ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ವಿಶೇಷ ಕಾರ್ಯಕ್ರಮ
Recommended Video

ಪ್ರತಿ ವರ್ಷ ನಟ ಅಂಬರೀಷ್ ಅವರ ಹುಟ್ಟುಹಬ್ಬಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಈ ವರ್ಷ ಸಹ ಅಖಿಲ ಕರ್ನಾಟಕ ಚಕ್ರವರ್ತಿ ಅಂಬರೀಷ್ ಅಭಿಷೇಕ್ ಸಾಂಸ್ಕೃತಿಕ ಕಲಾ ಅಕಾಡಮಿ ಹಾಗೂ ಶುಭಮಸ್ತು ಅಂಬಿ ಅಭಿಷೇಕ್ ಬಹಳದಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಚಾಮರಾಜಪೇಟೆಯಲ್ಲಿ ಇರುವ ಕನ್ನಡ ಸಾಹಿತ್ಯ ಪರಿಷತ್ತು ನಲ್ಲಿ ದಿನಾಂಕ 27-5-2018 ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಎಸ್ ಎಸ್ ಎಲ್ ಸಿ ಯಲ್ಲಿ ಪಾಸಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನ, ಗಣ್ಯ ವ್ಯಕ್ತಿಗಳಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ. ಅಂಬರೀಶ್ ಅವರ ಹುಟ್ಟುಹಬ್ಬದ ದಿನ ಅಭಿಮಾನಿಗಳು ಈ ರೀತಿಯಾಗಿ ಅದನ್ನು ಆಚರಣೆ ಮಾಡುತ್ತಿದ್ದಾರೆ.

ಇದರ ಜೊತೆಗೆ ಅಂಬರೀಶ್ ಮಗನ ಮೊದಲ ಸಿನಿಮಾದ ಲಾಂಚ್ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಡೆಯಲಿದೆ. ಇದೇ ತಿಂಗಳು 29 ರಂದು ಅಂಬಿ ಬರ್ತ್ ಡೇ ಇದ್ದು, 28 ರಂದು ಜೆ ಪಿ ನಗರದ ದೇವಸ್ಥಾನದಲ್ಲಿ ಸರಳವಾಗಿ ಪೂಜೆ ನಡೆಯಲಿದೆ. ಜೂನ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಪ್ಲಾನ್ ಇದ್ದು, ಈ ಕಾರ್ಯಕ್ರಮದಲ್ಲಿ ಕನ್ನಡದ ಜೊತೆಗೆ ಬೇರೆ ಭಾಷೆಯ ದಿಗ್ಗಜ ನಟರು ಭಾಗಿಯಾಗಲಿದ್ದಾರೆ.


Click it and Unblock the Notifications











