twitter
    For Quick Alerts
    ALLOW NOTIFICATIONS  
    For Daily Alerts

    Breaking News: ವೀಕೆಂಡ್ ಕರ್ಪ್ಯೂಯಿಂದ ನಷ್ಟ ಆಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂಗೆ ಫಿಲ್ಮ್ ಚೇಂಬರ್ ಮನವಿ

    |

    ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದುಪ್ಪಟ್ಟಾಗುತ್ತಿದೆ. ಇದರಿಂದ ಮತ್ತೆ ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೆಲವು ದಿನಗಳ ಹಿಂದೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಯಂತಹ ಕಠಿಣ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮಾರಕ ಎಂದು ಫಿಲ್ಮ್ ಚೇಂಬರ್ ಆತಂಕ ವ್ಯಕ್ತಪಡಿಸಿದೆ.

    ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ತುರ್ತು ಸಭೆಯನ್ನು ನಡೆಸಿದೆ. ಈ ಸಭೆಯಲ್ಲಿ ಸದಸ್ಯರು ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಸರ್ಕಾರಕ್ಕೆ ವೀಕೆಂಡ್ ಕರ್ಪ್ಯೂ ಜಾರಿಯಿಂದ ಕನ್ನಡದ ಚಿತ್ರರಂಗದ ಮೇಲಾಗುತ್ತಿರುವ ಪರಿಣಾಮವನ್ನು ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ. ಹೀಗಾಗಿ ಇಂದು (ಜನವರಿ 7) ಸಿ ಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲು ನಿರ್ಧಾರ

    ಕನ್ನಡ ಸಿನಿಮಾಗಳು ವೀಕೆಂಡ್‌ನಲ್ಲಿ ಕಲೆಕ್ಷನ್ ಮಾಡಿದಷ್ಟು ಉಳಿದ ದಿನಗಳಲ್ಲಿ ಗಳಿಕೆ ಕಾಣುವುದಿಲ್ಲ. ಶನಿವಾರ ಹಾಗೂ ಭಾನುವಾರ ಈ ಎರಡು ದಿನ ಚಿತ್ರಮಂದಿರಗಳು ತುಂಬಿ ತುಳುಕುತ್ತವೆ. ಆದರೆ, ಹೊಸ ಮಾರ್ಗ ಸೂಚಿಯಲ್ಲಿ ಈ ಎರಡು ದಿನ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಹೀಗಾಗಿ ಕನ್ನಡ ಚಿತ್ರರಂಗ ಮತ್ತೆ ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವ ಆತಂಕ ಎದುರಾಗಿದೆ. ಹೀಗಾಗಿ ಈ ಸಂಕಷ್ಟದಿಂದ ಪಾರಾಗಲು ಸಭೆ ನಡೆಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

    Film Chamber members will meet CM Basavaraj Bommai for weekend curfew loss and compensation

    ಇಂದು (ಜನವರಿ 7) ಸಿ ಎಂ ಭೇಟಿಗೆ ಅವಕಾಶ ಸಿಕ್ಕಿದರೆ ಫಿಲ್ಮ್ ಚೇಂಬರ್ ಸದಸ್ಯರು ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ವೀಕೆಂಡ್ ಕರ್ಫ್ಯೂ ಹಾಗೂ ಥಿಯೇಟರ್‌ನಲ್ಲಿ ಶೇ.50ರಷ್ಟು ಆಸನ ವ್ಯವಸ್ಥೆ ಮಾಡಿರುವುದರಿಂದ ಆಗುತ್ತಿರುವ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಪಡೆದು ಬಳಿಕ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ.

