»   » ಬೆಂಗಳೂರಿನಲ್ಲಿ 32ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರಿನಲ್ಲಿ 32ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

Posted By: Staff
Subscribe to Filmibeat Kannada

ಬೆಂಗಳೂರು: ಬರುವ ಅಕ್ಟೋಬರ್‌ 10ರಿಂದ 20ರವರೆಗೆ ಹತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 32ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತಾ ಕಾರ್ಯಗಳಿಗೆ ಗುರುವಾರ ಚಾಲನೆ ದೊರೆತಿದೆ.

ದಶಕಗಳ ನಂತರ ಮತ್ತೊಮ್ಮೆ ಬೆಂಗಳೂರಿಗೆ ದೊರೆತಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.

ರಾಜ್ಯದ ಮುಖ್ಯ ಕಾರ್ಯದರ್ಶಿ ಥೆರೇಸಾ ಭಟ್ಟಾಚಾರ್ಯ, ವಾರ್ತಾ ಇಲಾಖೆಯ ವತ್ಸಲಾ ವತ್ಸ , ಮಾಲತಿ ಸಹಾಗ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರೂಪರೇಷೆಯ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಉಪಸಮಿತಿಗಳ ರಚನೆಗೂ ಚಾಲನೆ ದೊರೆತಿದೆ.

ಮುಖಪುಟ / ಸ್ಯಾಂಡಲ್‌ವುಡ್‌

English summary
32nd international film festival in bangalore

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada