Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Automobiles
ಡಿಸೆಂಬರ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಮಹೀಂದ್ರಾ
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಂಬಿ ಔಟ್, ಜಗ್ಗೇಶ್ ಇನ್: ಸಿನಿ 'ರಣರಂಗ'ದಲ್ಲಿ ಗೆಲ್ಲೋರು ಯಾರು.?

ಸಿನಿಮಾ ಕಲಾವಿದರು ರಾಜಕೀಯ ಪಕ್ಷ ಸೇರೋದು ಹಾಗೂ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಮಾಡೋದು ಸಾಮಾನ್ಯ. ಇನ್ನು ಈ ಬಾರಿಯ ಚುನಾವಣೆಯಲ್ಲಿ ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್, ಮಾಲಾಶ್ರೀ, ಸಾಧುಕೋಕಿಲಾ, ರಚಿತಾ ರಾಮ್, ಅಮೂಲ್ಯ ಹೀಗೆ,,,,,ಹಲವು ನಟ-ನಟಿಯರು ತಮ್ಮ ಆತ್ಮೀಯ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಪರವಾಗಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಇದು ಒಂದು ಕಡೆಯಾದರೇ, ಮತ್ತೊಂದೆಡೆ ಸಿನಿಮಾ ರಂಗದಲ್ಲೇ ಗುರುತಿಸಿಕೊಂಡು ಕೋಟ್ಯಾಂತರ ಅಭಿಮಾನಿಗಳ ಅಭಿಮಾನ ಪಡೆದುಕೊಂಡಿದ್ದ ಕಲಾವಿದರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಹೀಗೆ ವಿವಿಧ ಪಕ್ಷಗಳಲ್ಲಿ ಅವಕಾಶ ಪಡೆದುಕೊಂಡಿರುವ ಸಿನಿ ತಾರೆಯರ ಮೇಲೆ ಚಿತ್ರರಂಗದ ಕಣ್ಣು ಬಿದ್ದಿದೆ. ಕೆಲವರಿಗೆ ಮೊದಲ ಚುನಾವಣೆಯಾದರೇ, ಮತ್ತೆ ಕೆಲವರಿಗೆ ಪ್ರತಿಷ್ಠೆಯ ಚುನಾವಣೆ ಇದಾಗಿದೆ. ಹಾಗಿದ್ರೆ, ಯಾವೆಲ್ಲ ಸಿನಿಮಾ ಮಂದಿ ಈ ಸಲ ಚುನಾವಣೆ ಅಖಾಡದಲ್ಲಿದ್ದಾರೆ ಎಂದು ತಿಳಿಯಲು ಈ ಸ್ಟೋರಿ ಓದಿ.....

ಡೈಲಾಗ್ ಕಿಂಗ್ ಸಾಯಿ ಕುಮಾರ್
ಬಹುಭಾಷಾ ನಟ, ಡೈಲಾಗ್ ಕಿಂಗ್ ಸಾಯಿ ಕುಮಾರ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಾಯಿ ಕುಮಾರ್ ಚುನಾವಣ ಅಖಾಡಕ್ಕೆ ಧುಮುಕಿದ್ದಾರೆ.
ಬಾಗೇಪಲ್ಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಟ ಸಾಯಿಕುಮಾರ್

ನಟಿ ಉಮಾಶ್ರೀ
ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟಿ ಉಮಾಶ್ರೀ ಸ್ಪರ್ಧೆ ಮಾಡುತ್ತಿದ್ದಾರೆ. ಕಳೆದ ಬಾರಿ ಗೆದ್ದು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವೆಯಾಗಿರುವ ಉಮಾಶ್ರೀ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧೆಗೆ ನಿಂತಿದ್ದಾರೆ.

ನಟ ಸಿಪಿ ಯೋಗೇಶ್ವರ್
ಸಕ್ರೀಯ ರಾಜಕಾರಣದಲ್ಲಿ ತೊಡಗಕೊಂಡಿರುವ ನಟ-ರಾಜಕಾರಣಿ ಸಿ.ಪಿ ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಯೋಗೇಶ್ವರ್ ವಿರುದ್ಧ ಈ ಬಾರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದಾರೆ.

