'ಗಾಂಧಿ' ಚಿತ್ರದ ಜೊತೆ ಬೆಳ್ಳಿ ಸಿನಿಮಾ-ಬೆಳ್ಳಿ ಮಾತು
ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರತಿ ಶನಿವಾರದಂದು ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಈ ಶನಿವಾರ (ಆಗಸ್ಟ್ 15) ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಬೆಳ್ಳಿ ಸಿನಿಮಾ 'ಗಾಂಧಿ' ಚಲನಚಿತ್ರ ಪ್ರದರ್ಶನ ಹಾಗೂ ಚಿತ್ರದ ನಿರ್ದೇಶಕರ ಕುರಿತಂತೆ 'ಬೆಳ್ಳಿ ಮಾತು' ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ವಾರವು ಚಿತ್ರ ಪ್ರೇಮಿಗಳನ್ನು ಒಂದೆಡೆ ಕಲೆಹಾಕಿ ಪ್ರಬುದ್ಧ ಚಲನಚಿತ್ರ ಪ್ರೇಕ್ಷಕ ಹಾಗೂ ನಿರ್ಮಾಪಕರ ಹಂದರವನ್ನು ಕಟ್ಟುವುದು 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದ ಉದ್ದೇಶ.

'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಈ ವಾರದ ಕಾರ್ಯಕ್ರಮ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಗಸ್ಟ್ 15 ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅವರು ವಹಿಸಲಿದ್ದಾರೆ.
ಸಮಾರಂಭದಲ್ಲಿ 'ಗಾಂಧಿ' ಸ್ಮರಣೆ ಕುರಿತಂತೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೊ.ಶ್ರೀನಿವಾಸಯ್ಯ ಅವರು ಮಾತನಾಡಲಿದ್ದಾರೆ. ಜೊತೆಗೆ 'ಗಾಂಧಿ' ಚಲನಚಿತ್ರ ನಿರ್ದೇಶಕ ರಿಚರ್ಡ್ ಅಟೆನ್ ಬರೋ ಅವರ 'ಗಾಂಧಿ' ಚಿತ್ರದ ಕುರಿತು ಸಿನಿಮಾ ಲೇಖಕ ಜೋಗಿ ಅವರು ಮಾತನಾಡಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಬ್ ರಿಜಿಸ್ಟ್ರಾರ್ ಹೆಚ್.ಬಿ ದಿನೇಶ್ ತಿಳಿಸಿದ್ದಾರೆ.


Click it and Unblock the Notifications











