ದರ್ಶನ್ ಕೈಲಿದಿದ್ದು ಲಾಂಗ್ ಅಲ್ಲವೇ ಅಲ್ಲ..? ಅದರ ಬೆಲೆ ಎಷ್ಟು ಗೊತ್ತಾ? ದಾಖಲೆ ರಿಲೀಸ್ ಮಾಡಿದ ಫ್ಯಾನ್ಸ್!
ವಿವಾದಗಳಿಂದ ನಟ ದರ್ಶನ್ ದೂರ ಇದ್ದರೂ ವಿವಾದಗಳೇ ಅವರ ಬೆನ್ನೇರುತ್ತಿವೆ. ಸದ್ಯ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಜಯನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಟ ದರ್ಶನ್ ಭಾಗಿ ಆಗಿದ್ದರು. ವೇದಿಕೆಯಲ್ಲಿ ಅವರು ಲಾಂಗ್ ಹಿಡಿದು ಪೋಸ್ ಕೊಟ್ಟಿರುವ ವಿಡಿಯೋ, ಫೋಟೊಗಳು ವೈರಲ್ ಆಗ್ತಿದೆ.
ಇತ್ತೀಚೆಗೆ ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳೆಯರ ಬಳಗ ಜಯನಗರ 4ನೇ ಬ್ಲಾಕ್‌ನಲ್ಲಿ 15ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದರು. ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಇಬ್ಬರಿಗೂ ಅಭಿಮಾನಿಗಳು ಸನ್ಮಾನ ಮಾಡಿದ್ದರು. ಈ ವೇಳೆ ದರ್ಶನ್ ಮತ್ತು ಅಭಿಷೇಕ್‌ಗೆ ಅಭಿಮಾನಿಗಳು ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದರು.

ಅಭಿಮಾನಿಗಳು ಕೊಟ್ಟ ಲಾಂಗ್ ಹಿಡಿದು ದರ್ಶನ್ ವೇದಿಕೆಯಲ್ಲಿ ಕ್ಯಾಮರಾಗೆ ಪೋಸ್ ಕೊಟ್ಟಿದ್ದರು. ಈ ಫೋಟೊ, ವಿಡಿಯೋ ನೋಡಿದವರು ಇದು ಸಾರ್ವಜನಿಕವಾಗಿ ಲಾಂಗ್ ಹಿಡಿದು ಪೋಸ್ ಕೊಟ್ಟಿದ್ದು ಸರಿಯಲ್ಲ ಎನ್ನುತ್ತಿದ್ದಾರೆ. ಸಾರ್ವಜನಿಕವಾಗಿ ಈ ರೀತಿ ಮಾರಕಾಸ್ತ್ರಗಳನ್ನು ಪ್ರದರ್ಶಿಸುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಶಸ್ತ್ರಾಸ್ತ್ರ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವ ಅವಕಾಶವೂ ಇದೆ. ಹಾಗಾಗಿ ನಟ ದರ್ಶನ್‌ಗೆ ಹೊಸ ಸಂಕಷ್ಟ ಎದುರಾಗುವಂತೆ ಕಾಣುತ್ತಿದೆ.
ದರ್ಶನ್ ಲಾಂಗ್ ಹಿಡಿದ ಬಗ್ಗೆ ಇಷ್ಟೆಲ್ಲ ಚರ್ಚೆ ಆಗುತ್ತಿದ್ದಂತೆ ಅಭಿಮಾನಿಗಳು ಅದು ಲಾಂಗ್ ಅಲ್ಲ, ಅದಕ್ಕೆ ದಾಖಲೆ ಇಲ್ಲಿದೆ ನೋಡಿ ಎನ್ನುತ್ತಿದ್ದಾರೆ. "ಮಾಧ್ಯಮದಲ್ಲಿ ಬರುತ್ತಿರುವ ಹಾಗೆ ಅದು ನಿಜವಾದ ಲಾಂಗ್ ಅಲ್ಲ. 'ಕಾಟೇರ' ಚಿತ್ರದ ಪ್ರಚಾರಕ್ಕಾಗಿ ಚಿತ್ರದಲ್ಲಿ ಡಿ ಬಾಸ್ ಹಿಡಿದಿರುವ ಮಚ್ಚನ್ನು ಹೋಲುವ ರೀತಿ ಬೆಳ್ಳಿಯಲ್ಲಿ ಮಾಡಿಸಿ ಅಭಿಮಾನಿಗಳು ಕೊಟ್ಟ ಉಡುಗೊರೆ ಇದು. ಅದನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ" ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
ಬೆಳ್ಳಿ ಕಿರೀಟ, ಬೆಳ್ಳಿ ಕತ್ತಿಯನ್ನು ಖರೀದಿಸಿದ ಚಿನ್ನಾಭರಣ ಅಂಗಡಿಯ ರಶೀದಿ ಪತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ರಶೀದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮೊನ್ನೆ ಮೊನ್ನೆ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು ವಿವಾದ ಸೃಷ್ಟಿಸಿತ್ತು. ಆಕೆ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದರ್ಶನ್ ಕೂಡ ಪೊಲೀಸ್ ಠಾಣೆಗೆ ಹೋಗಿ ವಿಚಾರಣೆಯಲ್ಲಿ ಹಾಜರಾಗಿದ್ದರು. ಇದರ ಬೆನ್ನಲ್ಲೇ ಈಗ ಸಾರ್ವಜನಿಕವಾಗಿ ಲಾಂಗ್ ಹಿಡಿದು ವಿವಾದಕ್ಕೆ ಸಿಲುಕುವಂತಾಗಿದೆ. ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ನಟ ದರ್ಶನ್ ಈಗ 'ಕಾಟೇರ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ತರುಣ್ ಸುಧೀರ್ ನಿರ್ದೇಶನದ ಈ ಚಿತ್ರವನ್ನು ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಬಹುತೇಕ ಸಿನಿಮಾ ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. 'ಕಾಟೇರ' ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಜಗಪತಿ ಬಾಬು, ಶ್ರೀನಿವಾಸ್ ಮೂರ್ತಿ, ಬಿರಾದಾರ್, ಶ್ರುತಿ, ಕುಮಾರ್ ಗೋವಿಂದ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.
70ರ ದಶಕದ ಕತೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಲುಂಗಿ ಉಟ್ಟು ಹಳ್ಳಿ ಹೈದನ ಪಾತ್ರದಲ್ಲಿ ದರ್ಶನ್ ಮಿಂಚಿದ್ದಾರೆ. ಕತ್ತಿ ಹಿಡಿದು ಅಬ್ಬರಿಸಿದ್ದಾರೆ.'ಉಳುವವನೇ ಭೂಮಿಯ ಒಡೆಯ' ಕಾಯ್ದೆ ಜಾರಿಗೆ ಬಂದಾಗ ಹಳ್ಳಿಗಳಲ್ಲಿ ನಡೆದ ಸಂಘರ್ಷದ ಕತೆ ಚಿತ್ರದಲ್ಲಿದೆ. ವಿ. ಹರಿಕೃಷ್ಣ ಸಂಗೀತ, ಮಾಸ್ತಿ ಸಂಭಾಷಣೆ, ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದೆ.


Click it and Unblock the Notifications











