For Quick Alerts
  ALLOW NOTIFICATIONS  
  For Daily Alerts

  'ಹೆಬ್ಬೆಟ್ ರಾಮಕ್ಕ' ಚಿತ್ರತಂಡಕ್ಕೆ ಅಭಿನಂದನ ಕಾರ್ಯಕ್ರಮ

  By Naveen
  |

  65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ನಟಿ ತಾರ ಅವರ 'ಹೆಬ್ಬೆಟ್ ರಾಮಕ್ಕ' ಪಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಈ ಚಿತ್ರತಂಡಕ್ಕೆ ಈಗ ಕರ್ನಾಟಕ ಚಲನಚಿತ್ರ ಅಕಾಡಮಿ ಹಾಗೂ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಕಡೆಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

  'ಹೆಬ್ಬೆಟ್ ರಾಮಕ್ಕ' ವಿಮರ್ಶೆ: ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾ 'ಹೆಬ್ಬೆಟ್ ರಾಮಕ್ಕ' ವಿಮರ್ಶೆ: ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾ

  ನಾಳೆ (ಶನಿವಾರ) ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ಸ್ಟೂಡಿಯೋದಲ್ಲಿ ಅಭಿನಂದನಾ ಸಮಾರಂಭದ ಜೊತೆಗೆ ಚಿತ್ರದ ಪ್ರದರ್ಶನ ಕೂಡ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷರು ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರರು, ಸಂಗೀತ ನಿರ್ದೇಶಕ ಡಾ.ಹಂಸಲೇಖ, ನಿರ್ದೇಶಕ ಪಿ.ಶೇಷಾದ್ರಿ ಅತಿಥಿಯಾಗಿ ಆಗಮಿಸಲಿದ್ದಾರೆ. ಇವರ ಜೊತೆಗೆ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷರಾದ ವಿ.ರಾಜೇಂದ್ರ ಸಿಂಗ್ ಬಾಬು ಹಾಗೂ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಪಿ.ಎಸ್.ಹರ್ಷ ಹಾಜರಿರುತ್ತಾರೆ.

  ಅಂದಹಾಗೆ, ಮಹಿಳಾ ಮೀಸಲಾತಿಯ ದುರುಪಯೋಗ, ಕಪಟ ರಾಜಕಾರಣಿಯ ಅಧಿಕಾರದ ದಾಹ, ಮಧ್ಯಮ ವರ್ಗದ ಕುಟುಂಬದಲ್ಲಿನ ದುಡ್ಡಿನ ಮೋಹ, ಒಂದು ಹಳ್ಳಿಯಲ್ಲಿ ನಡೆಯಬಹುದಾದ ರಾಜಕೀಯ ಕುತಂತ್ರ, ಒಂದು ಹೆಣ್ಣು ಮನಸ್ಸು ಮಾಡಿದರೆ ಸಮಾಜವನ್ನೇ ಉದ್ಧಾರ ಮಾಡಬಹುದು ಎಂಬ ಸಂದೇಶ... ಈ ಎಲ್ಲವನ್ನೂ ಅಚ್ಚುಕಟ್ಟಾಗಿ ಕಟ್ಟಿಕೊಡುವ ಚಿತ್ರ 'ಹೆಬ್ಬೆಟ್ ರಾಮಕ್ಕ'.

  English summary
  The Department of Information and Public Relations and Karnataka Chalanachitra Academy felicitate the winners of the 65th National Film Awards and screening of award winning movie Hebbet Ramakka on tomorrow (june2nd).

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X