    Film Chamber members will meet CM Basavaraj Bommai for weekend curfew loss and compensation

    ಬಿಡುಗಡೆಯಾಗಿರುವ ಸಿನಿಮಾಗಳಿಗೆ ನಷ್ಟ ಪರಿಹಾರಕ್ಕೆ ಮನವಿ

    ಡಿಸೆಂಬರ್ 24 ರಿಂದ 5 ಸಿನಿಮಾಗಳು ಬಿಡುಗೆಡೆಯಾಗಿವೆ. ಈ ಸಿನಿಮಾಗಳು ವೀಕೆಂಡ್‌ ಕರ್ಫ್ಯೂನಿಂದ ನಷ್ಟ ಅನುಭವಿಸುವುದು ಖಚಿತ. ಹೀಗಾಗಿ ಸಿಎಂ ಬಳಿ ಈ ಐದು ಸಿನಿಮಾಗಳ ಬಗ್ಗೆನೂ ಚರ್ಚೆ ಮಾಡಲಿದ್ದಾರೆ. " ಕಳೆದ ಎರಡು ವಾರಗಳಲ್ಲಿ5 ಸಿನಿಮಾಗಳು ಬಿಡುಗಡೆಯಾಗಿವೆ. ಧನಂಜಯ್ ನಟನೆಯ 'ಬಡವ ರಾಸ್ಕಲ್' ಸಿನಿಮಾ ಉತ್ತಮ ಗಳಿಕೆ ಕಾಣುತ್ತಿದೆ. ನಿಖಿಲ್ ಕುಮಾರ್ 'ರೈಡರ್', 'ಲವ್ ಯು ರಚ್ಚು', 'ಅರ್ಜುನ್ ಗೌಡ' ಹಾಗೂ 'ಹುಟ್ಟುಹಬ್ಬದ ಶುಭಾಶಯಗಳು' ಬಿಡುಗಡೆಯಾಗಿವೆ. ಈ ಸಿನಿಮಾಗಳಿಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದರಿಂದ ನಷ್ಟ ಆಗಲಿದೆ. ಹೀಗಾಗಿ ಈ ಐದು ಸಿನಿಮಾಗಳಿಗೆ ಸರ್ಕಾರದಿಂದ ಏನಾದರೂ ಪರಿಹಾರ ಘೋಷಣೆ ಮಾಡಬಹುದೇ ಎಂದು ಸಿಎಂ ಬಳಿ ಮನವಿ ಮಾಡಿಕೊಳ್ಳುತ್ತೇವೆ." ಎಂದು ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್ ಫಿಲ್ಮಿ ಬೀಟ್‌ಗೆ ತಿಳಿಸಿದ್ದಾರೆ.

    Film Chamber members will meet CM Basavaraj Bommai for weekend curfew loss and compensation

    ವೀಕೆಂಡ್ ಕರ್ಪ್ಯೂ ಹಾಗೂ ಚಿತ್ರಮಂದಿರದಲ್ಲಿ ಶೇ. 50ರಷ್ಟು ಆಸನ ವ್ಯವಸ್ಥೆಗೆ ಆದೇಶ ಹೊರಬೀಳುತ್ತಿದ್ದಂತೆ ಚಿತ್ರರಂಗ ನಿಧಾನವಾಗಿ ತಣ್ಣಗಾಗುತ್ತಿದೆ. ಸಿನಿಮಾ ಚಟುವಟಿಕೆಗಳು ಸ್ಥಗಿತಗೊಳ್ಳುತ್ತಿವೆ. ಈಗಾಗಲೇ ಚಿತ್ರಮಂದಿರಗಳು ಕೂಡ ಖಾಲಿ ಹೊಡೆಯುತ್ತಿವೆ. ಜನವರಿ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾಗಳು ಮುಂದೂಡಲ್ಪಟ್ಟಿವೆ. ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ', ಹೊಸಬರ 'ಡಿಎನ್‌ಎ' ಸೇರಿದಂತೆ ಹಲವು ಸಿನಿಮಾಗಳನ್ನು ಮುಂದೂಡಲಾಗಿದೆ. ಹೀಗಾಗಿ ಕನ್ನಡ ಚಿತ್ರರಂಗ ಮತ್ತೆ ಆತಂಕದಲ್ಲಿ ಕಾಲ ಕಳೆಯುವಂತಹ ಸ್ಥಿತಿ ನಿರ್ಮಾಣ ಆಗಿದೆ.

    English summary
    Karnataka Film Chamber of Commerce members will be meeting CM Basavaraj Bommai on January 07th. They will discuss weekend curfew loss and compensation with CM.
    Friday, January 7, 2022, 10:11
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X