For Quick Alerts
  ALLOW NOTIFICATIONS  
  For Daily Alerts

  ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್-ನಾಗೇಂದ್ರ) ವಿಧಿವಶ

  |

  ಕನ್ನಡ ಹಾಗೂ ತೆಲುಗು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ ವಿಧಿವಶರಾಗಿದ್ದಾರೆ. ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು. 85 ವರ್ಷದ ರಾಜನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ 10.30ರ ಸಮಯಕ್ಕೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು ಎಂಬ ಮಾಹಿತಿ ಸಿಕ್ಕಿದೆ.

  ರಾಜನ್ ಮತ್ತು ನಾಗೇಂದ್ರ ಅವರು 1950, 1960, 1970, 1980 ಮತ್ತು 1990ರ ದಶಕದ ಮೆಲೋಡಿಕಿಂಗ್ ಎನಿಸಿಕೊಂಡಿದ್ದ ಸಂಗೀತ ಸಂಯೋಜಕರು. ಇವರಿಬ್ಬರು ಸುಮಾರು 375ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿದ್ದ ಈ ಜೋಡಿ ಕನ್ನಡದಲ್ಲಿಯೇ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.

  ನಾಲ್ಕು ದಶಕಗಳ ತಮ್ಮ ವೃತ್ತಿ ಜೀವನದಲ್ಲಿ ರಾಜನ್-ನಾಗೇಂದ್ರ ಜೋಡಿ ಅಸಂಖ್ಯಾತ ಹಿಟ್ ಹಾಗೂ ನೂರಾರು ಸುಮಧುರ ಹಾಡುಗಳನ್ನು ರಚಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ, ತುಳು, ಹಿಂದಿ ಮತ್ತು ಸಿಂಹಳ ಭಾಷೆಗಳಲ್ಲಿ ಸಂಗೀತ ನೀಡಿದ್ದಾರೆ.

  ಮೈಸೂರಿನ ಶಿವರಾಂಪೇಟೆಯ ಮಧ್ಯಮ ವರ್ಗದ ಸಂಗೀತ ಕುಟುಂಬದಲ್ಲಿ ರಾಜನ್ ಮತ್ತು ನಾಗೇಂದ್ರ ಜನಿಸಿದರು. ಅವರ ತಂದೆ ರಾಜಪ್ಪ ಹಾರ್ಮೋನಿಯಂ ಮತ್ತು ಕೊಳಲು ವಾದಕರಾಗಿದ್ದರು. ಮೂಕ ಚಲನಚಿತ್ರಗಳಿಗೆ ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದರು.

  ಮತ್ತೆ ಮೊದಲಿನಂತೆ ಆಯ್ತು Ranu Mondal ಜೀವನ | Filmibeat Kannada

  ನ್ಯಾಯವೇ ದೇವರು, ಗಂಧದ ಗುಡಿ, ದೇವರ ಗುಡಿ, ಭಾಗ್ಯವಂತರು, ಎರಡು ಕನಸು, ನಾ ನಿನ್ನಾ ಮರೆಯಲಾರೆ, ನಾ ನಿನ್ನಾ ಬಿಡಲಾರೆ, ಹೊಂಬಿಸಿಲು, ಬಯಲು ದಾರಿ, ಪಾವನಾ ಗಂಗಾ, ಗಿರಿ ಕನ್ಯೆ ಅಂತಹ ಚಿತ್ರಗಳಿಗೆ ರಾಜನ್-ನಾಗೇಂದ್ರ ಸಂಗೀತ ನೀಡಿದ್ದರು. ಅಂದ್ಹಾಗೆ, ನಾಗೇಂದ್ರ ಅವರು ನವೆಮಬರ್ 4, 2000 ಇಸವಿಯಲ್ಲಿ ನಿಧನರಾಗಿದ್ದರು.

  English summary
  Famous music director Rajan passed away. He was 85 years old. He along with his brother Nagendra, directed music for about 400 films, more than 200 in Kannada alone.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X