'ರಾಬರ್ಟ್' ಚಿತ್ರತಂಡ ಸೇರಿದ ಕಿರುತೆರೆಯ ಖ್ಯಾತ ನಟ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆಯನ್ನು ಮೂಡಿಸಿರುವ ರಾಬರ್ಟ್ ತರುಣ್ ಸುಧೀರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ಸಾಕಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ.

ಇದರ ನಡುವೆ ರಾಬರ್ಟ್ ಚಿತ್ರಕ್ಕೆ ಮತ್ತೋರ್ವ ನಟನ ಎಂಟ್ರಿಯಾಗಿದೆ ಎಂದು ಹೇಳಲಾಗುತ್ತಿದೆ. ಕಿರುತೆರೆಯ ಖ್ಯತ ನಟ ಚಂದು ಗೌಡ ರಾಬರ್ಟ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಆದ್ರೆ ಈ ಬಗ್ಗೆ ಚಿತ್ರತಂಡ ಇನ್ನು ಅಧಿಕೃತಗೊಳಿಸಿಲ್ಲ. ಆದ್ರೆ ಚಂದು ಗೌಡ ಚಿತ್ರತಂಡ ಸೇರಿಕೊಂಡಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಂದು ಗೌಡ ಸದ್ಯ ಲಕ್ಷ್ಮಿಬಾರಮ್ಮ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ಧಾರಾವಾಹಿ ಜೊತೆಗೆ ಚಂದು ಇನ್ಮುಂದೆ ಸಿನಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗಷ್ಟೆ ರಾಬರ್ಟ್ ಚಿತ್ರದಲ್ಲಿ ಮತ್ತೋರ್ವ ಖ್ಯಾತ ನಟ ರವಿ ಕಿಶನ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಭೋಜಪುರಿಯ ನಟ ರವಿ ಕಿಶನ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಈಗ ಡಿ ಬಾಸ್ ಎದುರು ಅಬ್ಬರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Famous Serial Artist Chandu Gowda Will Join Darshan Starrer Robert Film

ರಾಬರ್ಟ್ ಚಿತ್ರದಲ್ಲಿ ವಿಲನ್ ಆಗಿ ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟ ಜಗಪತಿ ಬಾಬು ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಮರಿ ಟೈಗರ್ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ.

More from Filmibeat

English summary
Kannada Famous serial artist Chandu Gowda will join Darshan starrer Robert film.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X