ಯುವ ರಾಜ್ ಕುಮಾರ್ ಮೊದಲ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹೇಗಿದೆ?

ವರ ನಟ ಡಾ. ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜ್ ಕುಮಾರ್ ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ಅಣ್ಣಾವ್ರ ಜನ್ಮದಿನವಾದ ಏ. 24ರಂದು ಅವರ ಅಭಿಮಾನಿಗಳಿಗೆ ಖುಷಿ ನೀಡುವ ಸಲುವಾಗಿ ಯುವ ರಾಜ್ ಕುಮಾರ್ ಅವರ ಚೊಚ್ಚಲ ಚಿತ್ರದ ಮೊದಲ ಲುಕ್ ಪೋಸ್ಟರ್‌ಅನ್ನು ಬಿಡುಗಡೆ ಮಾಡಲಾಗಿದೆ.

ಕೈಯಲ್ಲಿ ಉದ್ದನೆಯ ಭರ್ಜಿ ಹಿಡಿದು ಖಡಕ್ ಲುಕ್‌ನಲ್ಲಿ ಯುವ ರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಇದು ಆಕ್ಷನ್ ಭರಿತ ಸಿನಿಮಾ ಎಂಬ ಸುಳಿವು ನೀಡಿದೆ. ಉದ್ದನೆಯ ಗಡ್ಡ ಮತ್ತು ಕೂದಲು ಬಿಟ್ಟುಕೊಂಡಿರುವ ಯುವ ಅವರ ಪೋಸ್ಟರ್ ಗಮನ ಸೆಳೆಯುವಂತಿದೆ. ಸದ್ಯಕ್ಕೆ ಈ ಚಿತ್ರಕ್ಕೆ 'ಯುವ 01' ಎಂಬ ಶೀರ್ಷಿಕೆ ಇರಿಸಲಾಗಿದೆ.

ಪ್ರಶಾಂತ್ ನೀಲ್ ಜತೆ ಕೆಜಿಎಫ್ ಚಿತ್ರದಲ್ಲಿ ಸಹಾಯಕನಾಗಿ ಕೆಲಸ ಮಾಡಿದ್ದ ಪುನೀತ್ ರುದ್ರನಾಗ್, ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ.

First Look Poster Of Yuva Rajkumar Movie Released

'ಎಲ್ಲರಿಗೂ ನಮಸ್ಕಾರ. ನನ್ನ ಚಿಕ್ಕ ಮಗನಾದ ಯುವ ರಾಜ್ ಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ನಿಮ್ಮ ಮುಂದೆ. ನಿಮ್ಮ ಪ್ರೋತ್ಸಾಹದ ನಿರೀಕ್ಷೆಯಲ್ಲಿ. ಧನ್ಯವಾದಗಳು' ಎಂದು ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕಿರಿಯ ಮಗನಿಗೆ ಎಲ್ಲರೂ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

More from Filmibeat

English summary
Dr Rajkumar's grandson Yuva Rajkumar's debute movie first look poster was released on Friday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X