twitter
    For Quick Alerts
    ALLOW NOTIFICATIONS  
    For Daily Alerts

    ಆದಿವಾಸಿಗೆ ಗುಂಡೇಟು: ಪ್ರತಿಭಟನೆಯ ಎಚ್ಚರಿಕೆ ನೀಡಿದ ನಟ ಚೇತನ್ ಅಹಿಂಸ

    By ಮೈಸೂರು ಪ್ರತಿನಿಧಿ
    |

    ನಟನೆ ಜೊತೆಗೆ ಆದಿವಾಸಿ ಸಮಯದಾಯದ ಏಳಿಗೆ, ಸಮಾಜ ಸೇವೆ, ದಲಿತ ಪರ, ಕನ್ನಡ ಪರ ಹೋರಾಟಗಳಲ್ಲಿ ತೊಡಗಿಕೊಂಡಿರುವ ಚೇತನ್ ಅಹಿಂಸ, ಇದೀಗ ಆದಿವಾಸಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ.

    ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪ ಬಳಿ ರಾಣಿಗೇಟ್ ಜೇನು ಕುರುಬರ ಹಾಡಿ ನಿವಾಸಿ ಬಸವ ಎಂಬ ವ್ಯಕ್ತಿಗೆ ಗುಂಡೇಟು ಹೊಡೆದಿರುವ ಅರಣ್ಯ ಇಲಾಖೆ ಕ್ರಮವನ್ನು ಖಂಡಿಸಿರುವ ನಟ ಚೇತನ್ ಅಹಿಂಸಾ, ಪ್ರಕರಣವನ್ನು ತಿರುಚುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    ಮೈಸೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ದರೂ ಆದಿವಾಸಿಗಳ ಬವಣೆಗೆ ಕೊನೆ ಇಲ್ಲದಂತಾಗಿದೆ. ಅರಣ್ಯ ಇಲಾಖೆ ದಬ್ಬಾಳಿಕೆಯಿಂದ ಒಬ್ಬ ಆದಿವಾಸಿ ಯುವಕನಿಗೆ ಗುಂಡೇಟು ಹೊಡೆದು, ಆ ಪ್ರಕರಣವನ್ನು ತಿರುಚುವ ಕೆಲಸ ಆಗುತ್ತಿದೆ. ಇದರ ವಿರುದ್ಧ ಹೋರಾಡಿ ನ್ಯಾಯಾ ಕೊಡಿಸಲು ಮೈಸೂರಿಗೆ ಬಂದಿದ್ದೇನೆ. ನಮ್ಮ ಮನವಿಯಂತೆ ಅರಣ್ಯ ಇಲಾಖೆ ಮೇಲೆ ಎಫ್ಐಆರ್ ದಾಖಲಿಸಿ, ನಿಷ್ಪಕ್ಷಪಾತ ತನಿಖೆಯಾಗದಿದ್ದರೆ ಮೈಸೂರಿನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು. ಆದಿವಾಸಿ ಯುವಕನ ನ್ಯಾಯಾಕ್ಕಾಗಿ ರೈತ ಸಂಘ, ಮಹಿಳಾ, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳನ್ನು ಸೇರಿ ಬೃಹತ್ ಹೋರಾಟ ನಡೆಸಲಿವೆ'' ಎಂದು ಹೇಳಿದರು.

