For Quick Alerts
  ALLOW NOTIFICATIONS  
  For Daily Alerts

  ನೋವುಗಳ ನಡುವೆ ಸಂಭ್ರಮ ಬೇಡ; ಅಭಿಮಾನಿಗಳಿಗೆ ನಟ ಗಣೇಶ್ ಪತ್ರ

  |

  ಸ್ಯಾಂಡಲ್ ವುಡ್ ನ ಗೋಲ್ಡನ್ ಸ್ಟಾರ್, ನಟ ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿ ಪತ್ರ ಬರೆದಿದ್ದಾರೆ. ಅಷ್ಟಕ್ಕೂ ಗಣೇಶ್ ದಿಢೀರ್ ಅಂತ ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇಕೆ?, ಗೋಲ್ಡನ್ ಸ್ಟಾರ್ ಹುಟ್ಟುಹಬ್ಬ ಸಮೀಪಿಸುತ್ತಿದೆ. ತನ್ನ ಜನ್ಮದಿನವನ್ನು ಹಬ್ಬದಂತೆ ಸಂಭ್ರಮಿಸಬೇಡಿ ಎಂದು ಗಣೇಶ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

  ಕೊರೊನಾ ಆರ್ಭಟದಿಂದ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು ಮತ್ತು ಗೆಳೆಯರು ಸಾವು ತುಂಬಾ ನೋವು ತರಿಸಿದೆ. ಈ ನೋವುಗಳ ನಡುವೆ ಸಂಭ್ರಮ ಸರಿಯಲ್ಲ, ಹಾಗಾಗಿ ಜನ್ಮ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಅಭಿಮಾನಿಗಳು ಪ್ರೀತಿಯಿಂದ ಹುಟ್ಟುಹಬ್ಬಕ್ಕೆ ಖರ್ಚು ಮಾಡುವ ಹಣವನ್ನು ಕೊರೊನಾ ಸಂಕಷ್ಟದಲ್ಲಿರುವ ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ.

  'ಗಿಮಿಕ್' ಚಿತ್ರದ ನಿರ್ಮಾಪಕ ದೀಪಕ್‌ ಸಾಮಿದೊರೈ ನಿಧನ'ಗಿಮಿಕ್' ಚಿತ್ರದ ನಿರ್ಮಾಪಕ ದೀಪಕ್‌ ಸಾಮಿದೊರೈ ನಿಧನ

  ಅಂದಹಾಗೆ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಜುಲೈ 2. ಇನ್ನೇನು 3 ದಿನಗಳು ಮಾತ್ರ ಬಾಕಿ ಇದೆ. ಆದರೆ ಈ ಬಾರಿಯ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದು, ಹುಟ್ಟುಹಬ್ಬದ ದಿನ ಹೊರಾಂಗಣ ಚಿತ್ರೀಕರಣದಲ್ಲಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಅಭಿಮಾನಿಗಳಿಗೆ ಬರೆದ ದೀರ್ಘ ಪತ್ರ ಹೀಗಿದೆ,

  "ಎಲ್ಲರಿಗೂ ನಿಮ್ಮ ಗಣೇಶ್ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರವಿದ್ದೋ, ಅರಿವಿಲ್ಲದೆಯೋ ಈ ಕೋವಿಡ್ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು ನೋವು ತರಿಸಿದೆ."

  "ಅದೆಷ್ಟೋ ಜನರ ಜೀವಗಳು ನಲುಗಿ ಹೋಗಿವೆ. ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲವೆಂದೆನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಚಿಸಿರುತ್ತೇನೆ. ಅಲ್ಲದೇ ಜನ್ಮದಿನದಂದು ನಾನು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬ ಆಚರಣೆಗೆ ನೀವು ಪ್ರೀತಿಯಿಂದ ತರುವ ಕೇಕ್, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೆ ಅದೇ ಖರ್ಚಿನಲ್ಲಿ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

  Ganesh requests to his fans not celebrate his birthday on July 2 due to corona
  ನೀನಾದೇನ ಹಾಡಿಗೆ ಧ್ವನಿಯಾದ ಕೊರಿಯನ್ ಬೆಡಗಿ | Filmibeat Kannada

  ಇನ್ನು ಗಣೇಶ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಸಖತ್, ತ್ರಿಬಲ್ ರೈಡಿಂಗ್ ಮತ್ತು ಗಾಳಿಪಟ-2 ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮೂರು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದ್ದು, ಮೂರು ಸಿನಿಮಾಗಳ ಚಿತ್ರೀಕರಣ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಮೊದಲು ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕು.

  English summary
  Golden Star Ganesh requests to his fans not celebrate his birthday on July 2 due to corona.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X