ಚಿರಂಜೀವಿ ಫಾರ್ಮ್ ಹೌಸ್ ನಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ 'ಸೈರಾ' ಸೆಟ್
ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ನಟಿಸುತ್ತಿರುವ ಸೈರಾ ನರಸಿಂಹ ರೆಡ್ಡಿ ಚಿತ್ರೀಕರಣದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುಬಾರಿ ವೆಚ್ಚದ ಸೆಟ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನುವುದು ನಿರಾಳದ ಸಂಗತಿ.
ಗಾಂಧಿ ಪೇಟೆ ತಾಲೋಕಿನ ಕೋಕಿಪೇಟ್ ನಲ್ಲಿರುವ ನಟ ಚಿರಂಜೀವಿ ಅವರಿಗೆ ಸೇರಿರುವ ಫಾರ್ಮ್ ಹೌಸ್ ನಲ್ಲಿ ಈ ಘಟನೆ ನಡೆದಿದ್ದಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆಯಂತೆ.
ಚಿರಂಜೀವಿ ಅವರ ಫಾರ್ಮ್ ಹೌಸ್ ನಲ್ಲಿ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅದ್ಧೂರಿ ಸೆಟ್ ಹಾಕಲಾಗಿತ್ತು. ಆದ್ರೆ, ಸಂಪೂರ್ಣ ಶೂಟಿಂಗ್ ಮುಗಿದಿದ್ದ ಕಾರಣ ಘಟನೆ ನಡೆದಾಗ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಈ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು ಎಂದು ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಪಾಯ ಸಂಭವಿಸಿದೆ ಎನ್ನಲಾಗಿದೆ. ಈ ವಿಷ್ಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಅಂದ್ಹಾಗೆ ಸೈರಾ ನರಸಿಂಹ ರೆಡ್ಡಿ ಸಿನಿಮಾ ಚಿರಂಜೀವಿಯ 151ನೇ ಸಿನಿಮಾ. ಸುರೇಂದರ್ ರೆಡ್ಡಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ನಯನತಾರ, ಅಮಿತಾಭ್ ಬಚ್ಚನ್, ಸುದೀಪ್, ವಿಜಯ್ ಸೇತುಪತಿ, ತಮನ್ನಾ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.


Click it and Unblock the Notifications