    Forest Department Employee Fires On Tribal Man, Actor Chetan Ahimsa Said Its Intentional

    ಆದಿವಾಸಿಗಳೊಂದಿಗೆ ಕಾರ್ಯನಿರ್ವಹಿಸುವ ಗ್ರೀನ್ ಇಂಡಿಯಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ಕ್ಷುಲಕ ಕಾರಣಕ್ಕಾಗಿ ಅರಣ್ಯ ಇಲಾಖೆ ವಾಚ್‌ ಮ್ಯಾನ್ ಹಾಡಿ ನಿವಾಸಿ ಬಸವ ಅವರಿಗೆ ಗುಂಡು ಹಾರಿಸಿರುವುದು ಖಂಡನೀಯ. ಬಸವ ಗಂಧದ ಮರ ಕಡಿದು ಸಾಗಿಸುತ್ತಿದ್ದ ಎಂಬ ಅರಣ್ಯ ಇಲಾಖೆಯ ಆರೋಪ ನಿರಾಧಾರ. ಆ ಜಾಗದ ಸುತ್ತಮುತ್ತ ಎಲ್ಲಿಯೂ ಗಂಧದ ಮರ ಬೆಳೆದಿಲ್ಲ. ಹೀಗಿದ್ದರೂ ಆತನ ಮೇಲೆ ಸುಳ್ಳು ಆರೋಪ ಹೊರಿಸಿ ಆತನ ಮೇಲೆಯೇ ಎಫ್ಐಆರ್ ದಾಖಲಿಸಿದ್ದಾರೆ. ನಾವು ದೂರು ನೀಡಿದರೆ ಸ್ವೀಕರಿಸುತ್ತಿಲ್ಲ. ಇದು ಏಕಮುಖದ ತನಿಖೆಯಾಗುತ್ತಿದೆ. ಎರಡು ಬದಿಯಿಂದ ತನಿಖೆಯಾಗಬೇಕಾದರೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧವೂ ಎಫ್ಐಆರ್ ದಾಖಲಾಗಬೇಕು. ಸಮಗ್ರವಾಗಿ ತನಿಖೆಯಾಗಬೇಕು'' ಎಂದು ಆಗ್ರಹಿಸಿದರು.

    ಏನಿದು ಘಟನೆ?

    ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್ ಜೇನು ಕುರುಬರ ಹಾಡಿ ನಿವಾಸಿ ಬಸವ ಎಂಬಾತ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಜೋಳ ಕಟಾವು ಮಾಡಿ, ಪಕ್ಕದ ಜಮೀನಿಗೆ ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಅರಣ್ಯ ಇಲಾಖೆ ವಾಚ್ ಮನ್ ಸುಬ್ರಮಣಿ ಸೇರಿ ಮೂವರಿಂದ ಕೊಲೆಗೆ ಯತ್ನ ಆರೋಪ ಕೇಳಿಬಂದಿದ್ದು, ತನ್ನ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾರೆಂದು ಗಾಯಾಳು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಬಸವ, ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಆದಿವಾಸಿಗಳ ಪರವಾಗಿ ಈ ಹಿಂದಿನಿಂದಲೂ ನಟ ಚೇತನ್ ಹೋರಾಡುತ್ತಲೇ ಬರುತ್ತಿದ್ದಾರೆ. ದಿಡ್ಡಳ್ಳಿ ಪ್ರತಿಭಟನೆಯಲ್ಲೂ ಅವರು ಸಕ್ರಿಯರಾಗಿ ಪಾಲ್ಗೊಂಡಿದ್ದರು.

    ಕೆಲವು ದಿನಗಳ ಹಿಂದಷ್ಟೆ ನಡೆದ ಹಂಸಲೇಖ ವಿವಾದದ ಸಂದರ್ಭದಲ್ಲಿಯೂ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಭೇಟಿಯಾಗಿದ್ದ ಚೇತನ್ ಅವರಿಗೆ ಬೆಂಬಲ ನೀಡಿದ್ದರು. ಹಂಸಲೇಖ ಅವರು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಆಗಮಿಸಿದ ದಿನ ಠಾಣೆಯ ಮುಂದೆ ಹಂಸಲೇಖಗೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನೆ ನಡೆಸಿದ್ದರು.

    English summary
    Forest department employee open fire on a tribal man in Piriyapattana Mysore district, Chetan Ahimsa said its intentional and demand probe.
    Thursday, December 2, 2021, 19:52
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X