For Quick Alerts
    ALLOW NOTIFICATIONS  
    For Daily Alerts

    ಡ್ರಗ್ಸ್ ಪ್ರಕರಣ: 'ABCD' ಸಿನಿಮಾ ಖ್ಯಾತಿಯ ನಟ ಮತ್ತು ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ

    |

    ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

    ಬಂಧಿತರಿಂದ ಮಾದಕ ವಸ್ತು MDMA, ಬೈಕ್, ಮೊಬೈಲ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 'ಈ ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳಿದ್ದು, ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ, ಇಬ್ಬರ ಮೇಲೆ ಮಾದಕ ವಸ್ತು ಮಾರಾಟ ಮತ್ತು ಸೇವನೆ ಎರಡು ಪ್ರಕರಣ ದಾಖಲಿಸಿದ್ದೇವೆ' ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ನಟ ಅಕುಲ್, ಸಂತೋಷ್‌ ಗೆ ಆರೋಪಿ ವೈಭವ್ ಜೊತೆಗಿರುವ ನಂಟು ಎಂಥಹುದು?

    ಬಂಧಿತ ಆರೋಪಿ ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್(28) ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಊರಿಗೆ ಹಿಂತಿರುಗಿದ್ದಾನೆ. ಕಿಶೋರ್ ಶೆಟ್ಟಿ ಡ್ಯಾನ್ಸರ್ ಮತ್ತು ನೃತ್ಯ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ. ಅಕೀಲ್ ನೌಶೀಲ್ ಜೊತೆ ಸೇರಿ ಬೆಂಗಳೂರು ಮತ್ತು ಮುಂಬೈಯಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಕಿಶೋರ್ ಶೆಟ್ಟಿ ಅದ್ಭುತ ಡ್ಯಾನ್ಸರ್ ಜೊತೆಗೆ ನಟ ಕೂಡ ಹೌದು. ಬಾಲಿವುಡ್ ನ ಸೂಪರ್ ಹಿಟ್ 'ABCD' ಸಿನಿಮಾದಲ್ಲಿ ಕಿಶೋರ್ ನಟಿಸಿದ್ದಾರೆ. ಕಿಶೋರ್ ಸಾಕಷ್ಟು ಹುಡುಗಿಯರಿಗೆ ಡ್ರಗ್ಸ್ ನೀಡಿ ಪಾರ್ಟಿ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ಜೊತೆ ನಂಟಿರುವ ಕಿಶೋರ್ ನನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದು, ಯಾರ ಹೆಸರುಗಳನ್ನು ಬಹಿರಂಗಪಡಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ.

    English summary
    Famous Dancer And ABCD movie fame Actor Kishore Shetty arrested by CCB for carrying drugs.

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X