For Quick Alerts
  ALLOW NOTIFICATIONS  
  For Daily Alerts

  ಆಸ್ಟ್ರೇಲಿಯಾದಲ್ಲಿ ನಡೆದ ಭಾರತ vs ಪಾಕ್ ಪಂದ್ಯದಲ್ಲಿ ರಾರಾಜಿಸಿದ ಗಂಧದ ಗುಡಿ & ಘೋಸ್ಟ್ ಪೋಸ್ಟರ್

  |

  ಆಸ್ಟ್ರೇಲಿಯಾ ನೆಲದಲ್ಲಿ ಪ್ರಸ್ತುತ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ಸೂಪರ್‌ 12 ಹಂತದ ತನ್ನ ಚೊಚ್ಚಲ ಪಂದ್ಯದಲ್ಲಿಯೇ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 4 ವಿಕೆಟ್‍ಗಳ ಗೆಲುವು ಸಾಧಿಸುವುದರ ಮೂಲಕ ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

  ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ಮೆಲ್ಬೋರ್ನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯ ವೀಕ್ಷಿಸಲು ಮೈದಾನಕ್ಕೆ ತೆರಳಿದ್ದ ಕೆಲ ಕ್ರಿಕೆಟ್ ಪ್ರೇಮಿಗಳು ಪುನೀತ್ ರಾಜ್ ಕುಮಾರ್ ಅಭಿನಯದ ಮುಂದಿನ ಚಿತ್ರ ಗಂಧದ ಗುಡಿ ಹಾಗೂ ಶಿವರಾಜ್ ಕುಮಾರ್ ಅಭಿನಯದ ಮುಂದಿನ ಚಿತ್ರ ಘೋಸ್ಟ್ ಪೋಸ್ಟರ್ ಹಿಡಿದು ಜೈಕಾರ ಹಾಕಿದ್ದರು.

  ಹೀಗೆ ಅಪ್ಪು ಹಾಗೂ ಶಿವಣ್ಣ ಅಭಿನಯದ ಚಿತ್ರಗಳ ಪೋಸ್ಟರ್ ಹಿಡಿದು ಅಭಿಮಾನಿಗಳು ಸಂಭ್ರಮಿಸಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಫೋಟೋಗಳನ್ನು ಅಪ್ಪು ಹಾಗೂ ಶಿವರಾಜ್ ಕುಮಾರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

  ಇನ್ನು ಗಂಧದಗುಡಿ ಚಿತ್ರ ಇದೇ ತಿಂಗಳ 28ಕ್ಕೆ ಬಿಡುಗಡೆಗೊಳ್ಳಲಿದ್ದು ಕ್ಷಣಗಣನೆ ಆರಂಭಗೊಂಡಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಂತಿಮ ಚಿತ್ರವನ್ನು ಬೆಳ್ಳಿತೆರೆ ಮೇಲೆ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಮುಹೂರ್ತ ಇತ್ತೀಚಿಗಷ್ಟೆ ನಡೆದಿದ್ದು ಚಿತ್ರದ ಚಿತ್ರೀಕರಣ ಸಾಗುತ್ತಿದೆ. ಈ ಚಿತ್ರದಲ್ಲಿ ಶಿವಣ್ಣ ಅವರ ಲುಕ್ ಬಲು ವಿಭಿನ್ನವಾಗಿದ್ದು ನೀಲಿ ಕಂಗಳ ಶಿವಣ್ಣ ಅವರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

  English summary
  Gandhada Gudi and Ghost movie posters spotted in Melbourne ground during India vs Pakistan match
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X