For Quick Alerts
  ALLOW NOTIFICATIONS  
  For Daily Alerts

  ಪುನೀತ್ 'ಜೇಮ್ಸ್' ಚಿತ್ರಕ್ಕೆ ಬಂದ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರು

  |

  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ 'ಯುವರತ್ನ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ಪುನೀತ್ 'ಜೇಮ್ಸ್' ಚಿತ್ರದ ಚಿತ್ರೀಕರಣದಲ್ಲಿಯೂ ನಿರತರಾಗಿದ್ದಾರೆ. ವಿಶೇಷ ಅಂದರೆ ಪುನೀತ್ 'ಜೇಮ್ಸ್' ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ.

  ಹೌದು, 'ಜೇಮ್ಸ್' ಚಿತ್ರದ ಸಾಹಸ ದೃಶ್ಯ ನಿರ್ದೇಶನವನ್ನು ಖ್ಯಾತ ಫೈಟ್ ಮಾಸ್ಟರ್ಸ್ ರಾಮ್ ಲಕ್ಷ್ಮಣ್ ನಿರ್ದೇಶನ ಮಾಡಲಿದ್ದಾರೆ. 'ಜೇಮ್ಸ್' ತಂಡ ರಾಮ್ ಲಕ್ಷ್ಮಣ್ ಇಬ್ಬರನ್ನು ಸ್ವಾಗತ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮ್ ಲಕ್ಷ್ಮಣ್ ಜೊತೆ ಇಡೀ ತಂಡ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

  ಎಸ್‌ಪಿ ಬಾಲಸುಬ್ರಹ್ಮಣ್ಯಂ ಹಾಡಿದ ಮೊದಲ ಹಾಗೂ ಕೊನೆಯ ಕನ್ನಡ ಹಾಡುಗಳು ಇವು

  ಪುನೀತ್ ರಾಜ್ ಕುಮಾರ್ ಮತ್ತು ನಿರ್ದೇಶಕ ಚೇತನ್ ಸಹ ರಾಮ್ ಲಕ್ಷ್ಮಣ್ ಜೊತೆ ಫೋಟೋಗೆ ಪೋಸ್ ನೀಡಿದ್ದಾರೆ. 'ಜೆಮ್ಸ್' ನಿರ್ದೇಶಕ ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಗೆ ಚೇತನ್ ನಿರ್ದೇಶನ ಮಾಡುತ್ತಿದ್ದಾರೆ.

  'ಜೇಮ್ಸ್' ಹೆಸರೇ ಹೇಳುವ ಹಾಗೆ ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾ. ಸಾಕಷ್ಟು ಸಾಹಸ ದೃಶ್ಯಗಳು ಚಿತ್ರದಲ್ಲಿ ಇರಲಿದೆ. ಇದೀಗ ರಾಮ್ ಲಕ್ಷ್ಣಣ್ ಸಾಹಸ ದೃಶ್ಯಕ್ಕೆ ನಿರ್ದೇಶನ ಮಾಡಲಿದ್ದಾರೆ ಅಂದ್ಮೇಲೆ ಹೊಡೆದಾಟದ ಸನ್ನಿವೇಶಗಳು ಮತ್ತಷ್ಟು ರೋಚಕವಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ.

  ಕರುಣೆ ಬರ್ಲಿ ನನ್ ಮೇಲೆ ಅಂತ ನಾನು ಈ ವಿಡಿಯೋ ಮಾಡ್ತಿಲ್ಲ | Anushree | Filmibeat Kannada

  ಅಂದ್ಹಾಗೆ ರಾಮ್ ಲಕ್ಷ್ಮಣ್ ಪುನೀತ್ ಅಭಿನಯದ 'ಯುವರತ್ನ' ಸಿನಿಮಾದ ಸಾಹಸ ದೃಶ್ಯವನ್ನು ನಿರ್ದೇಶನ ಮಾಡಿದ್ದಾರೆ. ಇದೀಗ ಮತ್ತೆ 'ಜೇಮ್ಸ್' ಮೂಲಕ ಪುನೀತ್ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. 'ಜೇಮ್ಸ್' ಚಿತ್ರದ ಬಗ್ಗೆ ಚಿತ್ರತಂಡ ಹೆಚ್ಚೇನು ಬಿಟ್ಟುಕೊಟ್ಟಿಲ್ಲ. ವಿಶೇಷ ಅಂದರೆ ಪುನೀತ್ ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

  English summary
  South film Industry famous fight masters Ram lakshman roped in for kannada film James.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X