twitter
    For Quick Alerts
    ALLOW NOTIFICATIONS  
    For Daily Alerts

    ವಿಕ್ರಾಂತ ರೋಣ ಸಿನಿಮಾ ನೋಡುವಾಗ ಹಲ್ಲೆ: ಎಂಟು ಮಂದಿ ಬಂಧನ

    By ಚಿಕ್ಕಮಗಳೂರು ಪ್ರತಿನಿಧಿ
    |

    ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಸಿನಿಮಾ ವೀಕ್ಷಣೆ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರದಲ್ಲಿ ಹಾಡಹಗಲೇ ಲಾಂಗು, ಮಚ್ಚುಗಳಿಂದ ಯುವಕರ ಹೊಡೆದಾಟ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣ ನಡೆದ ಬಳಿಕ ತನಿಖೆಗೆ ಇಳಿದಿದ್ದ ಪೊಲೀಸರು ಕಳೆದ ನಾಲ್ಕು ದಿನದಲ್ಲಿ ಎಂಟು ಜನ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು 11 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ.

    'ವಿಕ್ರಾಂತ್ ರೋಣ' ಸಿನಿಮಾ ವೀಕ್ಷಿಸುವಾಗ ಗಲಾಟೆ, ಮಚ್ಚಿನಿಂದ ಹಲ್ಲೆ'ವಿಕ್ರಾಂತ್ ರೋಣ' ಸಿನಿಮಾ ವೀಕ್ಷಿಸುವಾಗ ಗಲಾಟೆ, ಮಚ್ಚಿನಿಂದ ಹಲ್ಲೆ

    ಜುಲೈ 28 ರಂದು ನಗರದ ಮಿಲನ ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದು ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕ್ಷುಲ್ಲಕ ಕಾರಣಕ್ಕೆ ಜಗಳ

    ಕ್ಷುಲ್ಲಕ ಕಾರಣಕ್ಕೆ ಜಗಳ

    ಸಿನಿಮಾ ವೀಕ್ಷಣೆ ವೇಳೆ ಯುವಕನೋರ್ವ ಪದೇ-ಪದೇ ಹೊರಗೆ ಹೋಗಿ ಬರುತ್ತಿದ್ದನು. ಇದೇ ವಿಷಯವಾಗಿ ಚಿತ್ರ ಮಂದಿರದ ಒಳಗೆ ಎರಡು ಗುಂಪುಗಳ ಮಧ್ಯೆ ಸಣ್ಣ ಗಲಾಟೆಯಾಗಿತ್ತು. ಹೊರಗೆ ಬಂದವರು ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಕಾರಿನಲ್ಲಿಟ್ಟಿದ್ದ ಮಚ್ಚು, ಲಾಂಗು, ಡ್ರಾಗರ್ ಗಳಿಂದ ಹೊಡೆದಾಡಿದ್ದರು. ಗಲಾಟೆಯಲ್ಲಿ ಭರತ್ ಹಾಗೂ ಜೀವನ್ ಎಂಬ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಇಬ್ಬರಿಗೂ ಹಾಸನದಲ್ಲಿ ಚಿಕಿತ್ಸೆ ಮುಂದುವರೆಯಲಾಗಿದೆ.

    ತಲೆಮರೆಸಿಕೊಂಡಿದ್ದ ಆರೋಪಿಗಳು

    ತಲೆಮರೆಸಿಕೊಂಡಿದ್ದ ಆರೋಪಿಗಳು

    ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಚಿಕ್ಕಮಗಳೂರು ಡಿ.ವೈ.ಎಸ್.ಪಿ. ಪುರುಷೋತ್ತಮ್ ನೇತೃತ್ವದಲ್ಲಿ 4 ತನಿಖಾ ತಂಡಗಳನ್ನು ರಚಿಸಿದ್ದರು. ಎಂಟು ಜನರಲ್ಲಿ 6 ಮಂದಿ ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದರು. ಇನ್ನಿಬ್ಬರು ಪರೋಕ್ಷವಾಗಿ ಸಹಕಾರ ನೀಡಿದ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನು ಮೂರ್ನಾಲ್ಕು ಜನ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಅವರನ್ನೂ ಬಂಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ತಿಳಿಸಿದ್ದಾರೆ.

    ಸಿಬ್ಬಂದಿಗೆ ಧನ್ಯವಾದ

    ಸಿಬ್ಬಂದಿಗೆ ಧನ್ಯವಾದ

    ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಿಪಿಐಗಳಾದ ಗುರುಪ್ರಸಾದ್, ಜಯರಾಮ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಒಟ್ಟಾರೆ, ಸಿನಿಮಾ ನೋಡುವ ವೇಳೆ ಸಣ್ಣ ವಿಚಾರವಾಗಿ ಕಿರಿಕ್ ಉಂಟಾಗಿ ಲಾಂಗು ಮಚ್ಚಿನಿಂದ ಹೊಡೆದಾಡಿಕೊಂಡಿದ್ದ ಯುವಕರು ಸದ್ಯ ಅಂದರ್ ಆಗಿದ್ದಾರೆ. ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಹಲ್ಲೆ ಮಾಡಿದವರ ಹೆಸರು ಹೇಳಿದ್ದ ಭರತ್

    ಹಲ್ಲೆ ಮಾಡಿದವರ ಹೆಸರು ಹೇಳಿದ್ದ ಭರತ್

    ಗಲಾಟೆಯಲ್ಲಿ ಗಾಯಗೊಂಡಿದ್ದ ಭರತ್‌ಗೆ ಹಾಸನದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆ ಬೆಡ್‌ ಮೇಲೆ ಮಲಗಿಕೊಂಡೆ ಮಾತನಾಡಿದ್ದ ಭರತ್, ತನ್ನ ಮೇಲೆ ಹಲ್ಲೆ ಮಾಡಿದವರ ಹೆಸರುಗಳನ್ನು ಹೇಳಿದ್ದ. ಪ್ರೀತಂ, ಈಶ್ವರ್, ಜೀವನ್, ಪ್ರಜ್ವಲ್, ಪನ್ನು, ಸಚಿನ್ ಹಾಗೂ ಇನ್ನೂ ನಾಲ್ಕು ಜನ ಇದ್ದರು ಅವರೆಲ್ಲ ಒಟ್ಟಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಚಿತ್ರಮಂದಿರಕ್ಕೆ ಲಾಂಗ್, ಕತ್ರಿ, ಡ್ರ್ಯಾಗರ್, ಚಾಕು, ಚೂರಿಗಳನ್ನು ತಂದಿದ್ದಾರೆ, ನನ್ನನ್ನು ಕೊಲ್ಲುವ ಉದ್ದೇಶದಿಂದಲೇ ಮೊದಲೇ ಯೋಜನೆ ಹಾಕಿಕೊಂಡು ಬಂದಿದ್ದರು ಎಂದಿದ್ದರು.

    Recommended Video

    Kote Prabhakar | 'ಓಂ' ಚಿತ್ರದ ನಂತ್ರ ನನಗೆ ಕೋಟೆ ಅಂತ ಹೆಸರಿಟ್ಟಿದ್ದೇ ಉಪೇಂದ್ರ | Upendra | OM

    English summary
    In Chikkamagaluru fight between two gangs while watching Vikrant Rona movie. Police arrest eight men.
    Wednesday, August 3, 2022, 13:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X