರಿಕನ್ ವಸ್ತ್ರ ವಿನ್ಯಾಸಕರು ಚಿತ್ರದಲ್ಲಿ ಗ್ರೇಸಿಲಾಗೆ ವೇಷಭೂಷಣಗಳನ್ನು ವಿನ್ಯಾಸಗೊಳಿಸಿದ್ದಾರೆ. ಚಿತ್ರದ ವಿಶೇಷ ಹಾಡನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅನೇಕ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ, ದುಬೈನ ಬುರ್ಜ್ ಖಲೀಫಾ ಮತ್ತು ಶಾರ್ಜಾ ಮರುಭೂಮಿಯ ಬಳಿಯ ರೆಡ್‌ಜೋನ್‌ನಂತ ಎರಿಯಾಗಳ್ಲಿ ಗ್ರೇಸಿಲಾ ಪಿಶ್ನರ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಗ್ರೇಸಿಲಾ ಪಿಶ್ನರ್ ಅಂತರಾಷ್ಟ್ರೀಯ ಮೆಚ್ಚುಗೆ ಪಡೆದ ಚಲನಚಿತ್ರ "ಸಿಟಿ ಆಫ್ ಗಾಡ್" ನಲ್ಲಿ ನಟಿಸಬೇಕಿತ್ತು ಆದರೆ ಅವರು ವೈಯಕ್ತಿಕ ಕಾರಣಗಳಿಗಾಗಿ ಪ್ರಸ್ತಾಪವನ್ನು ತಿರಸ್ಕರಿಸಿದರು.

  ಚಿತ್ರಕ್ಕೆ ಪರಮೇಶ್ ಅವರ ಛಾಯಾಗ್ರಹಣವಿದೆ, ವಿಕ್ರಮ್ ಮತ್ತು ಚಂದನಾ ಸಂಗೀತ ಮತ್ತು ಸಂಕಲನವನ್ನು ಅಕ್ಷಯ್ ಪಿ ರಾವ್ ಸಂಯೋಜಿಸಿದ್ದಾರೆ, ಸಂಭಾಷಣೆಯನ್ನು ಪಿಎನ್ ವೈ ಪ್ರಸಾದ್ ಮತ್ತು ಜಯದೇವ್ ಮೋಹನ್ ಬರೆದಿದ್ದಾರೆ.

  English summary
  European model Graciela Fishner acting in Kannada movie Bengaluru 69. Movie is producing by NRI Kannadigas.
  Friday, January 13, 2023, 9:02
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X