ಕುಮಾರ್ ಬಂಗಾರಪ್ಪ
ಸೊರಬ ಕ್ಷೇತ್ರದಲ್ಲಿ ಸಹೋದರರ ಮಧ್ಯೆ ಸೆಣಸಾಟ ನಡೆಯಲಿದೆ. ನಟ, ರಾಜಕಾರಣಿ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕುಮಾರ್ ಬಂಗಾರಪ್ಪ ಅವರಿಗೆ ಜೆ.ಡಿ.ಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಎದುರಾಳಿ ಆಗಿದ್ದಾರೆ.

ನಿರ್ಮಾಪಕ ಸಿ.ಆರ್ ಮನೋಹರ್
ಕನ್ನಡದ ದೊಡ್ಡ ನಿರ್ಮಾಪಕ ಎನಿಸಿಕೊಂಡಿರುವ ಸಿ.ಆರ್ ಮನೋಹರ್ ಬಾಗೇಪಲ್ಲಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಮನೋಹರ್ ಚುನಾವಣೆ ಕಣದಲ್ಲಿದ್ದಾರೆ. ಇವರಿಗೆ ಬಿಜೆಪಿ ಅಭ್ಯರ್ಥಿ ಸಾಯಿಕುಮಾರ್ ಎದುರಾಳಿ.

ನಿರ್ಮಾಪಕ ಮುನಿರತ್ನ
ಕನ್ನಡ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಮುನಿರತ್ನ ಅವರು ರಾಜರಾಜೇಶ್ವರಿ ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಮುನಿರತ್ನ ಸದ್ಯ ಕುರುಕ್ಷೇತ್ರ' ಎಂಬ ಪೌರಾಣಿಕ ಸಿನಿಮಾವನ್ನ ಬಹುಕೋಟಿ ವೆಚ್ಚದಲ್ಲಿ ತಯಾರು ಮಾಡುತ್ತಿದ್ದಾರೆ.

ನಿರ್ಮಾಪಕ ಕುಮಾರಸ್ವಾಮಿ
ಜೆ.ಡಿ.ಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಈ ಸಲ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕಡೆಯೂ ಸ್ಪರ್ಧೆ ಮಾಡುತ್ತಿದ್ದಾರೆ. ಸಕ್ರೀಯ ರಾಜಕಾರಣದಲ್ಲಿರುವ ಕುಮಾರಸ್ವಾಮಿ ನಿರ್ಮಾಪಕರು ಕೂಡ ಆಗಿದ್ದು, ಸದ್ಯ, ನಿಖಿಲ್ ಕುಮಾರ್ ಅಭಿನಸಯಿಸುತ್ತಿರುವ 'ಶ್ರೀನಿವಾಸ ಕಲ್ಯಾಣ' ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಶಶಿಕುಮಾರ್
ಇನ್ನು ಬಿಜೆಪಿ ತೊರೆದು ಜೆ.ಡಿ.ಎಸ್ ಪಕ್ಷ ಸೇರ್ಪಡೆಗೊಂಡಿರುವ ನಟ ಶಶಿಕುಮಾರ್ ಹೊಸದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಸದ್ಯ, ಶಶಿಕುಮಾರ್ ಅವರು ಮುನಿರತ್ನ ನಿರ್ಮಾಣದ 'ಕುರುಕ್ಷೇತ್ರ' ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಬಿ.ಸಿ ಪಾಟೀಲ್
ಕೌರವ, ಪೂರ್ಣ ಸತ್ಯ, ಎಲ್ಲರಂತಲ್ಲ ನನ್ನ ಗಂಡ, ಅಸ್ತ್ರ, ನಿಷ್ಕರ್ಷ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದ ಬಿ.ಸಿ.ಪಾಟೀಲ್ ಅವರಿಗೆ 2013ರಲ್ಲಿ ಮುಖಭಂಗವಾಗಿತ್ತು. ಕೆಜೆಪಿಯ ಯು.ಬಿ.ಬಣಕಾರ್ ವಿರುದ್ಧ ಅವರು ಸೋತಿದ್ದರು. ಕೆಜೆಪಿಯ ಯು.ಬಿ.ಬಣಕಾರ್ ಮತಗಳು 52,623, ಕಾಂಗ್ರೆಸ್ಸಿನ ಬಿಸಿ ಪಾಟೀಲ್ ಮತಗಳು 50,017 ಗಳಿಸಿದ್ದರು. ಈ ಬಾರಿ ಸ್ಪರ್ಧೆಗಿಳಿಯಲು ಉತ್ಸುಕರಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ನೆ.ಲ.ನರೇಂದ್ರ ಬಾಬು
ನೆ.ಲ.ನರೇಂದ್ರ ಬಾಬು ಅವರು ಕಿರುತೆರೆ ಹಾಗೂ ಬೆಳ್ಳಿಪರದೆ ಮೇಲೆ ಹಲವಾರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 2018ರಲ್ಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸುತ್ತಿದ್ದಾರೆ. 2013ರಲ್ಲಿ ಮಹಾಲಕ್ಷ್ಮಿಲೇಔಟ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನರೇಂದ್ರ ಬಾಬು ಅವರು 16 ಸಾವಿರ ಮತಗಳಿಂದ ಸೋಲು ಕಂಡಿದ್ದರು.

