For Quick Alerts
  ALLOW NOTIFICATIONS  
  For Daily Alerts

  ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

  |

  ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜಾಮೀನಿನ ಹೊರಗೆ ಬಂದು ನಿರಾಳದ ಉಸಿರು ಬಿಟ್ಟಿದ್ದ ನಟಿ ಸಂಜನಾ ಗಲ್ರಾನಿಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ.

  ಸಂಜನಾ Vs ವಂದನಾ:ಹಳೇ ಕೇಸ್ ನಿಂದ ಸಂಜನಾಗೆ ಮತ್ತೆ ಸಂಕಷ್ಟ | Filmibeat Kannada

  ಸಂಜನಾ ಗಲ್ರಾನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 2019 ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಈ ಎಫ್‌ಐಆರ್ ದಾಖಲಿಸಲಾಗಿದೆ.

  2019ರ ಡಿಸೆಂಬರ್ 24 ರಂದು ನಗರದ ಲ್ಯಾವೆಲ್ಲೆ ರಸ್ತೆಯ ಪಬ್ ಒಂದರಲ್ಲಿ ನಟಿ ಸಂಜನಾ ಗಲ್ರಾನಿ ಮಾಡೆಲ್ ವಂದನಾ ಜೈನ್ ಜೊತೆಗೆ ಜಗಳ ಮಾಡಿಕೊಂಡಿದ್ದರು. ವಂದನಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಂದನಾ ಮುಖಕ್ಕೆ ಮದ್ಯ ತುಂಬಿದ ಗ್ಲಾಸ್‌ನಿಂದ ಹಲ್ಲೆ ಮಾಡಿದ್ದರು.

  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ವಿಡಿಯೋದಲ್ಲಿ ಸಂಜನಾ, ವಂದನಾಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ರೆಕಾರ್ಡ್ ಆಗಿತ್ತು.

  ಪ್ರಕರಣ ನಡೆದ ಮಾರನೇಯ ದಿನವೇ ವಂದನಾ ಜೈನ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಆ ಸಮಯದಲ್ಲಿ ಎನ್‌ಸಿಆರ್‌ (ಗುರುತರವಲ್ಲದ ಪ್ರಕರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸಂಜನಾ ಮಾಡಿದ ಹಲ್ಲೆಯಿಂದ ತಮ್ಮ ಕಣ್ಣಿಗೆ ಗಾಯವಾಗಿದೆ ಎಂದು ವಂದನಾ ಆಗ ಆರೋಪ ಮಾಡಿದ್ದರು.

  ಈ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಜಾರಿಯಲ್ಲಿತ್ತು. ಇದೀಗ ನ್ಯಾಯಾಲಯದ ಸೂಚನೆಯಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

  ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದರು. ಹಲವು ದಿನಗಳ ಕಾಲ ಜೈಲು ವಾಸ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

  English summary
  FIR registered against actress Sanjjanaa Galrani in cubbon park police station regarding 2019 pub case.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X