ಅಂಬೇಡ್ಕರ್ ಭವನದಲ್ಲಿ ಚಲನಚಿತ್ರ ಪ್ರಶಸ್ತಿ ಪ್ರದಾನ
ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರದ 2000-01ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ತಿಂಗಳ 16ರಂದು ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ವಿಷಯವನ್ನು ಕರ್ನಾಟಕ ರಾಜ್ಯಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ತಲ್ಲಂ ನಂಜುಂಡಶೆಟ್ಟಿ ಗುರುವಾರ ತಿಳಿಸಿದ್ದಾರೆ.
ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ತರುವಾಯ ಮೊದಲಬಾರಿಗೆ ಮಂಡಳಿಯ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಕೃಷ್ಣ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರದ್ದಾದ ಹಿನ್ನೆಲೆಯಲ್ಲಿ ಅಕ್ಟೋಬರ್‌ನಲ್ಲಿ ನಡೆಬೇಕಿದ್ದ ರಾಜ್ಯ ಚಲಚ್ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನೂ ಮುಂದೂಡಲಾಗಿತ್ತು. ಆ ನಂತರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲೇ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿತು. ಈ ಹಿನ್ನೆಲೆಯಲ್ಲಿ 16ರಂದು ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ ಎಂದು ತಲ್ಲಂ ತಿಳಿಸಿದರು.
English summary
Karnataka film chamber is preparing to construct new building for chamber


Click it and Unblock the Notifications