ಮಗಳ ನಂತರ ಗೋಲ್ಡನ್ ಸ್ಟಾರ್ ಮಗ ಚಿತ್ರರಂಗಕ್ಕೆ
Recommended Video

ಸ್ಟಾರ್ ನಟರ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡುವುದು ಸಾಮಾನ್ಯ. ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ ಯಜಮಾನ ಚಿತ್ರದ ಒಂದು ಹಾಡಿನಲ್ಲಿ ಮಿಂಚುವ ಮೂಲಕ ಅಪ್ಪನಂತೆ ಮಗ ಕೂಡ ಚಿತ್ರದಲ್ಲಿ ಖದರ್ ತೋರಿಸಿದ್ದರು.
ಈಗ ಮತ್ತೊರ್ವ ಸ್ಟಾರ್ ಪುತ್ರ ಸ್ಯಾಂಡಲ್ ವುಡ್ ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅದು ಮತ್ಯಾರು ಅಲ್ಲ ಗೋಲ್ಡನ್ ಸ್ಟಾರ್ ಗಣೇಶ್ ಮಗ ವಿಹಾನ್. ಮೊದಲ ಬಾರಿಗೆ ವಿಹಾನ್ ಕ್ಯಾಮರಾ ಮುಂದೆ ನಿಂತು ಪೋಸ್ ಕೊಟ್ಟಿದ್ದಾರೆ.
ಅಂದ್ಹಾಗೆ ವಿಹಾನ್ 'ಗೀತಾ' ಸಿನಿಮಾ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಿನಿಮಾ ಮೂಲಕವೇ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಈ ಮೊದಲು 'ಚಮಕ್' ಚಿತ್ರದ ಮೂಲಕ ಮಗಳನ್ನು ಚಿತ್ರರಂಗಕ್ಕೆ ಕರೆ ತಂದಿದ್ದರು ಗಣೇಶ್.

'ಗೀತಾ' ಚಿತ್ರದಲ್ಲಿ ವಿಹಾನ್ ಗೆಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೆ ವಿಹಾನ್ ಪಾತ್ರದ ಒಂದಿಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಮಗನ ಮೊದಲ ಚಿತ್ರದ ಬಗ್ಗೆ ಗೋಲ್ಡನ್ ಸ್ಟಾರ್ ಸಂತಸ ವ್ಯಕ್ತಪಡಿಸಿದ್ದಾರೆ.
'ಗೀತಾ' ವಿಜಯ್ ನಾಗೇಂದ್ರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಚಿತ್ರಕ್ಕೆ ಸೈಯದ್ ಸಲಾಂ ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಮಲಯಾಳಂ ನಟಿ ಪಾರ್ವತಿ ಅರುಣ್ ಕಾಣಿಸಿಕೊಳ್ಳುತ್ತಿದ್ದಾರೆ.


Click it and Unblock the Notifications











