twitter
    For Quick Alerts
    ALLOW NOTIFICATIONS  
    For Daily Alerts

    ಕೋರ್ಟ್ ಆದೇಶದಂತೆ ಕಂಗನಾ ವಿರುದ್ಧ FIR ದಾಖಲಿಸಿದ ಕ್ಯಾತಸಂದ್ರ ಪೊಲೀಸ್

    |

    ರೈತ ವಿರೋಧಿ ಹೇಳಿಕೆಗೆ ಸಂಬಂಧಪಟ್ಟಂತೆ ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

    ತುಮಕೂರಿನ ಕ್ಯಾತಸಂದ್ರ ಪೊಲೀಸರು ಸೋಮವಾರ ನಟಿ ಕಂಗನಾ ವಿರುದ್ಧ ಕಲಂ 44, 108, 153, 153 (ಎ), 504 ಐಪಿಸಿ-1860ರ ಅಡಿ ಅಪರಾಧವೆಸಗಿರುತ್ತಾರೆ ಎಂದು ಎಫ್ ಐ ಆರ್ ದಾಖಲಿಸಿದ್ದಾರೆ.

    ರೈತ ವಿರೋಧಿ ಹೇಳಿಕೆ: ಕಂಗನಾ ವಿರುದ್ಧ FIR ದಾಖಲಿಸಲು ತುಮಕೂರು ಕೋರ್ಟ್ ಆದೇಶರೈತ ವಿರೋಧಿ ಹೇಳಿಕೆ: ಕಂಗನಾ ವಿರುದ್ಧ FIR ದಾಖಲಿಸಲು ತುಮಕೂರು ಕೋರ್ಟ್ ಆದೇಶ

    ಕೇಂದ್ರ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ರೈತರನ್ನು ಪರೋಕ್ಷವಾಗಿ ಕಂಗನಾ ರಣಾವತ್ ಭಯೋತ್ಪಾದಕರಿಗೆ ಹೋಲಿಸಿದ್ದರು. ಕಂಗನಾ ಅವರ ಹೇಳಿಕೆ ಖಂಡಿಸಿ ತುಮಕೂರಿನ ವಕೀಲ ರಮೇಶ್ ನಾಯಕ ಕೋರ್ಟ್‌ನಲ್ಲಿ ಕೇಸ್ ದಾಖಲಿಸಿದ್ದರು.

    FIR filed against Kanagana Ranaut by Tumkur Police for alleged anti-farmer statements

    ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ತಮಕೂರು ಜೆಎಂಎಫ್‌ಸಿ ನ್ಯಾಯಾಧೀಶ ವಿನೋದ್ ಬಾಲನಾಯಕ್ ಅಕ್ಟೋಬರ್ 9 ರಂದು ನಟಿಯ ವಿರುದ್ಧ ಎಫ್ ಐ ಆರ್ ದಾಖಲಿಸಲು ಆದೇಶಿಸಿದ್ದರು. ನ್ಯಾಯಾಧೀಶರ ಆದೇಶದಂತೆ ಈಗ ಕಂಗನಾ ವಿರುದ್ಧ ಕೇಸ್ ದಾಖಲಾಗಿದೆ.

    FIR filed against Kanagana Ranaut by Tumkur Police for alleged anti-farmer statements

    ಕಂಗನಾ ರಣಾವತ್ ಏನೆಂದು ಟ್ವೀಟ್ ಮಾಡಿದ್ದರು?

    'ಸಿಎಎಯಿಂದ ಒಬ್ಬರ ನಾಗರೀಕತೆಯೂ ಹೋಗಲಿಲ್ಲ, ಆದರೆ ಇವರು ರಕ್ತದ ನದಿಯನ್ನೇ ಹರಿಸಿದರು. ಅದೇ ಭಯೋತ್ಪಾದಕರು ಈಗ ಮತ್ತೆ ಪ್ರತಿಭಟಿಸುತ್ತಿದ್ದಾರೆ. ಮಲಗಿರುವವರನ್ನು ಎಬ್ಬಿಸಬಹುದು, ತಪ್ಪು ತಿಳಿದಿರುವವರಿಗೆ ಸರಿಯಾದ ಮಾಹಿತಿ ಕೊಡಬಹುದು, ಆದರೆ ಮಲಗಿರುವಂತೆ ನಟಿಸುತ್ತಿರುವವರಿಗೆ, ದಡ್ಡರಂತೆ ನಟಿಸುತ್ತಿರುವವರಿಗೆ ಏನು ತಿಳಿಹೇಳಿದರೆ ಏನು ಪ್ರಯೋಜನ?' ಎಂದು ಟ್ವೀಟ್ ಮಾಡಿದ್ದರು.

    Recommended Video

    ಕಂಗನಾ ಅಭಿನಯದ ಜಯಲಲಿತಾ ಬಯೋಪಿಕ್ ಗೆ ಎದುರಾಗಿದೆ ದೊಡ್ಡ ಕಂಟಕ | Filmibeat Kannada

    ಕಂಗನಾ ಟ್ವೀಟ್‌ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಮಾರನೇಯ ದಿನ ಮತ್ತೊಂದು ಟ್ವೀಟ್ ಮಾಡಿದ ಕಂಗನಾ ರಣೌತ್, 'ಪಪ್ಪುವಿನ ಸೇನೆ ಸುಳ್ಳು ಸುದ್ದಿಗಳನ್ನು ಇಟ್ಟುಕೊಂಡು ಗಲಾಟೆಗಳನ್ನು ಮಾಡುತ್ತಿದೆ' ಎಂದಿದ್ದಾರೆ. ನಾನು ರೈತರನ್ನು ಭಯೋತ್ಪಾದಕರು ಎಂದಿಲ್ಲ, ನಾನು ಹಾಗೆ ಹೇಳಿದ್ದಾಗಿ ಸಾಬೀತು ಮಾಡಿದರೆ ನಾನು ಕ್ಷಮೆ ಕೇಳುತ್ತೇನೆ'' ಎಂದಿದ್ದರು.

    English summary
    After Court order, Karnataka Police registers FIR against Kangana Ranaut for tweet on protests against Farmers Bills.
    Tuesday, October 13, 2020, 17:28
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X