ಓದುಗರು ಮೆಚ್ಚಿದ ರವಿ ಬಸ್ರೂರ್ ಗೆ 'ಅತ್ಯುತ್ತಮ ಸಂಗೀತ ನಿರ್ದೇಶಕ' ಪ್ರಶಸ್ತಿ.!

2018ನೇ ಸಾಲಿನ 'ಅತ್ಯುತ್ತಮ ಸಂಗೀತ ನಿರ್ದೇಶಕ' ಸೇರಿದಂತೆ ಒಟ್ಟು ಹನ್ನೊಂದು ವಿಭಾಗಗಳಲ್ಲಿ ನಿಮ್ಮ ಫಿಲ್ಮಿಬೀಟ್ ಕನ್ನಡ 'ಬೆಸ್ಟ್ ಆಫ್ ಸ್ಯಾಂಡಲ್ ವುಡ್-2018' ಪೋಲ್ ಆಯೋಜಿಸಿತ್ತು. ಆ ಮೂಲಕ ಆನ್ ಲೈನ್ ಮತಗಟ್ಟೆಯಲ್ಲಿ ತಮ್ಮ ನೆಚ್ಚಿನ ತಾರೆಯರಿಗೆ, ತಂತ್ರಜ್ಞರಿಗೆ ಮತ ಹಾಕುವಂತೆ ಓದುಗರಲ್ಲಿ 'ಫಿಲ್ಮಿಬೀಟ್ ಕನ್ನಡ' ಕೋರಿತ್ತು.

ತಮ್ಮ ನೆಚ್ಚಿನ ನಟ-ನಟಿ, ನಿರ್ದೇಶಕ, ಸಂಗೀತ ನಿರ್ದೇಶಕರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ತನ್ನ ಕೋಟ್ಯಾಂತರ ಓದುಗ ದೊರೆಗಳಿಗೆ 'ಫಿಲ್ಮಿಬೀಟ್ ಕನ್ನಡ' ನೀಡಿದ್ದರಿಂದ, ಬಹಳ ಬಿರುಸಿನಿಂದ ಈ ಮತದಾನ ಪ್ರಕ್ರಿಯೆ ನಡೆಯಿತು.

ಸುಮಾರು ಒಂದುವರೆ ತಿಂಗಳ ಕಾಲ ಈ ಮತದಾನ ಪ್ರಕ್ರಿಯೆ ನಡೆದು, ಈಗ ಅಂತಿಮ ಫಲಿತಾಂಶ ಹೊರ ಹಾಕುವ ಸಮಯ ಬಂದಿದೆ. ಓದುಗ ಪ್ರಭುಗಳ ಇಚ್ಛೆ ಪ್ರಕಾರ, 2018ರ 'ಅತ್ಯುತ್ತಮ ಸಂಗೀತ ನಿರ್ದೇಶಕ'ರಾಗಿ ಹೊರಹೊಮ್ಮಿರುವುದು 'ಕೆ.ಜಿ.ಎಫ್' ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರ್. ಮುಂದೆ ಓದಿರಿ...

2018 ರ ಬೆಸ್ಟ್ ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್

2018 ರ ಬೆಸ್ಟ್ ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್

'ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ' ಓದುಗರ ಆಯ್ಕೆ ಪ್ರಕಾರ, 2018ರ ಅತ್ಯುತ್ತಮ ಸಂಗೀತ ನಿರ್ದೇಶಕ ರವಿ ಬಸ್ರೂರ್. ನಾಮನಿರ್ದೇಶನಗೊಂಡಿದ್ದ 11 ಸಂಗೀತ ನಿರ್ದೇಶಕರ ಪೈಕಿ 'ಕೆ.ಜಿ.ಎಫ್' ಚಿತ್ರದ ಸಂಗೀತ ಸಂಯೋಜನೆಗಾಗಿ ರವಿ ಬಸ್ರೂರ್ ಅವರು 39% ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ರವಿ ಬಸ್ರೂರ್ ಗೆ ಸಿಕ್ಕ ಮತಗಳು ಎಷ್ಟು.?

