ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳುಮಟ್ಟದ ಪೋಸ್ಟ್; ದೂರು ಸಾಧ್ಯತೆ

ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಅಭಿಮಾನಿಗಳ ನಡುವೆ ಕೆಸರೆರಚಾರ ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ತಮ್ಮ ನೆಚ್ಚಿನ ನಟ ಹೆಚ್ಚು ಎಂದು ಬಡಾಯಿ ಕೊಚ್ಚಿಕೊಳ್ಳುವ ಭರದಿಂದ ಮತ್ತೊಬ್ಬ ನಟನ ಬಗ್ಗೆ ಕೆಲವರು ನಿಕೃಷ್ಟವಾಗಿ ಕಾಮೆಂಟ್ ಮಾಡುತ್ತಾರೆ. ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಮಾಡಿರುವ ಅವಹೇಳನಕಾರಿ ಪೋಸ್ಟ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆಲವೊಮ್ಮೆ ಅಭಿಮಾನಿಗಳ ಕೆಸರೆರಚಾಟ ಕೀಳುಮಟ್ಟಕ್ಕೆ ಇಳಿದುಬಿಡುತ್ತದೆ. ನಟ ದರ್ಶನ್ ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ಇತ್ತೀಚೆಗೆ ಈ ರೀತಿ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಹೆಚ್ಚಾಗಿದೆ. ಸದ್ಯ 'ಗಜಪಡೆ' ಹೆಸರಿನ ಟ್ವಿಟರ್ ಅಕೌಂಟ್‌ನಲ್ಲಿ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಅಪ್ಪು ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Fans upset over disparaging post about producer Ashwini Puneeth Rajkumar

ಐಪಿಎಲ್ 2024ರ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಸತತ 3 ಪಂದ್ಯಗಳನ್ನು ಸೋತಿದೆ. ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭಾಗವಹಿಸಿದ್ದರು. 'ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ ಎಂದು ಪೋಸ್ಟ್ ಮಾಡಲಾಗಿದೆ. 'ಗಜಪಡೆ' ಹೆಸರಿನ ಟ್ವಿಟರ್ ಪೇಜ್‌ನಿಂದ ಪೋಸ್ಟ್ ಆಗಿದ್ದರೂ ಬಳಿಕ ಆ ಪೇಜ್ ಹೆಸರು, ಡಿಪಿ ಬದಲಿಸಲಾಗಿದೆ. ನಟ ಸುದೀಪ್ ಫೋಟೊ ಹಾಗಿ ಸುದೀಪ್ ಅಭಿಮಾನಿ ಎಂದು ಹೆಸರು ಬದಲಿಸಲಾಗಿದೆ. ಆದರೆ ಮೂಲ ಪೋಸ್ಟ್‌ನ ಸ್ಕ್ರೀನ್‌ ಶಾಟ್ ವೈರಲ್ ಆಗಿದೆ. ಆದರೆ ಈ ಬಗ್ಗೆ ಸುದೀಪ್ ಅಭಿಮಾನಿಗಳು ಸ್ಪಷ್ಟನೆ ನೀಡಿ ಅಸಲಿ ಪೋಸ್ಟ್ ಸ್ಕ್ರೀನ್‌ ಶಾಟ್ ತೋರಿಸುತ್ತಿದ್ದಾರೆ.

ಕೀಳುಮಟ್ಟದ ಪೋಸ್ಟ್‌ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿ ಕ್ಷಮೆಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದೂರು ನೀಡಲು ಮುಂದಾಗಿದ್ದಾರೆ. ಆ ಪೋಸ್ಟ್ ಮಾಡಿದ್ದು ಯಾರು? ಆತನ ಹಿನ್ನೆಲೆ ಏನು? ಎಂದು ಹುಡುಕಾಟ ಆರಂಭಿಸಿದ್ದಾರೆ. ಆತನ ಫೋಟೊವನ್ನು ಕೂಡ ವೈರಲ್ ಮಾಡುತ್ತಿದ್ದಾರೆ. ಇನ್ನು ಅವಹೇಳನಕಾರಿ ಪೋಸ್ಟ್ ಸ್ಕ್ರೀನ್ ಶಾಟ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಏಪ್ರಿಲ್ 3 ರಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಪೋಸ್ಟ್ ಮಾಡಲಾಗಿದೆ. ದರ್ಶನ್ ಅಭಿಮಾನಿ ಈ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ವಿಜಯಲಕ್ಷ್ಮಿ ದರ್ಶನ್ ಬಗ್ಗೆಯೂ ಇದೇ ರೀತಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ರೀತಿಯ ಕೀಳು ಮಟ್ಟದ ಪೋಸ್ಟ್‌ಗಳ ಬಗ್ಗೆ ನೆಟ್ಟಿಗರು ಕೂಡ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪುನೀತ್ ಅಭಿಮಾನಿಗಳು ಸದ್ಯ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದು ವಿಚಾರಣೆ ಬಳಿಕ ಸತ್ಯ ಹೊರ ಬೀಳಲಿದೆ.

Fans upset over disparaging post about producer Ashwini Puneeth Rajkumar

ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಚಪ್ಪಲಿ ತೂರಿದ ಪ್ರಕರಣದ ಬಳಿಕ ಸೋಶಿಯಲ್ ಮೀಡಿಯಾ ಫ್ಯಾನ್ಸ್ ವಾರ್ ಹೆಚ್ಚಾಗಿತ್ತು. ಪದೇ ಪದೇ ಕೆಟ್ಟ ಕೆಟ್ಟ ಕಾಮೆಂಟ್, ಮೀಮ್‌ಗಳು ವೈರಲ್ ಆಗುತ್ತಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿಧಾನವಾಗಿ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ಧಾರೆ. ತಮ್ಮ ಬ್ಯಾನರ್‌ನಲ್ಲಿ ಮತ್ತಷ್ಟು ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್ ಸಂಸ್ಥೆಯ 'O2' ಸಿನಿಮಾ ಬಿಡುಗಡಗೆ ಸಜ್ಜಾಗಿದೆ.

More from Filmibeat

English summary
Derogatory post about producer Ashwini Puneeth Rajkumar goes viral
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X