For Quick Alerts
  ALLOW NOTIFICATIONS  
  For Daily Alerts

  ಬಿಜೆಪಿ ಶಾಸಕರೊಂದಿಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಬಿಎಸ್‌ವೈ

  |

  ಬಾಲಿವುಡ್‌ನ ವಿವಾದಾತ್ಮಕ ಸಿನಿಮಾ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಎಲ್ಲೆಡೆ ಹಲ್‌ಚಲ್ ಎಬ್ಬಿಸುತ್ತಿದೆ. ದೇಶದ ಹಲವು ಭಾಗಗಳಲ್ಲಿ ಈ ಸಿನಿಮಾಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಂತಯೇ ಕರ್ನಾಟಕದಲ್ಲಿಯೂ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬೇಜಾನ್ ಸದ್ದು ಮಾಡುತ್ತಿದೆ. ಈ ಮಧ್ಯೆ ಇಂದು(ಮಾರ್ಚ್ 15) ಕೆಲವು ಬಿಜೆಪಿ ಶಾಸಕರೊಂದಿಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ಬೆಂಗಳೂರಿನ ಮಂತ್ರಿಮಾಲ್‌ನಲ್ಲಿ ವೀಕ್ಷಿಸಿದ್ದಾರೆ.

  ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಮಾರ್ಚ್ 14 ರಂದು ಸದನದಲ್ಲಿ ಚರ್ಚೆಯಾಗಿತ್ತು. ವಿಧಾನಸಭೆ ಸಚಿವಾಲಯದಿಂದ ಈ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸಚಿವರು ಹಾಗೂ ಶಾಸಕರಿಗೆ ಈ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದರು. ಅದರಂತೆಯೇ ಇಂದು (ಮಾರ್ಚ್ 15) ಬೆಂಗಳೂರಿನ ಮಂತ್ರಿ ಮಾಲ್‌ನಲ್ಲಿ ಮಾಜಿ ಸಿ ಎಂ ಬಿಎಸ್ ಯಡಿಯೂರಪ್ಪ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಶಾಸಕರೊಂದಿಗೆ ಸೇರಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ವೀಕ್ಷಣೆ ಮಾಡಿದ್ದಾರೆ.

  'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡಲ್ಲ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ: ಕೊಟ್ಟ ಕಾರಣವೇನು?'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡಲ್ಲ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ: ಕೊಟ್ಟ ಕಾರಣವೇನು?

  ಸಿನಿಮಾ ನೋಡುತ್ತೇನೆ ಎಂದಿದ್ದ ಮಾಜಿ ಸಿ ಎಂ

  ವಿಧಾನಸಭೆ ಸಚಿವಾಲಯ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು. ಅಲ್ಲದೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಶಾಸಕರು ಹಾಗೂ ಸಚಿವರು ಸಿನಿಮಾ ವೀಕ್ಷಣೆಗೆ ಮಾಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದರು. ಆ ಬಳಿಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಿನಿಮಾವನ್ನು ನೋಡುವುದಾಗಿ ಹೇಳಿದ್ದರು. ಅದರಂತೆಯೇ ಇಂದು (ಮಾರ್ಚ್ 15) ಸಿನಿಮಾವನ್ನು ವೀಕ್ಷಿಸಿದ್ದಾರೆ.

  'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಮಾರಣಹೋಮದ ಘಟನೆಯನ್ನು ತೆರೆಮೇಲೆ ತಂದಿದೆ. ಈ ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ ಹಲವು ಮಂದಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ. ಮತ್ತೆ ಕೆಲವರು ಸಿನಿಮಾ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದರು. ಈ ಸಿನಿಮಾ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ವೀಕ್ಷಣೆ ಮಾಡಲು ಅವಕಾಶ ನೀಡಿಲಾಗಿದೆ. ಮತ್ತೆ ಕೆಲವೆಡೆ ಈ ಸಿನಿಮಾ ತೆರಿಗೆ ವಿನಾಯಿತಿಯನ್ನು ನೀಡಿದೆ. ಕರ್ನಾಟಕ ಸರ್ಕಾರ ಕೂಡ 'ದಿ ಕಾಶ್ಮೀರ್ ಫೈಲ್ಸ್‌'ಗೆ ತೆರಿಗೆ ವಿನಾಯಿತಿ ನೀಡಿದೆ.

  'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ: ಉಚಿತ ಶೋ ಘೋಷಿಸಿದ ಶಾಸಕ ಯತ್ನಾಳ್'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ: ಉಚಿತ ಶೋ ಘೋಷಿಸಿದ ಶಾಸಕ ಯತ್ನಾಳ್

  ಬಜೆಟ್ ಬಿಟ್ಟು ಸಿನಿಮಾ ಏಕೆ? ಕಾಂಗ್ರೆಸ್ ಗುಡುಗು

  ಶಾಸಕರಿಗೆ ಹಾಗೂ ಸಚಿವರಿಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ತೋರಿಸಲು ಮುಂದಾಗಿದ್ದಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ಸದನದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು. ವಿಧಾನ ಪರಿಷತ್‌ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸಿನಿಮಾ ವೀಕ್ಷಣೆ ಬಗ್ಗೆ ಪ್ರಕಟಣೆ ಹೊರಡಿಸಿದ್ದರು. ಈ ವೇಳೆ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಿನಿಮಾ ವೀಕ್ಷಣೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿದ್ದರು.

  Former CM BS Yediyurappa watched Controvercial movie The Kashmir files

  'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಚರ್ಚೆ ಮಾಡುತ್ತಿರುವುದು ಸರಿಯಲ್ಲ. ಬಜೆಟ್ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಸಿನಿಮಾ ಬಗ್ಗೆ ಯಾಕೆ ಚರ್ಚೆ ಎಂದು ಕಾಂಗ್ರೆಸ್ ನಾಯಕ ಚರ್ಚೆ ಮಾಡಿದ್ದರು. ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಕೂಡ ವಿರೋಧ ವ್ಯಕ್ತಪಡಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ನಿನ್ನೆ(ಮಾರ್ಚ್ 14) 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡುವುದಿಲ್ಲವೆಂದು ಹೇಳಿದ್ದರು.

  English summary
  Former CM BS Yediyurappa and BDA chairman S R Vishwanth and BJP MLA's watched Controvercial movie The Kashmir files.
  Wednesday, March 16, 2022, 9:46
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X