ಹುಚ್ಚ ವೆಂಕಟ್
ಹಾಲಿ ಶಾಸಕ ಮುನಿರತ್ನ ಅವರು ಮತದಾರರನ್ನು ಸೆಳೆಯಲು ಆಮಿಷ ಒಡ್ಡುತ್ತಿದ್ದಾರೆ. ಕುಕ್ಕರ್, ಮಿಕ್ಸಿ ಕೊಟ್ಟು ಮತದಾರರನ್ನು ಓಲೈಸುತ್ತಿದ್ದಾರೆ ಎಂದು ಆರೋಪಿಸಿರುವ ಇಂದಿರಾನಗರದ ನಿವಾಸಿ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರುರಾಜರಾಜೇಶ್ವರಿ ನಗರದಿಂದ ಸ್ಪರ್ಧಿಸುತ್ತಿದ್ದಾರೆ.

ಜಗ್ಗೇಶ್
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಜಗ್ಗೇಶ್ ಸ್ಪರ್ಧಿಸುವುದು ಖಚಿತವಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಜವರೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಎಸ್. ಟಿ ಸೋಮಶೇಖರ್ ಅವರು ಕಣದಲ್ಲಿದ್ದಾರೆ. ಸೋಮಶೇಖರ್ ಅವರು ಹಾಲಿ ಶಾಸಕರಾಗಿದ್ದು, ಸದ್ಯಕ್ಕೆ ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. 2008ರಲ್ಲಿ ಕಾಂಗ್ರೆಸ್ಸಿನಿಂದ ತುರುವೇಕೆರೆಯಲ್ಲಿ ಸ್ಪರ್ಧಿಸಿದ್ದ ಜಗ್ಗೇಶ್ 47,849 ಮತಗಳನ್ನು ಗಳಿಸಿದರೆ, ಬಿಜೆಪಿಯ ಎಂ. ಡಿ ಲಕ್ಷ್ಮಿನಾರಾಯಣ (ಅಣ್ಣಯ್ಯ) ಅವರು 30776 ಮತ ಗಳಿಸಿ ಸೋಲು ಕಂಡಿದ್ದರು.

ಹಿಂದೆ ಸರಿದ ಅಂಬಿ
ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಂಬರೀಷ್, ಕೊನೆಗೂ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಓಡಾಡಲು ಕಷ್ಟವಾಗುತ್ತಿರುವುದರಿಂದ ಅಂಬಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ವತಃ ಅಂಬಿ ಅವರೇ ಹೇಳಿದ್ದಾರೆ. ಸದ್ಯ, 'ಅಂಬಿ ನಿಂಗೆ ವಯಸಾಯ್ತೋ' ಚಿತ್ರದಲ್ಲಿ ನಟಿಸುತ್ತಿದ್ದಾರೆ.