ರವಿ ಬಸ್ರೂರ್ ಗೆ ಸಿಕ್ಕ ಮತಗಳು ಎಷ್ಟು.?

ಒಟ್ಟು 3129 ಜನರು ರವಿ ಬಸ್ರೂರ್ ಪರವಾಗಿ ಮತ ಚಲಾಯಿಸಿದ್ದಾರೆ. ಅತಿ ಹೆಚ್ಚು ಮತ ಪಡೆದ ರವಿ ಬಸ್ರೂರ್ ಓದುಗರ ಅಭಿಪ್ರಾಯದಂತೆ 'ಅತ್ಯುತ್ತಮ ಸಂಗೀತ ನಿರ್ದೇಶಕ'ರಾಗಿದ್ದಾರೆ.

ನಂತರದ ಸ್ಥಾನದಲ್ಲಿ...

ನಂತರದ ಸ್ಥಾನದಲ್ಲಿ...

'ರಾಂಬೋ-2' ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅರ್ಜುನ್ ಜನ್ಯ (2983), 'ಟಗರು' ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಚರಣ್ ರಾಜ್ (891) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ.

ಉಳಿದವರು...

ಉಳಿದವರು...

ನಾಲ್ಕನೇ ಸ್ಥಾನ - ವಾಸುಕಿ ವೈಭವ್ (292)

ಐದನೇ ಸ್ಥಾನ - ನವೀನ್ ಸಜ್ಜು (291)

ಆರನೇ ಸ್ಥಾನ - ಗುರುಕಿರಣ್ (132)

ಏಳನೇ ಸ್ಥಾನ - ಅಜನೀಶ್ ಲೋಕನಾಥ್ (107)

ಎಂಟನೇ ಸ್ಥಾನ - ಅನೂಪ್ ಭಂಡಾರಿ (101)

ಒಂಬತ್ತನೇ ಸ್ಥಾನ - ಮಣಿಕಾಂತ್ ಕದ್ರಿ (38)

ಹತ್ತನೇ ಸ್ಥಾನ - ಜೂಡಾ ಸ್ಯಾಂಡಿ (18)

ಹನ್ನೊಂದನೇ ಸ್ಥಾನ - ಶ್ರೀಧರ್ ವಿ ಸಂಭ್ರಮ್ (10)

ಎಲ್ಲರಿಗೂ ಧನ್ಯವಾದಗಳು

ಎಲ್ಲರಿಗೂ ಧನ್ಯವಾದಗಳು

ಈ ಆನ್ ಲೈನ್ ಮತದಾನದಲ್ಲಿ ಪಾಲ್ಗೊಂಡ ಎಲ್ಲಾ ಮತದಾರ ಬಂಧುಗಳಿಗೂ 'ಫಿಲ್ಮಿಬೀಟ್ ಕನ್ನಡ' ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತದೆ. ಇವರು ಗೆಲ್ಲಬೇಕಿತ್ತು, ಅವರು ಗೆಲ್ಲಬೇಕಿತ್ತು ಎಂದು ಬೇಸರಗೊಳ್ಳಬೇಡಿ... ಮುಂದೆ ಇದೇ ರೀತಿಯ ಸಾಕಷ್ಟು ಆನ್ ಲೈನ್ ಮತದಾನಗಳನ್ನು ಆಯೋಜಿಸಲಾಗುತ್ತದೆ. ಇದು ಮತದಾರರ ಅಂತಿಮ ತೀರ್ಮಾನವೇ ಹೊರತು 'ಫಿಲ್ಮಿಬೀಟ್ ಕನ್ನಡ'ದ ತೀರ್ಪಲ್ಲ ಎಂಬುದನ್ನು ಗಮನಿಸತಕ್ಕದ್ದು. ಮತದಾರರ ತೀರ್ಪನ್ನು 'ಫಿಲ್ಮಿಬೀಟ್ ಕನ್ನಡ' ಗೌರವಿಸುತ್ತದೆ.

More from Filmibeat

English summary
Best of 2018 - Filmibeat Kannada Awards 2018 poll results are out. Kannada Music Director Ravi Basrur is selected as Best Music Director-2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X