twitter
    For Quick Alerts
    ALLOW NOTIFICATIONS  
    For Daily Alerts

    ಹೆಸರಘಟ್ಟದಲ್ಲಿಯೇ ನಿರ್ಮಾಣವಾಗಲಿದೆ ಫಿಲ್ಮ್ ಸಿಟಿ: ಡಿಸಿಎಂ ಅಶ್ವತ್ಥ್ ನಾರಾಯಣ್

    |

    ಕರ್ನಾಟಕದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದು ಎಷ್ಟು ವರ್ಷಗಳ ಕನಸು. ಫಿಲ್ಮ್ ಸಿಟಿ ನಿರ್ಮಾಣದ ವಿಚಾರ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿ ವಿಶ್ವ ದರ್ಜೆಯ ಫಿಲ್ಮ್ ಸಿಟಿಯನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

    Recommended Video

    ಎಲ್ಲಾ ನಮಗೆ ಬೇಕು ಅನ್ನೋರಲ್ಲ ನಾವು | ShivaRajKumar | DCM Ashwath Narayan | Filmibeat Kannada

    ಈ ಮೊದಲು ಫಿಲ್ಮ್ ಸಿಟಿಯನ್ನು ಹೆಸರಘಟ್ಟದಲ್ಲಿ, ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮೈಸೂರು, ಎಚ್ ಡಿ ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ರಾಮನಗರ, ಕೊನೆಗೆ ಕನಕಪುರ ರಸ್ತೆಯ ರೋರಿಚ್ ಎಸ್ಟೇಟ್ ಹೀಗೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಂತ ಫಿಲ್ಮ್ ಸಿಟಿ ನಿರ್ಮಾಣದ ಜಾಗ ಬದಲಾಗುತ್ತಲೆ ಇದೆ. ಆದರೆ ಕೊನೆಯದಾಗಿ ಬೆಂಗಳೂರಿನ ಹೊರವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

    ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

    ಇದೀಗ ಸರ್ಕಾರ ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ನಿರ್ಧಾರ ಮಾಡಿದೆ. ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿತ್ರರಂಗದ ಪುನಶ್ಚೇತನ ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಲು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಮಯದಲ್ಲಿ ಅಶ್ವತ್ಥ್ ನಾರಾಯಣ್ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.

    Film City Will Built In Bengalure Outskirts Hesaraghatt, Not In Roerich Estate

    "ಫಿಲ್ಮ್ ಸಿಟಿ ರೋರಿಚ್ ಎಸ್ಟೇಟ್ ನಲ್ಲಿ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಹೆಸರಘಟ್ಟದಲ್ಲಿ ಮಾಡುವ ಪ್ರಯತ್ನ ನಡೆಯುತ್ತಿದೆ. ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು ಇದರಲ್ಲಿ ಸಿನಿಮಾರಂಗಕ್ಕೆ 150 ಎಕರೆ ಭೂಮಿ ನೀಡುವಂತೆ ಒತ್ತಾಯ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿದೆ. ತ್ವರಿತವಾಗಿ ಇದನ್ನು ಬಗೆಹರಿಸಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ಸಿಗಲಿದೆ" ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

    ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆಯಡಿ ತಂದು ಸರ್ಕಾರದ ಸವಲತ್ತುಗಳು ಅವರಿಗೂ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

    English summary
    DCM Ashwath Narayan speak about Film City. Film City will built in Bengalure outskirts Hesaraghatt, not in Roerich Estate.
    Friday, August 14, 2020, 9:46
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X